ಕುಮಾರಸ್ವಾಮಿ ಕೇಸರಿ ಶಾಲು ಧರಿಸಿದ್ದಕ್ಕೆ ದೇವೇಗೌಡ ಬೇಸರ

ನವದೆಹಲಿ: ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದಿದ್ದ ಪ್ರತಿಭಟನೆ ವೇಳೆ ಜೆಡಿಎಸ್​ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಕೇಸರಿ ಶಾಲು ಧರಿಸಬಾರದಿತ್ತು ಎಂದು ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ಹೇಳಿದ್ದಾರೆ.
ದೆಹಲಿಯಲ್ಲಿ ಈ ಕುರಿತು ಮಾತನಾಡಿದ ಅವರು, ಕೇಸರಿ ಬದಲು ನಮ್ಮ ಪಕ್ಷ ಜೆಡಿಎಸ್‌ ಶಾಲನ್ನು ಧರಿಸಬಹುದಿತ್ತು. ನಾನು ಎಲ್ಲೇ ಹೋದರೂ ನಮ್ಮ ಪಕ್ಷದ ಶಾಲನ್ನು ಧರಿಸುತ್ತೇನೆ ಎಂದು ಹೇಳಿದ್ದಾರೆ.

ನಾಳೆ ನಾನು ಪ್ರಧಾನಿ ನರೇಂದ್ರ ಮೋದಿ ಜತೆಗೆ ಹೋದರೂ ನನ್ನ ಪಕ್ಷದ ಶಾಲು ಹಾಕುತ್ತೇನೆ. ಕುಮಾರಸ್ವಾಮಿ ಅವರಿಗೆ ಪ್ರತಿಭಟನೆಯ ವೇಳೆ ಯಾರೋ ಬಂದು ಕೇಸರಿ ಶಾಲನ್ನು ಹಾಕಿರಬಹುದು. ಆಯಾ ಸಂದರ್ಭಕ್ಕೆ ಹಾಕಿರಬಹುದು, ಇದಕ್ಕೆ ದೊಡ್ಡ ವ್ಯಾಖ್ಯಾನ ಮಾಡುವ ಅಗತ್ಯವಿಲ್ಲ ಎಂದರು.
ಸಂಸದ ಡಿ.ಕೆ ಸುರೇಶ ಅವರ ʻದಕ್ಷಿಣ ಭಾರತ ಪ್ರತ್ಯೇಕ ರಾಷ್ಟ್ರʼದ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಎಚ್.ಡಿ. ದೇವೇಗೌಡ ಅವರು, ಡಿ.ಕೆ. ಸುರೇಶ ಅವರು ಪ್ರತ್ಯೇಕ ರಾಷ್ಟ್ರದ ಬಗ್ಗೆ ಯಾವ ಉದ್ದೇಶದಲ್ಲಿ ಮಾತನಾಡಿದ್ದಾರೋ ಗೊತ್ತಿಲ್ಲ. ಈ ವಿಷಯದ ಬಗ್ಗೆ ನಾನು ಏನನ್ನೂ ಹೇಳುವುದಿಲ್ಲ. ಅವರು ವೈಯಕ್ತಿಕವಾಗಿ ಹೇಳಿರಬಹುದು. ಅದು ಕಾಂಗ್ರೆಸ್‌ ಪಕ್ಷದ ನಿರ್ಣಯ ಆಗಿರುವುದಿಲ್ಲ ಎಂದು ಎಚ್​.ಡಿ. ದೇವೇಗೌಡ ಹೇಳಿದರು.

ಪ್ರಮುಖ ಸುದ್ದಿ :-   ಬೆಳಗಾವಿ; ಟಿಕೆಟ್​ ತೋರಿಸು ಎಂದಿದ್ದಕ್ಕೆ ರೈಲಿನಲ್ಲಿ ಟಿಸಿ ಸೇರಿ ಐವರ ಮೇಲೆ ಮುಸುಕುಧಾರಿಯಿಂದ ಹಲ್ಲೆ, ಓರ್ವ ಸಾವು

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement