ಚುನಾವಣೆ ವೇಳೆ ಗ್ಯಾರಂಟಿ ಭಾಗ್ಯಗಳ ಮೂಲಕ ಮತದಾರರಿಗೆ ಆಮಿಷ : ಚುನಾವಣೆ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು : ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆ ವೇಳೆ ಮತದಾರರಿಗೆ ಗ್ಯಾರಂಟಿ ರೂಪದಲ್ಲಿ ಆಮಿಷವೊಡ್ಡಲಾಗಿದ್ದು, ಅಂತಹ ಅಕ್ರಮಗಳನ್ನು ತಡೆಯುವಂತೆ ಸರ್ಕಾರಗಳು ಮತ್ತು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ಮತ್ತಿತರರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಗುರುವಾರ ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್‌ ಜಾರಿ ಮಾಡಿದೆ.
ಚುನಾವಣೆಗೂ ಮುನ್ನ ಮತ್ತು ನಂತರ ಭ್ರಷ್ಟಾಚಾರ ಚಟುವಟಿಕೆ ನಿರ್ಬಂಧಿಸಲು ನೀತಿ ಸಂಹಿತೆಯ ಜೊತೆ ಕಠಿಣವಾಗಿ ಜಾರಿಗೊಳಿಸಬಹುದಾದ ಮಾರ್ಗಸೂಚಿ ರೂಪಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ಕೋರಿ ನಿಖಿಲ್‌ ಕುಮಾರಸ್ವಾಮಿ, ಗೌತಮ ಗೌಡ,, ಪ್ರಸಾದ್‌ ಕೆ ಆರ್‌ ಮತ್ತು ಎ ಮಂಜುನಾಥ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪಿ. ಎಸ್. ದಿನೇಶಕುಮಾರ ಮತ್ತು ನ್ಯಾಯಮೂರ್ತಿ ಟಿ ಜಿ ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಪೀಠವು ಪ್ರತಿವಾದಿಗಳಾದ ಕೇಂದ್ರ ಕಾನೂನು ಇಲಾಖೆ, ಕೇಂದ್ರ ಚುನಾವಣಾ ಆಯೋಗ, ರಾಜ್ಯ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿದೆ.

ಪ್ರಮುಖ ಸುದ್ದಿ :-   ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ತಲೆದಂಡ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement