ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ; ಆರೋಪಿ ಖುಲಾಸೆ ಪ್ರಶ್ನಿಸಿದ ಸಿಬಿಐ: ಹೈಕೋರ್ಟ್‌ ನಿಂದ ಆರೋಪಿಗೆ ನೋಟಿಸ್‌ ಜಾರಿ

ಬೆಂಗಳೂರು: ವಿಶೇಷ ನ್ಯಾಯಾಲಯವು ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿದ್ದನ್ನು ಬದಿಗೆ ಸರಿಸುವಂತೆ ಕೋರಿ ಕೇಂದ್ರೀಯ ತನಿಖಾ ದಳವು (ಸಿಬಿಐ) ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸಂತೋಷ ರಾವ್‌ಗೆ ಕರ್ನಾಟಕ ಹೈಕೋರ್ಟ್‌ ಈಚೆಗೆ ನೋಟಿಸ್‌ ಜಾರಿಗೊಳಿಸಿದೆ.
ಸೌಜನ್ಯ ಕೊಲೆ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯವು ಆರೋಪಿ ಸಂತೋಷ ರಾವ್‌ ಅವರನ್ನು 2023ರ ಜೂನ್‌ 16ರಂದು ಖುಲಾಸೆಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಶ್ರೀನಿವಾಸ ಹರೀಶಕುಮಾರ ಮತ್ತು ವಿಜಯಕುಮಾರ್‌ ಎ. ಪಾಟೀಲ ಅವರ ನೇತೃತ್ವದ ವಿಭಾಗೀಯ ಪೀಠವು ನೋಟಿಸ್‌ ಜಾರಿ ಮಾಡಿದೆ.

2012ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಕೊಲೆ ಮತ್ತು ಅತ್ಯಾಚಾರ ನಡೆದಿತ್ತು. ಪ್ರಕರಣವನ್ನು ಮೊದಲಿಗೆ ಬೆಳ್ತಂಗಡಿ ಠಾಣಾ ಪೊಲೀಸರು ತನಿಖೆ ನಡೆಸಿದ್ದರು. ಬಳಿಕ ತನಿಖೆಯನ್ನು ಸಿಐಡಿಗೆ ವಹಿಸಲಾಗಿತ್ತು. 2013ರ ನವೆಂಬರ್‌ 6ರಂದು ಸರ್ಕಾರವು ತನಿಖೆಯನ್ನು ಸಿಬಿಐಗೆ ವಹಿಸಿತ್ತು. ತನಿಖಾಧಿಕಾರಿಗಳು ಕಾರ್ಕಳ ಮೂಲದ ಸಂತೋಷ ರಾವ್ ಎಂಬವನನ್ನು ಆರೋಪಿಯಾಗಿ ಗುರುತಿಸಿದ್ದರು. ಪ್ರಕರಣದ ವಿಚಾರಣೆಯ ನಂತರ ಸಿಬಿಐ ವಿಶೇಷ ನ್ಯಾಯಾಲಯವು 2023ರ ಜುಲೈ 16ರಂದು ಆರೋಪಿಯನ್ನು ಖುಲಾಸೆಗೊಳಿಸಿತ್ತು.

ಪ್ರಮುಖ ಸುದ್ದಿ :-   ಕುಮಟಾ : ‘ರಜತ ಸಂಭ್ರಮ ಸೌರಭ’ ಕಾರ್ಯಕ್ರಮದಲ್ಲಿ ಪಂ.ಗಣಪತಿ ಭಟ್ಟ ಹಾಸಣಗಿಗೆ ʼಸೌರಭ ರಾಷ್ಟ್ರೀಯ ಸಮ್ಮಾನ್‌ʼ ಪ್ರದಾನ

ಮರು ತನಿಖೆಗೆ ಆದೇಶಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಲಾಗಿತ್ತು.
ಇದಕ್ಕೆ ಪ್ರತಿಕ್ರಿಯಿಸಿದ್ದ ಪೀಠವು ಪ್ರಕರಣದಲ್ಲಿ ಸರ್ಕಾರ, ಮೂಲ ದೂರುದಾರರು ಅಥವಾ ಸಂತ್ರಸ್ತ ಕುಟುಂಬವು ಆರೋಪಿಯನ್ನು ದೋಷಮುಕ್ತಗೊಳಿಸಿದ ವಿಚಾರಣಾಧೀನ ನ್ಯಾಯಾಲಯದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಹೇಳಿತ್ತು.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement