‘ಹೈಕೋರ್ಟ್‌ಗೆ ಹೋಗಿ’: ಬಂಧನದ ವಿರುದ್ಧ ಹೇಮಂತ್ ಸೊರೇನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ

ನವದೆಹಲಿ: ಭೂ ವಂಚನೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.
ನಾವು ಮಧ್ಯಪ್ರವೇಶಿಸುವುದಿಲ್ಲ, ಹೈಕೋರ್ಟ್‌ಗೆ ಹೋಗಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಮೂರ್ತಿಗಳಾದ ಸಂಜೀವ ಖನ್ನಾ, ಎಂ.ಎಂ. ಸುಂದರೇಶ ಮತ್ತು ಬೇಲಾ ಎಂ ತ್ರಿವೇದಿ ಅವರನ್ನೊಳಗೊಂಡ ವಿಶೇಷ ಪೀಠವು 48 ವರ್ಷದ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕನಿಗೆ ಜಾರ್ಖಂಡ್ ಹೈಕೋರ್ಟ್‌ಗೆ ಹೋಗಲು ಹೇಳಿದೆ.
ಇದಕ್ಕೆ ಹೈಕೋರ್ಟ್‌ನಲ್ಲಿ ಏಕೆ ಅರ್ಜಿ ಸಲ್ಲಿಸಿಲ್ಲ ಎಂದು ಪೀಠ ಪ್ರಶ್ನಿಸಿತು.
“ನ್ಯಾಯಾಲಯಗಳು ಎಲ್ಲರಿಗೂ. ಉಚ್ಚ ನ್ಯಾಯಾಲಯಗಳು ಸಾಂವಿಧಾನಿಕ ನ್ಯಾಯಾಲಯಗಳು. ನಾವು ಒಬ್ಬ ವ್ಯಕ್ತಿಗೆ ಅನುಮತಿ ನೀಡಿದರೆ, ನಾವು ಎಲ್ಲರಿಗೂ ಅನುಮತಿ ನೀಡಬೇಕು” ಎಂದು ಸುಪ್ರೀಂ ಕೋರ್ಟ್ ಗಮನಿಸಿದೆ.

ತನಿಖಾ ಸಂಸ್ಥೆ ನೀಡಿರುವ ಸಮನ್ಸ್‌ಗಳನ್ನು ರದ್ದುಪಡಿಸುವಂತೆ ಮತ್ತು ಬಂಧನವನ್ನು ಅಕ್ರಮ ಎಂದು ಘೋಷಿಸುವಂತೆ ಕೋರಿ ಹೇಮಂತ್ ಸೊರೆನ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಹೇಮಂತ್ ಸೊರೇನ್ ಅವರನ್ನು ಬುಧವಾರ ತಡರಾತ್ರಿ ಬಂಧಿಸಲಾಗಿದೆ. ಅವರನ್ನು ಒಂದು ದಿನದ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದ್ದು, 10 ದಿನಗಳ ಕಸ್ಟಡಿಗೆ ಕೇಂದ್ರೀಯ ಸಂಸ್ಥೆಯ ಕೋರಿಕೆಯ ಕುರಿತು ಇಂದು ತೀರ್ಪು ನೀಡುವ ನಿರೀಕ್ಷೆಯಿದೆ.
ತನ್ನ ಅರ್ಜಿಯಲ್ಲಿ, ಹೇಮಂತ್ ಸೊರೇನ್ ಅವರು ಸುಪ್ರೀಂ ಕೋರ್ಟ್‌ನಲ್ಲಿ “ಸಂಸ್ಥೆಯು ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದೆ ಮತ್ತು ಪ್ರಜಾಸತ್ತಾತ್ಮಕವಾಗಿ ಚುನಾಯಿತ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ದುರುಪಯೋಗಪಡಿಸಿಕೊಂಡಿದೆ” ಎಂದು ವಾದಿಸಿದ್ದರು.

ಪ್ರಮುಖ ಸುದ್ದಿ :-   'ಪ್ರಿಯಾಂಕಾ ಗಾಂಧಿ ವಿರುದ್ಧ ಪಕ್ಷದಲ್ಲೇ ದೊಡ್ಡ ಪಿತೂರಿ...ಜೂನ್ 4ರ ನಂತರ ಕಾಂಗ್ರೆಸ್ ಅಣ್ಣ-ತಂಗಿ ಬಣಗಳಾಗಿ ವಿಭಜನೆ' : ಕಾಂಗ್ರೆಸ್‌ ಮಾಜಿ ನಾಯಕನ ಸ್ಫೋಟಕ ಹೇಳಿಕೆ

ಅವರು ತಮ್ಮ ಬಂಧನವನ್ನು “ಕಾನೂನುಬಾಹಿರ ಮತ್ತು ನ್ಯಾಯವ್ಯಾಪ್ತಿಯಿಲ್ಲದ್ದು ಎಂದು ಕರೆದರು, “ಇ.ಡಿ. ಕೇಂದ್ರ ಸರ್ಕಾರದ (ಆದೇಶ) ಅಡಿಯಲ್ಲಿ ನಿರ್ಲಜ್ಜವಾಗಿ ವರ್ತಿಸುತ್ತಿದೆ ಮತ್ತು ತಮ್ಮ ನೇತೃತ್ವದ ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ” ಎಂದು ಅವರು ಹೇಳಿದರು.
ಅವರು ₹ 600 ಕೋಟಿ ಭೂ ಹಗರಣ ಮತ್ತು ಅದರ ಆದಾಯದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ.
ಏತನ್ಮಧ್ಯೆ, ಜಾರ್ಖಂಡ್ ಮುಕ್ತಿ ಮೋರ್ಚಾದ ಹಿರಿಯ ನಾಯಕ ಚಂಪೈ ಸೊರೆನ್ ಅವರು ಇಂದು ಜಾರ್ಖಂಡ್‌ನ ಮುಂದಿನ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement