ಬಿಜೆಪಿಯ ಭೀಷ್ಮ ಎಲ್ ಕೆ ಅಡ್ವಾಣಿಗೆ ‘ಭಾರತ ರತ್ನ’ : ಪ್ರಧಾನಿ ಮೋದಿ ಘೋಷಣೆ

ನವದೆಹಲಿ: ಬಿಜೆಪಿ ಹಿರಿಯ ನಾಯಕ ಎಲ್‌.ಕೆ. ಅಡ್ವಾಣಿ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಘೋಷಿಸಿದ್ದಾರೆ.
ಈ ವಿಷಯವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ. ಎಲ್ ಕೆ ಅಡ್ವಾಣಿಯವರಿಗೆ ಭಾರತ ರತ್ನ ಪ್ರಶಸ್ತಿ ಗೌರವ ನೀಡುತ್ತಿರುವ ವಿಚಾರವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಬಹಳ ಸಂತಸವಾಗುತ್ತಿದೆ. ಈ ಕುರಿತು ಅವರೊಂದಿಗೆ ದೂರವಾಣಿ ಮೂಲಕ ಅವರಿಗೆ ನಾನೇ ಖುದ್ದಾಗಿ ತಿಳಿಸಿದ್ದೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮೂಲಕ ಹೇಳಿಕೊಂಡಿದ್ದಾರೆ.
ಅಯೋಧ್ಯೆ ರಾಮಮಂದಿರ ಉದ್ಘಾಟನೆಗೊಂಡ ಬೆನ್ನಲ್ಲೇ ಬಿಹಾರದ ಮಾಜಿ ಮುಖ್ಯಮಂತ್ರಿ ದಿವಂಗತ ಕರ್ಪೂರಿ ಠಾಕೂರ್ ಅವರಿಗೆ ಭಾರತ ರತ್ನ ಘೋಷಣೆ ಮಾಡಲಾಗಿತ್ತು. ಅದಾದ ಒಂದೇ ವಾರದಲ್ಲಿ ಅಡ್ವಾಣಿಯವರಿಗೆ ಭಾರತ ರತ್ನ  ಘೋಷಣೆಯಾಗಿದೆ.

ಬಿಜೆಪಿಯ ಭೀಷ್ಮ ಎಂದೇ ಕರೆಯಲ್ಪಡುತ್ತಿದ್ದ ಅಡ್ವಾಣಿ ಅವರು ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ 2002 ರಿಂದ 2004 ರವರೆಗೆ ಉಪಪ್ರಧಾನಿಯಾಗಿ ಸೇವೆ ಸಲ್ಲಿಸಿದರು. ಅದಕ್ಕೂ ಮೊದಲು ಕೇಂದ್ರ ಗೃಹ ಖಾತೆ ಸೇರಿದಂತೆ ಹಲವು ಸಚಿವಾಲಯಗಳ ಮುಖ್ಯಸ್ಥರಾಗಿದ್ದರು. 1970 ಮತ್ತು 2019 ರ ನಡುವೆ ಸಂಸತ್ತಿನ ಉಭಯ ಸದನಗಳ ಸದಸ್ಯರಾಗಿದ್ದರು.
ಅಡ್ವಾಣಿ ಅವರು 1980 ರಲ್ಲಿ ಭಾರತೀಯ ಜನತಾ ಪಕ್ಷದ ಪ್ರಾರಂಭದಿಂದಲೂ ಸುದೀರ್ಘ ಅವಧಿಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಸಮ್ಮಿಶ್ರ ಸರ್ಕಾರಗಳ ಮುಖ್ಯಸ್ಥರಾಗಿ 90 ರ ದಶಕದಲ್ಲಿ ಬಿಜೆಪಿ ಬೆಳವಣಿಗೆಯನ್ನು ರೂಪಿಸಿದ ಕೀರ್ತಿಯೂ ಅವರಿಗೆ ಸಲ್ಲುತ್ತದೆ. ಅವರು 2002 ರಿಂದ 2004 ರವರೆಗೆ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಸಂಪುಟದಲ್ಲಿ ಉಪಪ್ರಧಾನಿಯಾಗಿ ಸೇವೆ ಸಲ್ಲಿಸಿದರು.

ಪ್ರಮುಖ ಸುದ್ದಿ :-   ಗರ್ಭಧಾರಣೆ ಕುರಿತ ಪುಸ್ತಕದಲ್ಲಿ 'ಬೈಬಲ್' ಪದ ಬಳಕೆ: ನಟಿ ಕರೀನಾ ಕಪೂರಗೆ ಮಧ್ಯಪ್ರದೇಶ ಹೈಕೋರ್ಟ್ ನೋಟಿಸ್

“ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜನೀತಿಜ್ಞರಲ್ಲಿ ಅವರು ಒಬ್ಬರು. ಭಾರತದ ಅಭಿವೃದ್ಧಿಗೆ ಅವರ ಕೊಡುಗೆ ಅಪಾರ. ತಳಮಟ್ಟದಲ್ಲಿ ಕೆಲಸ ಮಾಡುವ ಮೂಲಕ ಪ್ರಾರಂಭವಾದ ಅವರ ಜೀವನ ಪಯಣವು ಉಪಪ್ರಧಾನಿಯಾಗಿ ದೇಶಕ್ಕೆ ಸೇವೆ ಸಲ್ಲಿಸುವವರೆಗೆ ನಡೆದು ಬಂತು. ಅವರು ನಮ್ಮ ಗೃಹ ಸಚಿವರಾಗಿ, ಐ&ಬಿ ಸಚಿವರಾಗಿಯೂ ಸೇವೆ ಸಲ್ಲಿಸಿದರು. ಅವರ ಸಂಸದೀಯ ನಡವಳಿಕೆಗಳು ಯಾವಾಗಲೂ ಆದರ್ಶಪ್ರಾಯವಾಗಿದ್ದು, ಶ್ರೀಮಂತ ಒಳನೋಟಗಳಿಂದ ತುಂಬಿರುತ್ತಿದ್ದವು,” ಎಂದು   ಪ್ರಧಾನಿ ಮೋದಿ  ಹೇಳಿದ್ದಾರೆ.

ಸಾರ್ವಜನಿಕ ಜೀವನದಲ್ಲಿ ಅಡ್ವಾಣಿ ಜಿಯವರ ದಶಕಗಳ ಸುದೀರ್ಘ ಸೇವೆಯು ಪಾರದರ್ಶಕತೆ ಮತ್ತು ಸಮಗ್ರತೆಗೆ ಅಚಲವಾದ ಬದ್ಧತೆಯಿಂದ ಗುರುತಿಸಲ್ಪಟ್ಟಿದೆ, ರಾಜಕೀಯ ನೀತಿಶಾಸ್ತ್ರದಲ್ಲಿ ಅನುಕರಣೀಯ ಮಾನದಂಡವಾಗಿದೆ. ಅವರು ರಾಷ್ಟ್ರೀಯ ಏಕತೆ ಮತ್ತು ಸಾಂಸ್ಕೃತಿಕ ಪುನರುತ್ಥಾನದ ಕಡೆಗೆ ಅಪ್ರತಿಮ ಪ್ರಯತ್ನಗಳನ್ನು ಮಾಡಿದ್ದಾರೆ” ಎಂದು ಮೋದಿ ಹೇಳಿದ್ದಾರೆ.
ಧೀಮಂತ ನಾಯಕನಿಗೆ ಭಾರತ ರತ್ನ ನೀಡಿರುವುದು ನನಗೆ ಅತ್ಯಂತ ಭಾವನಾತ್ಮಕ ಕ್ಷಣವಾಗಿದೆ ಎಂದು ಪ್ರಧಾನಿ ಹೇಳಿದರು.

ಪ್ರಮುಖ ಸುದ್ದಿ :-   ತಾಯಿ, ಹೆಂಡತಿ, ಮೂವರು ಮಕ್ಕಳನ್ನು ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ...

 

 

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement