ಕಾಗವಾಡ : ಟ್ರ್ಯಾಕ್ಟರ್‌ ಟೇಲರ್‌ ಪಲ್ಟಿ ; ನಾಲ್ವರು ಪಾದಚಾರಿ ಮಹಿಳೆಯರು ಸಾವು

ಬೆಳಗಾವಿ : ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದ ಬಳಿ ಭಾನುವಾರ ಕಬ್ಬು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್‌ ಟೇಲರ್ ಪಲ್ಟಿಯಾಗಿ ಅದರಡಿ ಸಿಲುಕಿ ನಾಲ್ವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, ಮತ್ತೊಬ್ಬರು ಆಸ್ಪತ್ರೆ ಒಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಮೃತರನ್ನು ಮಾಲಾಬಾಯಿ ರವಸಾಬ್ ಐನಾಪುರೆ (61), ಚಂಪಾ ಲಕ್ಕಪ್ಪ ತಳಕಟ್ಟಿ (50), ಭಾರತಿ ವಡ್ರಾಳೆ (40) ಹಾಗೂ ಶೇಕೂ ನರಸಾಯಿ (45) ಎಂದು ಗುರುತಿಸಲಾಗಿದೆ.

ನಾಲ್ವರು ಮಹಿಳೆಯರು ಕೃಷಿ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದರು. ಶೇಡಬಾಳ ಗ್ರಾಮದ ಸಮೀಪ ಜಮಖಂಡಿ-ಮೀರಜ್ ರಸ್ತೆಯಲ್ಲಿ ಬರುವಾಗ ಟ್ರ್ಯಾಕ್ಟರ್ ಟೇಲರ್ ಚಕ್ರ ಕಟ್ಟಾಗಿ, ಪಾದಾಚಾರಿಗಳ ಮೇಲೆ ಬಿದ್ದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ.. ಇದರ ಪರಿಣಾಮ ಗಂಭೀರ ಗಾಯಗೊಂಡ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸುದ್ದಿ ತಿಳಿದು ಕಾಗವಾಡ ಶಾಸಕ ರಾಜು ಕಾಗೆ ಭೇಟಿ ನೀಡಿ ಮೃತರ ಕುಟುಂಸ್ಥರಿಗೆ ಸಾಂತ್ವನ ಹೇಳಿದರು. ಕಾಗವಾಡ ಪೊಲೀಸರು ಸ್ಥಳಕ್ಕೆ ಆಗಮಿಸಿ ನಾಲ್ವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದ್ದಾರೆ.

ಪ್ರಮುಖ ಸುದ್ದಿ :-   ಜಾತ್ರಾ ಮಹೋತ್ಸವದ ವೇಳೆ ರಥದ ಚಕ್ರದಡಿ ಸಿಲುಕಿ ಇಬ್ಬರು ಸಾವು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement