ಪ್ರಜಾಪ್ರಭುತ್ವವನ್ನು ಈ ರೀತಿ ಕಗ್ಗೊಲೆ ಮಾಡಲು ಬಿಡುವುದಿಲ್ಲ: ಚಂಡೀಗಢ ಮೇಯರ್ ಚುನಾವಣೆ ಬಗ್ಗೆ ಸುಪ್ರೀಂ ಕೋರ್ಟ್‌ ಸಿಡಿಮಿಡಿ

ನವದೆಹಲಿ: ಚಂಡೀಗಢ ಮಹಾನಗರ ಪಾಲಿಕೆಯ ಮೇಯರ್‌ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವ ರೀತಿಯಲ್ಲಿ ಮತಪತ್ರವನ್ನು ವಿರೂಪಗೊಳಿಸಿದ ಚುನಾವಣಾಧಿಕಾರಿಯನ್ನು ಕಾನೂನುರೀತ್ಯಾ ವಿಚಾರಣೆಗೆ ಒಳಪಡಿಸಬೇಕು ಎಂದು ಸುಪ್ರೀಂ ಕೋರ್ಟ್‌ ಸೋಮವಾರ ಹೇಳಿದೆ. ಚುನಾವಣಾಧಿಕಾರಿಯು ಮತಪತ್ರ ವಿರೂಪಗೊಳಿಸುವುದನ್ನು ವೀಡಿಯೊದಲ್ಲಿ ಸ್ಪಷ್ಟವಾಗಿ ಕಾಣಬಹುದಾಗಿದೆ ಎಂದು ನ್ಯಾಯಾಲಯ ವಿಚಾರಣೆ ವೇಳೆ ಹೇಳಿತು. ಮೇಯರ್ ಚುನಾವಣೆಯಲ್ಲಿ ಸೋತ ಆಮ್ ಆದ್ಮಿ ಪಕ್ಷದ (ಎಎಪಿ) … Continued

ಜ್ಞಾನವಾಪಿ ಮಸೀದಿ ಮುಚ್ಚಿದ ನೆಲಮಾಳಿಗೆಗಳ ಎಎಸ್ಐ ಸಮೀಕ್ಷೆಗೆ ಅವಕಾಶ ನೀಡಿ : ವಾರಾಣಸಿ ನ್ಯಾಯಾಲಯಕ್ಕೆ ಹಿಂದೂ ದಾವೆದಾರರ ಮನವಿ

ವಾರಾಣಸಿ : ಜ್ಞಾನವಾಪಿ ಮಸೀದಿಯ ಆವರಣದಲ್ಲಿರುವ ಹಾಗೂ ಈ ಹಿಂದೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್ಐ) ಸಮೀಕ್ಷೆ ವ್ಯಾಪ್ತಿಗೆ ಒಳಪಡದ ನೆಲಮಾಳಿಗೆಗಳ ಸಮೀಕ್ಷೆಯನ್ನು ನಡೆಸಬೇಕೆಂದು ಕೋರಿ ವಾರಾಣಸಿಯ ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದೆ. 2022ರ ಶೃಂಗಾರ ಗೌರಿ ಪೂಜೆ ದಾವೆಯಲ್ಲಿ ಮೊದಲ ದಾವೆದಾರೆಯಾಗಿರುವ ರಾಖಿ ಸಿಂಗ್ ಈ ಕುರಿತ ಅರ್ಜಿ ಸಲ್ಲಿಸಿದ್ದಾರೆ. ಜ್ಞಾನವಾಪಿ ಆವರಣದ … Continued

ʼಭಾರತೀಯರು ಸೋಮಾರಿಗಳು, ಕಡಿಮೆ ಬುದ್ಧಿವಂತರೆಂದು ನೆಹರೂ ಭಾವಿಸಿದ್ರು, ಇಂದಿರಾ ಗಾಂಧಿ ಇದಕ್ಕಿಂತ ಭಿನ್ನವಾಗಿ ಯೋಚಿಸಲಿಲ್ಲ’: ಪ್ರಧಾನಿ ಮೋದಿ

ನವದೆಹಲಿ: ಲೋಕಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಜವಾಹರಲಾಲ ನೆಹರೂ ಅವರು ಅಮೆರಿಕ ಮತ್ತು ಚೀನಾದವರಿಗೆ ಹೋಲಿಸಿದರೆ ಭಾರತೀಯರು ಸೋಮಾರಿಗಳು ಮತ್ತು ಕಡಿಮೆ ಬುದ್ಧಿವಂತಿಕೆಯುಳ್ಳವರು ಎಂದು ಭಾವಿಸಿದ್ದರು ಎಂದು ಹೇಳಿದ್ದಾರೆ. ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ‘ಧನ್ಯವಾದಗಳ ನಿರ್ಣಯ’ಕ್ಕೆ ನೀಡಿದ ಉತ್ತರದಲ್ಲಿ, ಪ್ರಧಾನಿ ಮೋದಿ ಸುಮಾರು 2 ಗಂಟೆಗಳ ತಮ್ಮ ಭಾಷಣದಲ್ಲಿ, … Continued

ಬಜೆಟ್‌ ಅಧಿವೇಶನದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಹಣ ಬಿಡುಗಡೆ ಮಾಡದಿದ್ರೆ ಉಸ್ತುವಾರಿ ಸಚಿವರ ಕಚೇರಿ ಮುಂದೆಯೇ ಆಮರಣಾಂತ ಉಪವಾಸ : ಸರ್ಕಾರಕ್ಕೆ ಅನಂತಮೂರ್ತಿ ಹೆಗಡೆ ಎಚ್ಚರಿಕೆ

 ಕುಮಟಾ : ಭೌಗೋಳಿಕ ಪರಿಸ್ಥಿತಿ ಹಾಗೂ ಜಿಲ್ಲೆಯ ವಿಸ್ತಾರ ಗಮನಿಸಿದರೆ ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ತುರ್ತು ಅಗತ್ಯವಿದ್ದು, ಒಂದು ವೇಳೆ ಫೆಬ್ರವರಿ ೧೬ರಿಂದ ನಡೆಯುವ ಬಜೆಟ್ ಅಧಿವೇಶನದಲ್ಲಿ ನಮ್ಮ ಜಿಲ್ಲೆಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಹಣ ಬಿಡುಗಡೆ ಮಾಡದಿದ್ದರೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯರ ಕಚೇರಿ ಮುಂದೆ ಕುಳಿತು ಆಮರಣಾಂತ … Continued

ಯುಪಿಎ ಸರ್ಕಾರ V/S ಮೋದಿ ಸರ್ಕಾರ : ಕೇಂದ್ರದ ಅನುದಾನದ ಲೆಕ್ಕ ನೀಡಿ ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಬಿಜೆಪಿ

ಬೆಂಗಳೂರು: ತೆರಿಗೆ ರೂಪದಲ್ಲಿ ಕರ್ನಾಟಕದಿಂದ ಹಣ ಸಂಗ್ರಹವಾದರೂ ಮೋದಿ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡಿದೆ ಹಣ ನೀಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸುದ್ದಿಗೋಷ್ಠಿಯಲ್ಲಿ ಆರೋಪಿದ ಬೆನ್ನಲ್ಲೇ ರಾಜ್ಯ ಬಿಜೆಪಿ ತಿರುಗೇಟು ನೀಡಿದೆ. ಕಾಂಗ್ರೆಸ್‌ ಸರ್ಕಾರ ತನ್ನ ವೈಪಲ್ಯ ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಮುಂದಾಗಿದೆ ಎಂದು ರಾಜ್ಯ ಬಿಜೆಪಿ … Continued

ತೆರಿಗೆ ಹಂಚಿಕೆ ಕಡಿತದಿಂದ ಕರ್ನಾಟಕಕ್ಕೆ 62 ಸಾವಿರ ಕೋಟಿಗೂ ಹೆಚ್ಚು ನಷ್ಟ: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ರಾಜ್ಯದಿಂದ 4.30 ಲಕ್ಷ ಕೋಟಿ ರೂ.ಗಳಷ್ಟು ತೆರಿಗೆ ಸಂಗ್ರಹವಾಗುತ್ತಿದೆ. ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ದೇಶದಲ್ಲಿ 2ನೇ ಸ್ಥಾನದಲ್ಲಿದೆ. ಆದರೂ ನಮಗೆ ತೆರಿಗೆ ಹಣ ಹಂಚಿಕೆ ಕಡಿತ ಮಾಡಿ ಮೋಸಲ ಮಾಡಲಾಗುತ್ತಿದೆ. ಕಳೆದ ಐದು ವರ್ಷಗಳಲ್ಲಿ ಕರ್ನಾಟಕಕ್ಕೆ 62,098 ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ನಷ್ಟವಾಗಿದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಕೇಂದ್ರದ ವಿರುದ್ಧ ವಾಗ್ದಾಳಿ … Continued

ತಂದೆಯ ಫೋನ್-ಬ್ಯಾಗ್‌ ಕದ್ದ ಕಳ್ಳನನ್ನು ʼಗೂಗಲ್ ಮ್ಯಾಪ್‌ʼ ಸಹಾಯದಿಂದ ಹಿಡಿದ ಮಗ..! : ಅದು ಹೇಗಾಯ್ತು ಎಂಬುದು ಇಲ್ಲಿದೆ..

ಒಂದೆಡೆ, ಜನರು ಕುರುಡಾಗಿ ಗೂಗಲ್‌ ಮ್ಯಾಪ್‌ (Google Map) ಅನುಸರಿಸಿ ಅಪಾಯಕ್ಕೆ ಸಿಲುಕಿದ್ದನ್ನು ಆಗಾಗ್ಗೆ ಕೇಳುತ್ತೇವೆ, ಕೆಲವೊಮ್ಮೆ ಅದನ್ನು ಅನುಸಿರಿಸಿ ದುರದೃಷ್ಟಕರ ಅಪಘಾತಗಳಿಗೆ ಕಾರಣವಾದ ಘಟನೆಗಳೂ ವರದಿಯಾಗಿವೆ. ಆದರೆ ಈ ಘಟನೆಯಲ್ಲಿ ಜಿಪಿಎಸ್‌ (GPS) ‘ಸೂಪರ್‌ ಹೀರೋ’ ಆಗಿ ಕಳ್ಳನನ್ನು ಹಿಡಿಯಲು ನೆರವಾದ ಘಟನೆ ತಮಿಳುನಾಡಿನಲ್ಲಿ ವರದಿಯಾಗಿದೆ. ಈ ನಿರ್ದಿಷ್ಟ ಘಟನೆಯಲ್ಲಿ, ವ್ಯಕ್ತಿಯೊಬ್ಬ ತನ್ನ ತಂದೆಯ … Continued

ವೀಡಿಯೊ..| ಆರೋಪಿಗಳನ್ನು ಕೋರ್ಟ್‌ಗೆ ಕರೆದೊಯ್ಯುವಾಗ ಪೆಟ್ರೋಲ್‌ ಖಾಲಿ : ಆರೋಪಿಗಳಿಂದ ಅರ್ಧ ಕಿಮೀ ವಾಹನ ತಳ್ಳಿಸಿದ ಪೊಲೀಸರು…!

ಒಂದು ವಿಲಕ್ಷಣ ಘಟನೆಯಲ್ಲಿ, ವಾಹನದಲ್ಲಿ ಇಂಧನ ಖಾಲಿಯಾದ ನಂತರ ಬಿಹಾರದ ಭಾಗಲ್ಪುರ ಜಿಲ್ಲೆಯಲ್ಲಿ ನಾಲ್ವರು ಆರೋಪಿಗಳು ಪೊಲೀಸ್ ವ್ಯಾನ್ ಅನ್ನು ನ್ಯಾಯಾಲಯದ ವರೆಗೂ ತಳ್ಳಿದ್ದಾರೆ ಎಂದು ವರದಿಯಾಗಿದೆ. ಕೈದಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಕರೆದೊಯ್ಯುತ್ತಿದ್ದಾಗ ವಾಹನದಲ್ಲಿ ಇಂಧನ ಖಾಲಿಯಾಗಿದೆ ಎಂದು ವರದಿಗಳು ತಿಳಿಸಿವೆ. ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆಗಿದ್ದು, ವೀಡಿಯೊದಲ್ಲಿ, ನಾಲ್ವರು ಆರೋಪಿಗಳು  … Continued

ಬುರ್ಖಾ ಧರಿಸಿ ಬಂದು ಮನೆಯಲ್ಲಿ ತಂಗಿಯ ಮದುವೆಗೆಂದು ಇಟ್ಟಿದ್ದ ಆಭರಣ ದೋಚಿದ ಅಕ್ಕ..!

ನವದೆಹಲಿ: ತನ್ನ ತಂಗಿ ಬಗ್ಗೆಯೇ ಅಸೂಯೆ ಪಟ್ಟ ಸಹೋದರಿಯೊಬ್ಬಳು ಆಕೆಯ ಮದುವೆಗೆಂದು ಸಂಗ್ರಹಿಸಿಟ್ಟಿದ್ದ ಚಿನ್ನಾಭರಣ ಹಾಗೂ ಹಣವನ್ನು ದೋಚಿರುವ ಘಟನೆಯೊಂದು ದೆಹಲಿಯ ಉತ್ತಮ್ ನಗರದಲ್ಲಿ ನಡೆದಿದೆ. ದೆಹಲಿಯ ಉತ್ತಮ್ ನಗರದ ಸೇವಕ್ ಪಾರ್ಕ್‌ನಲ್ಲಿರುವ ತನ್ನ ಮನೆಯಲ್ಲಿ ಹಣ ಹಾಗೂ ಚಿನ್ನಾಭರಣಗಳು ನಾಪತ್ತೆಯಾಗಿದೆ ಎಂದು ಜನವರಿ 30 ರಂದು ಮನೆಯವರು ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಎಫ್ಐಆರ್ … Continued

ಮಥುರಾದಲ್ಲಿ ಕೃಷ್ಣ ದೇವಸ್ಥಾನ ಕೆಡವಿ ಮಸೀದಿ ನಿರ್ಮಾಣ : ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ಪ್ರಶ್ನೆಗೆ ಪುರಾತತ್ವ ಸರ್ವೇಕ್ಷಣಾ ಇಲಾಖೆ ಉತ್ತರ

ನವದೆಹಲಿ: ಮಥುರಾದಲ್ಲಿ ಕೃಷ್ಣ ದೇವಸ್ಥಾನವನ್ನು (Krishna Janmabhoomi in Mathura) ಕೆಡವಿ ಮಸೀದಿ ನಿರ್ಮಾಣ ಮಾಡಲಾಗಿದೆ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ಮಾಹಿತಿ ನೀಡಿದೆ.. ಉತ್ತರ ಪ್ರದೇಶದ ಮೈನ್‌ಪುರಿ ನಿವಾಸಿ ಅಜಯ ಪ್ರತಾಯ ಸಿಂಗ್ ಅವರು ಮಾಹಿತಿ ಹಕ್ಕು ಕಾಯ್ದೆ (RTI) ಅಡಿ ಕೇಳಿದ ಪ್ರಶ್ನೆಗೆ ಎಎಸ್‌ಐ ಉತ್ತರ ನೀಡಿದೆ. ಅದು 1670 … Continued