ರಾಜ್ಯದಲ್ಲಿ ಮತ್ತೆ ಬಿಯರ್ ದರ ಏರಿಕೆ

ಬೆಂಗಳೂರು : ರಾಜ್ಯದ ಬಜೆಟ್ ಹೊಸ್ತಿಲಲ್ಲೇ ರಾಜ್ಯ ಸರ್ಕಾರ ಬಿಯರ್ ಬೆಲೆ ಏರಿಕೆಯಲ್ಲಿ ಏರಿಕೆ ಮಾಡಿ ಆದೇಶ ಹೊರಡಿಸಿದೆ. ಹಾಗೂ ಇದು ಗುರುವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿದೆ.
ಬಿಯರ್ ಬಾಟಲಿ ಬೆಲೆಯಲ್ಲಿ 10 ರಿಂದ 15 ರೂಪಾಯಿವರೆಗೆ ಹೆಚ್ಚಳ ಮಾಡಲಾಗಿದೆ. ಇಂದಿನಿಂದಲೇ ಹೊಸ ದರ ಜಾರಿಗೆ ಬಂದಿದೆ.
ಬಿಯರ್ ಅಬಕಾರಿ ಸುಂಕ ಹೆಚ್ಚಳಕ್ಕೆ ಜನವರಿ 20ರಂದು ಸರ್ಕಾರ ಒಪ್ಪಿಗೆ ಸೂಚಿಸಿತ್ತು. ಈ ಪ್ರಕಾರ ಬಿಯರ್ ಬೆಲೆ ಹೆಚ್ಚಳ ಮಾಡಿ ರಾಜ್ಯ ಅಬಕಾರಿ ಇಲಾಖೆ ಆದೇಶ ಹೊರಡಿಸಿದೆ. ಅಬಕಾರಿ ಸುಂಕವನ್ನು 185% ರಿಂದ 195%ಗೆ ಏರಿಕೆಯಾಗಿದೆ. ಇದರಿಂದ ಕಳೆದ 6 ತಿಂಗಳ ಅಂತರದಲ್ಲಿ ಬಿಯರ್ ಬೆಲೆ ಸುಮಾರು 40 ರೂ.ಗಳಷ್ಟು ಹೆಚ್ಚಳವಾಗಿದೆ ಎಂದು ಮೂಲಗಳು ತಿಳಿಸಿವೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಗೋಕರ್ಣ ಮಹಾಗಣಪತಿ ದೇವರ ಸ್ಪರ್ಶ ದರ್ಶನಕ್ಕೆ ನಿರ್ಬಂಧ

ನಿಮ್ಮ ಕಾಮೆಂಟ್ ಬರೆಯಿರಿ

advertisement