ವೀಡಿಯೊ..| ಆರೋಪಿಗಳನ್ನು ಕೋರ್ಟ್‌ಗೆ ಕರೆದೊಯ್ಯುವಾಗ ಪೆಟ್ರೋಲ್‌ ಖಾಲಿ : ಆರೋಪಿಗಳಿಂದ ಅರ್ಧ ಕಿಮೀ ವಾಹನ ತಳ್ಳಿಸಿದ ಪೊಲೀಸರು…!

ಒಂದು ವಿಲಕ್ಷಣ ಘಟನೆಯಲ್ಲಿ, ವಾಹನದಲ್ಲಿ ಇಂಧನ ಖಾಲಿಯಾದ ನಂತರ ಬಿಹಾರದ ಭಾಗಲ್ಪುರ ಜಿಲ್ಲೆಯಲ್ಲಿ ನಾಲ್ವರು ಆರೋಪಿಗಳು ಪೊಲೀಸ್ ವ್ಯಾನ್ ಅನ್ನು ನ್ಯಾಯಾಲಯದ ವರೆಗೂ ತಳ್ಳಿದ್ದಾರೆ ಎಂದು ವರದಿಯಾಗಿದೆ.
ಕೈದಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಕರೆದೊಯ್ಯುತ್ತಿದ್ದಾಗ ವಾಹನದಲ್ಲಿ ಇಂಧನ ಖಾಲಿಯಾಗಿದೆ ಎಂದು ವರದಿಗಳು ತಿಳಿಸಿವೆ.
ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆಗಿದ್ದು, ವೀಡಿಯೊದಲ್ಲಿ, ನಾಲ್ವರು ಆರೋಪಿಗಳು  ಬಿಹಾರ ಪೊಲೀಸರ ಎಸ್‌ಯುವಿಯನ್ನು ತಳ್ಳುತ್ತಿರುವುದನ್ನು ನೋಡಬಹುದು ಮತ್ತು ಅಧಿಕಾರಿಯೊಬ್ಬರು ಅವರಿಗೆ ಮಾರ್ಗದರ್ಶನ ನೀಡುತ್ತಿರುವುದು ಸಹ ಕಂಡುಬರುತ್ತದೆ. ಅವರು ಸುಮಾರು ಅರ್ಧ ಕಿಲೋ ಮೋಟರ್‌ ವಾಹನ ತಳ್ಳಿದ್ದಾರೆ ಎಂದು ವರದಿಯಾಗಿದೆ.

ವರದಿಗಳ ಪ್ರಕಾರ, ರಾಜ್ಯದ ಭಾಗಲ್ಪುರ ಜಿಲ್ಲೆಯಲ್ಲಿ ಭಾನುವಾರ ಈ ಘಟನೆ ನಡೆದಿದ್ದು, ಬಿಹಾರದಲ್ಲಿ ಮದ್ಯ ನಿಷೇಧವಿದ್ದರೂ ಕೂಡ ಯಾವುದೇ ಮೂಲದಿಂದ ಜನರು ಮದ್ಯ ಖರೀದಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆದೊಯ್ಯುತ್ತಿದ್ದಾಗ ಇಂಧನ ಖಾಲಿಯಾಗಿ ಪೊಲೀಸ್​ ವಾಹನ ರಸ್ತೆ ಮಧ್ಯೆಯೆ ನಿಂತಿತ್ತು. ಬಳಿಕ ಅಲ್ಲಿದ್ದ ಆರೋಪಿಗಳೇ ನ್ಯಾಯಾಲಯದವರೆಗೆ ಕಾರನ್ನು ತಳ್ಳಿಕೊಂಡು ಹೋಗಿದ್ದಾರೆ.

ಘಟನೆಯನ್ನು ಕೆಲವರು ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ ಮತ್ತು ಕ್ಲಿಪ್ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆಗಿದೆ. ಆರೋಪಿಗಳು ಪೊಲೀಸ್ ವಾಹನವನ್ನು ಸುಮಾರು ಅರ್ಧ ಕಿಲೋಮೀಟರ್ ದೂರ ತಳ್ಳಿದ್ದಾರೆ ಎಂದು ವರದಿಗಳು ತಿಳಿಸಿವೆ.
ಏತನ್ಮಧ್ಯೆ, ಮುಜುಗರದ ಘಟನೆ ಬಗ್ಗೆ ಅರಿತುಕೊಂಡ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಘಟನೆಯ ಬಗ್ಗೆ ಆಂತರಿಕ ತನಿಖೆಯನ್ನು ಪ್ರಾರಂಭಿಸಲಾಗಿದೆ ಮತ್ತು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಘಟನೆಯ ಬಗ್ಗೆ ನಮಗೆ ಮಾಹಿತಿ ಸಿಕ್ಕಿದ್ದು, ಈ ಬಗ್ಗೆ ಇಲಾಖಾ ತನಿಖೆ ನಡೆಸಲಾಗುವುದು ಎಂದು ಸಹಾಯಕ ಆಯುಕ್ತ ಪ್ರಮೋದಿತ್ ನಾರಾಯಣ್ ಸಿಂಗ್ ಹೇಳಿದ್ದಾರೆ. ಯಾವುದೇ ಅಧಿಕಾರಿ ತಪ್ಪಿತಸ್ಥರೆಂದು ಕಂಡುಬಂದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸಿಪಿ ಸಿಂಗ್ ಹೇಳಿದ್ದಾರೆ, ಮುಂದಿನ ತನಿಖೆ ಮುಂದುವರೆದಿದೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ ವೇಳೆಯೇ ಕಾಂಗ್ರೆಸ್ಸಿಗೆ ಶಾಕ್‌ : ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement