ಯುಪಿಎ ಸರ್ಕಾರ V/S ಮೋದಿ ಸರ್ಕಾರ : ಕೇಂದ್ರದ ಅನುದಾನದ ಲೆಕ್ಕ ನೀಡಿ ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಬಿಜೆಪಿ

ಬೆಂಗಳೂರು: ತೆರಿಗೆ ರೂಪದಲ್ಲಿ ಕರ್ನಾಟಕದಿಂದ ಹಣ ಸಂಗ್ರಹವಾದರೂ ಮೋದಿ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡಿದೆ ಹಣ ನೀಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸುದ್ದಿಗೋಷ್ಠಿಯಲ್ಲಿ ಆರೋಪಿದ ಬೆನ್ನಲ್ಲೇ ರಾಜ್ಯ ಬಿಜೆಪಿ ತಿರುಗೇಟು ನೀಡಿದೆ.
ಕಾಂಗ್ರೆಸ್‌ ಸರ್ಕಾರ ತನ್ನ ವೈಪಲ್ಯ ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಮುಂದಾಗಿದೆ ಎಂದು ರಾಜ್ಯ ಬಿಜೆಪಿ (BJP Karnataka) ಆರೋಪಿಸಿದೆ. ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಜನರ ಗಮನ ಬೇರೆಡೆಗೆ ಸೆಳೆಯಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ನಡೆಸುತ್ತಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.
ಈ ಬಗ್ಗೆ ಟ್ವೀಟ್‌ ಮಾಡಿರುವ ಕರ್ನಾಟಕ ಬಿಜೆಪಿ, ಈ ಹಿಂದೆ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರಕ್ಕಿಂತಲೂ ಹೆಚ್ಚಿನ ಧನಸಹಾಯವನ್ನು ನರೇಂದ್ರ ಮೋದಿ ಸರ್ಕಾರ ನೀಡಿದೆ ಎಂದು ಹೇಳಿದೆ.
ಜೀವನ ಪೂರ್ತಿ ಪರರನ್ನು ಬೊಟ್ಟು ಮಾಡಿ ಜಾರಿಕೊಳ್ಳಲು ಯತ್ನಿಸುತ್ತಿರುವ ಸಿದ್ದರಾಮಯ್ಯನವರೇ, ಈ ಕೆಳಗಿನ ಮಾಹಿತಿ ನಿಮ್ಮ ಸರ್ಕಾರದ ಬಳಿ ಇಲ್ಲದಿರುವುದು ನಿಮ್ಮ ಆಡಳಿತದ ಅಸಾಮರ್ಥ್ಯ ತೋರಿಸುತ್ತದೆ. ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ ನೀಡಿದ್ದಕ್ಕಿಂತ ಮೂರುಪಟ್ಟು ಅಧಿಕ ತೆರಿಗೆಪಾಲು ಮತ್ತು ಅನುದಾನಗಳನ್ನು ಕೇಂದ್ರದ ನರೇಂದ್ರ ಮೋದಿ ಸರ್ಕಾರ ನೀಡಿದೆ ಎಂದು ಬಿಜೆಪಿ ಹೇಳಿದೆ.

2004-2014ರ ವರೆಗೆ ಯುಪಿಎ ಸರ್ಕಾರ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಕಲ್ಲಿದ್ದಲು ಹಗರಣ, 2ಜಿ ಹಗರಣ, ಕಾಮನ್‌ವೆಲ್ತ್‌ ಹಗರಣಗಳಂಥ ಭಾನಗಡಿಗಳ ನಡುವೆ ಕರ್ನಾಟಕಕ್ಕೆ ನೀಡಲು ಅಂದಿನ ಕೇಂದ್ರ ಸರ್ಕಾರದ ಬಳಿ ಇದ್ದದ್ದೇ ₹81,795 ಕೋಟಿ. ಇದಕ್ಕೆ ಹೋಲಿಸಿದರೆ ಮೋದಿ ಸರ್ಕಾರ ನೀಡಿರುವ ₹2,82,791 ಕೋಟಿ ನೀಡಿದೆ. ಅಂದರೆ ಶೇ.245 ರಷ್ಟು ಹೆಚ್ಚು ಹಣ ನೀಡಿದೆ ಎಂಬುದನ್ನು ಕಾಂಗ್ರೆಸ್‌ ಮರೆಮಾಚಲು ಸಾಧ್ಯವಿಲ್ಲ. ಕರ್ನಾಟಕದ ಅಭಿವೃದ್ಧಿಗೆ ಈಗ ಹಿಂದೆಂದಿಗಿಂತಲೂ ಹೆಚ್ಚು ಸಿಕ್ಕಿದೆ ಎಂಬುದನ್ನು ತಿರುಚಲು ನೀವು ಎಷ್ಟೇ ಪ್ರಯತ್ನಿಸಿದರೂ ಅಸಾಧ್ಯ ಎಂದು ಕಾಂಗ್ರೆಸ್ಸಿಗೆ ತಿರುಗೇಟು ನೀಡಿದೆ.

ಇದಲ್ಲದೆ ನಿರ್ದಿಷ್ಟ ಯೋಜನೆಗಳಿಗಾಗಿ ನೀಡಲಾದ ಅಭಿವೃದ್ಧಿ ಹಣ ಅದೆಷ್ಟು ಪಾಲು ಅಧಿಕ ಎಂಬುದನ್ನು ಲೆಕ್ಕ ಹಾಕಲು ಸ್ವಯಂಘೋಷಿತ ಆರ್ಥಿಕ ತಜ್ಞರಾದ ತಮಗೆ ಅಸಾಧ್ಯವಲ್ಲ. ಯುಪಿಎ ಅವಧಿಯಲ್ಲಿ ರಾಜ್ಯಕ್ಕೆ ಬಂದ ₹ 60,779 ಕೋಟಿಗಿಂತಲೂ ಮೋದಿ ಸರ್ಕಾರ ನೀಡಿದ ₹2,08,882 ಕೋಟಿ ಹೆಚ್ಚು ಎಂಬುದನ್ನು ಅರಿಯಲು ಅರ್ಥಶಾಸ್ತ್ರ ಗೊತ್ತಿರಲೇಬೇಕೆಂದು ಇಲ್ಲ, ಲೆಕ್ಕ ಗೊತ್ತಿದ್ದರೂ ಸಾಕು ಎಂದು ಬಿಜೆಪಿ ಹೇಳಿದೆ.

ಪ್ರಮುಖ ಸುದ್ದಿ :-   ಸೋಮವಾರಪೇಟೆ : ವಿದ್ಯಾರ್ಥಿನಿ ತಲೆ ಕಡಿದು ರುಂಡದೊಂದಿಗೆ ಪರಾರಿಯಾಗಿದ್ದ ಆರೋಪಿ ಅರೆಸ್ಟ್

ನಮ್ಮ ರಾಜ್ಯದಲ್ಲಿ ನಿಮ್ಮ ಪಕ್ಷದವರು 1947 ರಿಂದ 2014ರ ವರೆಗೆ ನಿರ್ಮಾಣ ಮಾಡಿದ ರಸ್ತೆ ಕೇವಲ 6750 ಕಿಲೋಮೀಟರ್. ಮೋದಿ ಸರ್ಕಾರ 2014ರ ನಂತರ ಕರ್ನಾಟಕದಲ್ಲಿ ಮಾಡಿದ ರಸ್ತೆ ನಿರ್ಮಾಣ ಒಟ್ಟು 13,500 ಕಿಲೋಮೀಟರ್. ಸಿದ್ದರಾಮಯ್ಯನವರೇ, ಮೊದಲು ನಾಲ್ಕು ಗಂಟೆಗೂ ಹೆಚ್ಚು ಸಮಯ ತಗಲುತ್ತಿದ್ದ ನಿಮ್ಮ ತವರೂರಿಗೆ ಈಗ ಕೇವಲ ಒಂದೂವರೆ ಗಂಟೆಯಲ್ಲೇ ನೀವಿಂದು ಹೋಗುತ್ತಿರುವ ಆ ರಸ್ತೆಯನ್ನು ಮಾಡಿಸಿದ್ದೂ ಸಹ ಮೋದಿ ಸರ್ಕಾರವೇ ಎಂದು ಬಿಜೆಪಿ ಕುಟುಕಿದೆ.

2009 ರಿಂದ 2014ರ ವರೆಗೆ ರಾಜ್ಯದ ರೈಲ್ವೆ ಯೋಜನೆಗಳಿಗೆ ನಿಮ್ಮ ಸರ್ಕಾರ ನೀಡಿದ್ದ ₹835 ಕೋಟಿಗಿಂತ ಮೋದಿ ಸರ್ಕಾರ ನೀಡಿರುವ ₹11,000 ಕೋಟಿ ಎಷ್ಟು ಪಟ್ಟು ಹೆಚ್ಚು ಎಂಬುದನ್ನು ನೀವೇ ಸ್ವಲ್ಪ ಲೆಕ್ಕ ಹಾಕಿ ಹೇಳಿಬಿಡಿ. ಅಲ್ಲದೆ, ಬ್ರಿಟೀಷರು ಭಾರತವನ್ನು ಬಿಟ್ಟು ಹೋದಲ್ಲಿಂದ ಹಿಡಿದು 2014 ರಲ್ಲಿ ಕಾಂಗ್ರೆಸ್‌ ಅಧಿಕಾರದಿಂದ ಕೆಳಗೆ ಇಳಿಯುವ ವರೆಗೆ, 67 ವರ್ಷಗಳಲ್ಲಿ ಕರ್ನಾಟಕದಲ್ಲಿ ಆದ ರೈಲ್ವೇ ವಿದ್ಯುದೀಕರಣ ಕೇವಲ 16 ಕಿಲೋಮೀಟರ್. ಆದರೆ ಮೋದಿ ಸರ್ಕಾರ ಮಾಡಿದ ರೈಲ್ವೆ ವಿದ್ಯುದೀಕರಣ ಬರೋಬ್ಬರಿ 3265 ಕಿಮೀ. ನಿಮ್ಮ ಪಕ್ಷದವರು ಅಧಿಕಾರ ನಡೆಸುವಾಗ ಮೆಟ್ರೋಗೋಸ್ಕರ ಯಶಸ್ವಿಯಾಗಿ ಅಳವಡಿಸಿದ ಹಳಿಯ ಉದ್ದ ಕೇವಲ 7 ಕಿಮೀ. 2014 ರಿಂದ 2023 ನಡುವೆ ಬರೋಬ್ಬರಿ 73 ಕಿಲೋಮೀಟರ್ ಮೆಟ್ರೋ ಹಳಿ ಅಳವಡಿಸಲಾಗಿದೆ. ಅಂದರೆ ಇದು ನಿಮ್ಮ ಪಕ್ಷದವರು ನಿರ್ಮಿಸಿದ್ದಕ್ಕಿಂತ 10 ಪಟ್ಟಿಗಿಂತಲೂ ಹೆಚ್ಚು ಎಂದು ಬಿಜೆಪಿ ಹೇಳಿದೆ.

https://twitter.com/BJP4Karnataka/status/1754394248311664869?ref_src=twsrc%5Etfw%7Ctwcamp%5Etweetembed%7Ctwterm%5E1754394248311664869%7Ctwgr%5Ef2e308d656809815a375e20db7652d77d46143a3%7Ctwcon%5Es1_&ref_url=https%3A%2F%2Fvistaranews.com%2Fkarnataka%2Fbengaluru%2Fbjp-karnataka-attacks-cogress-over-central-assistance%2F573524.html
ಡಬಲ್‌ ವಿಮಾನ ನಿಲ್ದಾಣ ಬಂದಿದೆ 
ಕಾಂಗ್ರೆಸ್‌ನ 67 ವರ್ಷಗಳ ಆಡಳಿತದಲ್ಲಿ ಕರ್ನಾಟಕದಲ್ಲಿ ನಿರ್ಮಾಣವಾದ ವಿಮಾನ ನಿಲ್ದಾಣಗಳು ಕೇವಲ 7. ಆದರೆ 2014ರಿಂದ ಈವರೆಗೆ ಕರ್ನಾಟಕವೊಂದರಲ್ಲೇ 14 ವಿಮಾನ ನಿಲ್ದಾಣಗಳನ್ನು ನಿರ್ಮಿಸಿರುವುದು ಮೋದಿ ಸರ್ಕಾರ. ಕಳೆದ 5 ವರ್ಷಗಳಲ್ಲಿ ಮೋದಿ ಸರ್ಕಾರ ರಾಜ್ಯದ ರಾಷ್ಟ್ರೀಯ ಹೆದ್ದಾರಿಗಳಿಗೆ ನೀಡಿರುವುದು ₹30,000 ಕೋಟಿ. ಕರ್ನಾಟಕದ ರೈತರ ಜೇಬಿಗೆ ಬಂದ ಕಿಸಾನ್‌ ಸಮ್ಮಾನದ ಮೌಲ್ಯ ₹10,990 ಕೋಟಿ.
ಕಾಂಗ್ರೆಸ್‌ ಸರ್ಕಾರಗಳಿಗೆ 67 ವರ್ಷಗಳಲ್ಲಿ ಯೋಚಿಸಲೂ ಸಾಧ್ಯವಾಗದಿದ್ದ ಆಯುಷ್ಮಾನ್‌ ಭಾರತ ಯೋಜನೆಯ ಲಾಭವನ್ನು ಪಡೆದ ಕನ್ನಡಿಗರು 62,00,000 ಕ್ಕೂ ಅಧಿಕ. ಕರ್ನಾಟಕಕ್ಕೆ ಮೊದಲ ಐಐಟಿ ನೀಡಿದ್ದು ಸಹ ಮೋದಿ ಸರ್ಕಾರ ಎಂಬುದು ನಿಮಗೆ ತಿಳಿದಿಲ್ಲವೇ ಮುಖ್ಯಮಂತ್ರಿ ಸಾಹೇಬರೇ? ಕೊರೋನಾದ ಪ್ರಕ್ಷುಬ್ಧ ಪರಿಸ್ಥಿತಿಯಲ್ಲಿ ಮೋದಿ ಸರ್ಕಾರ ಕರ್ನಾಟಕಕ್ಕೆ ಉಚಿತವಾಗಿ ನೀಡಿದ ಲಸಿಕೆಯೇ 10 ಕೋಟಿಗೂ ಹೆಚ್ಚು. ಆ ಪ್ರಮಾಣದಲ್ಲಿ ನಿಮ್ಮ ಪಕ್ಷದ ಸರ್ಕಾರಗಳು ಪೋಲಿಯೋ ಲಸಿಕೆಗಳನ್ನೂ ನೀಡಿಲ್ಲ ಎಂಬ ಅಂಶ ನಿಮ್ಮ ತಲೆಯಲ್ಲಿರಲಿ ಎಂದು ಬಿಜೆಪಿ ಹೇಳಿದೆ.

ಪ್ರಮುಖ ಸುದ್ದಿ :-   ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : ಡಬ್ಲ್ಯೂ ಎಫ್‌ ಐ ಮಾಜಿ ಮುಖ್ಯಸ್ಥನ ವಿರುದ್ಧ ದೋಷಾರೋಪಣೆ ರೂಪಿಸಲು ಕೋರ್ಟ್‌ ಆದೇಶ

ಶ್ವೇತಪತ್ರ ಹೊರಡಿಸುವ ಧೈರ್ಯ ಇದೆಯೇ ಸಿದ್ದರಾಮಯ್ಯನವರೇ?
ಇವಿಷ್ಟೂ ಅಲ್ಲದೆ ಪಿಎಂ ಗತಿ ಶಕ್ತಿ ಯೋಜನೆ, ಸಾಗರಮಾಲಾ ಯೋಜನೆ, ಬಡವರಿಗೆ ಸ್ವಂತ ಮನೆ ಖಾತರಿಪಡಿಸುವ ಪಿಎಂ ಆವಾಸ್ ಯೋಜನೆಯಡಿ ರಾಜ್ಯಕ್ಕೆ ₹1 ಲಕ್ಷ ಕೋಟಿ ರೂಪಾಯಿಗೂ ಅಧಿಕ ನೆರವು 2014ರ ನಂತರ ಹರಿದುಬಂದಿದೆ. ಅಷ್ಟಕ್ಕೂ ಕೇಂದ್ರ ಸರ್ಕಾರ ಅನುದಾನ ನೀಡುತ್ತಿಲ್ಲ ಎಂದು ಬೊಬ್ಬೆ ಹೊಡೆಯುತ್ತಿರುವ ಸಿದ್ದರಾಮಯ್ಯನವರೇ, ಜಲ ಜೀವನ್‌ ಮಿಷನ್‌, ಅಮೃತ್‌ ಯೋಜನೆ, ಸ್ಮಾರ್ಟ್‌ ಸಿಟಿ, ಪಿಎಂ ಆವಾಸ್‌ ಯೋಜನೆ ಸೇರಿದಂತೆ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಇದುವರೆಗೆ ನೀಡಿದ ಅನುದಾನವನ್ನು ಎಷ್ಟರ ಮಟ್ಟಿಗೆ ಬಳಸಿಕೊಂಡಿದ್ದೀರಾ ಎಂಬ ಶ್ವೇತಪತ್ರವನ್ನು ಹೊರಡಿಸುವ ತಾಕತ್ತು ಇದೆಯೇ ಎಂದು ಪ್ರಶ್ನಿಸಿದೆ.
ಕನ್ನಡಿಗರ ಶ್ರಮದ ತೆರಿಗೆ ಹಣವನ್ನು ವಾಮಮಾರ್ಗದಲ್ಲಿ ಸಂಗ್ರಹಿಸಿ, ತೆಲಂಗಾಣ, ಛತ್ತಿಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನದ ಚುನಾವಣೆಗೆ ನೀಡಿದ ನಿಮಗೆ ಈ ವಿಚಾರದ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ ಎಂದು ಹೇಳಿದೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement