ಜೀಪ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಸ್ಥಳದಲ್ಲೇ ಇಬ್ಬರು ಸಾವು

ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನ ಗರ್ಲಗುಂಜಿ ರಸ್ತೆಯಲ್ಲಿ ಸಣ್ಣ ಹೊಸೂರ ಬಳಿ ಜೀಪ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಮೃತರನ್ನು ಬೇಕವಾಡ ಗ್ರಾಮದ ರಾಮಲಿಂಗ ಮುತಗೇಕರ ಮತ್ತು ಹನುಮಂತ ಪಾಟೀಲ (19) ಎಂದು ಗುರುತಿಸಲಾಗಿದೆ. ನಂದಿಹಾಳ ಗ್ರಾಮಕ್ಕೆ ಸೈನಿಕ ತರಬೇತಿ ಪಡೆಯಲು ಇವರು ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಮೃತ ಯುವಕರಿಬ್ಬರೂ ಬೇಕ್ವಾಡ ಗ್ರಾಮದ ನಿವಾಸಿಗಳಾಗಿದ್ದಾರೆ.
ಸ್ಥಳಕ್ಕೆ ಖಾನಾಪುರ ಶಾಸಕ ವಿಠ್ಠಲ ಹಲಗೇಕರ ಹಾಗೂ ಖಾನಾಪುರ ಪೊಲೀಸರು ಭೇಟಿ ನೀಡಿದ್ದಾರೆ. ಖಾನಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

ನಿಮ್ಮ ಕಾಮೆಂಟ್ ಬರೆಯಿರಿ

advertisement