ಎಸ್.ಬಿ.ಐ.ಗೆ ಲಾಭದಲ್ಲಿ ಗಣನೀಯ ಕುಸಿತ

ನವದೆಹಲಿ : ಸಾರ್ವಜನಿಕ ವಲಯದ ಅತಿದೊಡ್ಡ ಬ್ಯಾಂಕ್ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ಬಿಐ) ಲಾಭದಲ್ಲಿ ಭಾರೀಕುಸಿತವಾಗಿದೆ. ಪ್ರಸಕ್ತ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದ ನಿವ್ವಳ ಲಾಭ ಶೇ.35ರಷ್ಟು ಕುಸಿತ ಕಂಡಿದೆ
ಮೂರನೇ ತ್ರೈಮಾಸಿಕದಲ್ಲಿ ಲಾಭವು 9,164 ಕೋಟಿ ರೂಪಾಯಿಗೆ ತಲುಪಿದೆ. ಕಳೆದ ಹಣಕಾಸು ವರ್ಷದ ಇದೇ ತ್ರೈಮಾಸಿಕದಲ್ಲಿ ಬ್ಯಾಂಕ್‌ನ ನಿವ್ವಳ ಲಾಭ 14,205 ಕೋಟಿ ರೂಪಾಯಿ ಇತ್ತು.
2023ರ ಡಿಸೆಂಬರ್‌ನಲ್ಲಿ ಪೂರ್ಣಗೊಂಡ ತ್ರೈಮಾಸಿಕದಲ್ಲಿ ಎಸ್‌ಬಿಐನ ಒಟ್ಟು ಆದಾಯ 1,18,193 ಕೋಟಿ ರೂಪಾಯಿಗೆ ಏರಿಕೆಯಾಗಿತ್ತು. ಕಳೆದ ಹಣಕಾಸು ವರ್ಷದ ಇದೇ ತ್ರೈಮಾಸಿಕದಲ್ಲಿ 98,084 ಕೋಟಿ ರೂಪಾಯಿ ಲಾಭ ಗಳಿಸಿತ್ತು.
ಈ ತ್ರೈಮಾಸಿಕದಲ್ಲಿ ಬ್ಯಾಂಕ್‌ನ ಬಡ್ಡಿ ಆದಾಯ 1,06,734 ಕೋಟಿ ರೂಪಾಯಿಗೆ ಏರಿಕೆಯಾಗಿದ್ದು, ಕಳೆದ ಹಣಕಾಸು ವರ್ಷದ ಇದೇ ತ್ರೈಮಾಸಿಕದಲ್ಲಿ 86,616 ಕೋಟಿ ರೂಪಾಯಿ ಇತ್ತು. 2023ರ ಡಿಸೆಂಬರ್‌ ಅಂತ್ಯದ ವೇಳೆಗೆ, ಬ್ಯಾಂಕಿನ ಎನ್‌ಪಿಎ(NPA) ಸಂಪೂರ್ಣ ಸಾಲದ 2.42 ಪ್ರತಿಶತದಷ್ಟು ಕಡಿಮೆಯಾಗಿದೆ. ವರ್ಷದ ಹಿಂದೆ ಇದು ಶೇ.3.14ರಷ್ಟಿತ್ತು. ಮೂರನೇ ತ್ರೈಮಾಸಿಕದ ಕೊನೆಯಲ್ಲಿ ನಿವ್ವಳ ಎನ್‌ಪಿಎ ಸಹ ಶೇ.0.64ಕ್ಕೆ ಇಳಿದಿದೆ. ಇದು ಕಳೆದ ವರ್ಷ ಶೇ.0.77ರಷ್ಟಿತ್ತು.

ಪ್ರಮುಖ ಸುದ್ದಿ :-   26/11ರ ಮುಂಬೈ ಭಯೋತ್ಪಾಕ ದಾಳಿ: ಹೇಮಂತ್ ಕರ್ಕರೆ ಕೊಂದಿದ್ದು ಉಗ್ರ ಕಸಬ್‌ ಅಲ್ಲ, ಕೊಂದಿದ್ದು ಆರ್‌ ಎಸ್‌ ಎಸ್ ನಂಟಿನ ಪೊಲೀಸ್‌ ಅಧಿಕಾರಿ ; ಕಾಂಗ್ರೆಸ್​ ನಾಯಕನ ವಿವಾದಿತ ಹೇಳಿಕೆ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement