ಬ್ರಿಟನ್‌ ರಾಜ ಚಾರ್ಲ್ಸ್‌ಗೆ ಕ್ಯಾನ್ಸರ್ ಇರುವುದು ಪತ್ತೆ: ಬಕಿಂಗ್‌ಹ್ಯಾಮ್ ಅರಮನೆಯಲ್ಲೇ ಚಿಕಿತ್ಸೆ

ಲಂಡನ್ : ಬ್ರಿಟನ್ ರಾಜ ಚಾರ್ಲ್ಸ್ -3 (King Charles III) ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ ಮತ್ತು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬಕಿಂಗ್‌ ಹ್ಯಾಮ್ ಅರಮನೆ ಹೇಳಿಕೆಯಲ್ಲಿ ತಿಳಿಸಿದೆ. 75 ವರ್ಷದ ರಾಜ ಚಾರ್ಲ್ಸ್ -3 ಅವರಿಗೆ ಯಾವ ಕ್ಯಾನ್ಸರ್ ಇದೆ ಎಂಬ ಬಗ್ಗೆ ಮಾಹಿತಿ ನೀಡಿಲ್ಲ. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸಿದಾದ ಕ್ಯಾನ್ಸರ್ … Continued

ಮದುವೆಯಾದ 12 ವರ್ಷಗಳ ನಂತರ ದಾಂಪತ್ಯ ಜೀವನದಿಂದ ಬೇರೆಯಾದ ನಟಿ ಇಶಾ ಡಿಯೋಲ್-ಭರತ ತಖ್ತಾನಿ : ವರದಿ

ನವದೆಹಲಿ: ತಮ್ಮ ವಿಚ್ಛೇದನದ ವದಂತಿಗಳ ನಡುವೆ, ನಟಿ ಇಶಾ ಡಿಯೋಲ್ ಮತ್ತು ಭರತ ತಖ್ತಾನಿ ಅವರು ದಾಂಪತ್ಯ ಜೀವನದಿಂದ ಬೇರ್ಪಡುತ್ತಿರುವುದನ್ನು ಖಚಿತಪಡಿಸಿದ್ದಾರೆ ಎಂದು ವರದಿಯಾಗಿದೆ. 12 ವರ್ಷಗಳ ದಾಂಪತ್ಯ ಜೀವನಕ್ಕೆ ಈ ಜೋಡಿ ವಿಚ್ಛೇದನ ಘೋಷಿಸಿದ್ದಾರೆ. ತಮ್ಮ ವಿಚ್ಛೇದನವು “ಸೌಹಾರ್ದಯುತವಾಗಿದೆ” ಎಂದು ಅವರು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ದೆಹಲಿ ಟೈಮ್ಸ್ ವರದಿ ಮಾಡಿದಂತೆ, “ನಾವು ಪರಸ್ಪರ … Continued

ಭಗವದ್ಗೀತೆ ಮೇಲೆ ಪ್ರಮಾಣ ವಚನ ಸ್ವೀಕರಿಸಿದ ಭಾರತೀಯ ಮೂಲದ ಆಸ್ಟ್ರೇಲಿಯಾದ ಸೆನೆಟರ್ ವರುಣ ಘೋಷ್

ಕ್ಯಾನ್‌ಬೆರಾ: ಬ್ಯಾರಿಸ್ಟರ್ ವರುಣ ಘೋಷ್ (೩೮) ಅವರು ಮಂಗಳವಾರ ಭಗವದ್ಗೀತೆಯ ಮೇಲೆ ಪ್ರಮಾಣ ವಚನ ಸ್ವೀಕರಿಸಿದ ಆಸ್ಟ್ರೇಲಿಯಾದ ಸಂಸತ್ತಿನ ಮೊದಲ ಭಾರತ ಸಂಜಾತ ಸದಸ್ಯರಾಗಿದ್ದಾರೆ. ಲೆಜಿಸ್ಲೇಟಿವ್ ಅಸೆಂಬ್ಲಿ ಮತ್ತು ಲೆಜಿಸ್ಲೇಟಿವ್ ಕೌನ್ಸಿಲ್ ವರುಣ ಘೋಷ್ ಅವರನ್ನು ಫೆಡರಲ್ ಸಂಸತ್ತಿನ ಸೆನೆಟ್‌ನಲ್ಲಿ ಆಸ್ಟ್ರೇಲಿಯಾವನ್ನು ಪ್ರತಿನಿಧಿಸಲು ಆಯ್ಕೆ ಮಾಡಿದ ನಂತರ ಪಶ್ಚಿಮ ಆಸ್ಟ್ರೇಲಿಯಾದ ಅವರನ್ನು ಹೊಸ ಸೆನೆಟರ್ ಆಗಿ … Continued

ಶರದ್ ಪವಾರಗೆ ದೊಡ್ಡ ಹಿನ್ನಡೆ..: ಅಜಿತ್ ಪವಾರ್ ನೇತೃತ್ವದ ಬಣವೇ ನಿಜವಾದ ಎನ್‌ಸಿಪಿ ಎಂದು ತೀರ್ಪು ಪ್ರಕಟಿಸಿದ ಚುನಾವಣಾ ಆಯೋಗ

ನವದೆಹಲಿ: ಮಂಗಳವಾರ ಚುನಾವಣಾ ಆಯೋಗವು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಅಜಿತ್ ಪವಾರ್ ನೇತೃತ್ವದ ಬಣವನ್ನು “ನಿಜವಾದ” ಎನ್‌ಸಿಪಿ ಎಂದು ಪ್ರಕಟಿಸಿದ್ದು, ಪಕ್ಷದ ಸಂಸ್ಥಾಪಕ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ಅವರೊಂದಿಗಿನ ಬಣದ ನಡುವಿನ ವಿವಾದವನ್ನು ಕೊನೆಗೊಳಿಸಿದೆ. ಅಜಿತ್ ಪವಾರ್ ತನ್ನ ಚಿಕ್ಕಪ್ಪ ಮತ್ತು ಎನ್‌ಸಿಪಿ ಸಂಸ್ಥಾಪಕ ಶರದ್ ಪವಾರ್ ವಿರುದ್ಧ ಬಂಡಾಯವೆದ್ದು ಮಹಾರಾಷ್ಟ್ರದ ಆಡಳಿತಾರೂಢ … Continued

ಫೈಟರ್‌ ಸಿನೆಮಾದಲ್ಲಿ ವಾಯುಪಡೆ ಸಮವಸ್ತ್ರ ಧರಿಸಿ ಚುಂಬನದ ದೃಶ್ಯ: ವಾಯುಪಡೆ ಅಧಿಕಾರಿಯಿಂದ ಲೀಗಲ್ ನೋಟಿಸ್

ನವದೆಹಲಿ: ಹೃತಿಕ್ ರೋಷನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ “ಫೈಟರ್” ಚಿತ್ರದ ನಿರ್ಮಾಪಕರು ವಾಯುಪಡೆಯ ಸಮವಸ್ತ್ರವನ್ನು ಚುಂಬನ ದೃಶ್ಯಕ್ಕೆ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿ ಐಎಎಫ್ ಅಧಿಕಾರಿಯೊಬ್ಬರು ಕಾನೂನು ನೋಟಿಸ್ ನೀಡಿದ್ದಾರೆ. ವಿಂಗ್ ಕಮಾಂಡರ್ ತಮ್ಮ ವೈಯಕ್ತಿಕ ಸಾಮರ್ಥ್ಯದಲ್ಲಿ ನೋಟಿಸ್ ನೀಡಿದ್ದಾರೆ. ಚಿತ್ರದ ಇಬ್ಬರು ನಾಯಕ ನಟರ ನಡುವಿನ ದೃಶ್ಯವು ಐಎಎಫ್‌ಗೆ ಅವಮಾನವಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ. … Continued

ದೆಹಲಿ ರೈಲು ನಿಲ್ದಾಣದಲ್ಲಿ ಲಷ್ಕರ್ ಭಯೋತ್ಪಾದಕನ ಬಂಧನ, ಈತ ನಿವೃತ್ತ ಸೇನಾ ಯೋಧ : ಪೊಲೀಸರು

ನವದೆಹಲಿ: ದೆಹಲಿ ಪೊಲೀಸರು ನಿವೃತ್ತ ಸೇನಾ ಯೋಧ ಮತ್ತು ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ (ಎಲ್‌ಇಟಿ) ಸದಸ್ಯ ರಿಯಾಜ್ ಅಹ್ಮದ್‌ನನ್ನು ನವದೆಹಲಿ ರೈಲ್ವೆ ನಿಲ್ದಾಣದಿಂದ ಬಂಧಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಕುಪ್ವಾರಾ ಜಿಲ್ಲೆಯಲ್ಲಿ ಎಲ್‌ಇಟಿ ಮಾಡ್ಯೂಲ್ ಅನ್ನು ಭೇದಿಸಿದ ಕೆಲವು ದಿನಗಳ ನಂತರ ಈ ಬಂಧನವು ನಡೆದಿದೆ. ಭಾನುವಾರ, ಫೆಬ್ರವರಿ 4 ರಂದು ಈತನನ್ನು … Continued

ವೀಡಿಯೊ..| ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ : ಮೃತರ ಸಂಖ್ಯೆ 11ಕ್ಕೆ ಏರಿಕೆ ; 50 ಮಂದಿಗೆ ಗಂಭೀರ ಗಾಯ

ಭೋಪಾಲ್ : ಮಂಗಳವಾರ ಮಧ್ಯಪ್ರದೇಶದ ಹರ್ದಾ ಜಿಲ್ಲೆಯ ಬೈರಾಗರ್ ಗ್ರಾಮದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ ಮೃತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ ಎಂದು ಅನಧಿಕೃತ ಮೂಲಗಳು ತಿಳಿಸಿದ್ದು, ಸುಮಾರು 50 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಇತ್ತೀಚಿನ ವರದಿಗಳ ಪ್ರಕಾರ ಹಲವಾರು ವ್ಯಕ್ತಿಗಳು ಕಾರ್ಖಾನೆಯ ಆವರಣದಲ್ಲಿ ಸಿಕ್ಕಿಬಿದ್ದಿರುವ ಭಯವಿದೆ. ತೆರವು ಪ್ರಯತ್ನಗಳನ್ನು ನಡೆಸಲು … Continued

ಲಿವ್-ಇನ್ ಸಂಬಂಧಕ್ಕೂ ನೋಂದಣಿ, 21 ವರ್ಷದೊಳಗಿನವರಿಗೆ ಪೋಷಕರ ಅನುಮತಿ ಕಡ್ಡಾಯ, ಇಲ್ಲದಿದ್ರೆ ಜೈಲು ಶಿಕ್ಷೆ : ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ

ಡೆಹ್ರಾಡೂನ್:  ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ ಉತ್ತರಾಖಂಡ ಸರ್ಕಾರ (Uttarakhand Government) ಏಕರೂಪ ನಾಗರಿಕ ಸಂಹಿತೆ(UCC) ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದೆ. ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಕಾನೂನಾಗಿ ಜಾರಿಯಾದ ನಂತರ ಲಿವ್-ಇನ್ ಸಂಬಂಧದಲ್ಲಿರುವ ವ್ಯಕ್ತಿಗಳು ಜಿಲ್ಲಾ ಅಧಿಕಾರಿಗಳ ಬಳಿ ತಮ್ಮನ್ನು ನೋಂದಾಯಿಸಿಕೊಳ್ಳಬೇಕಾಗುತ್ತದೆ ಹಾಗೂ 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಒಟ್ಟಿಗೆ ವಾಸಿಸಲು ಬಯಸಿದರೆ ಅವರ ಪೋಷಕರ … Continued

ಸಿಎಂ ಸಿದ್ದರಾಮಯ್ಯ ಸೇರಿ 4 ಕಾಂಗ್ರೆಸ್‌ ನಾಯಕರಿಗೆ 10 ಸಾವಿರ ರೂ. ದಂಡ ವಿಧಿಸಿದ ಹೈಕೋರ್ಟ್ : ನ್ಯಾಯಾಲಯಕ್ಕೆ ಖುದ್ದು ಹಾಜರಾಗಲು ಸೂಚನೆ

ಬೆಂಗಳೂರು: 2022ರ ಏಪ್ರಿಲ್‌ನಲ್ಲಿ ಗುತ್ತಿಗೆದಾರ ಸಂತೋಷ ಪಾಟೀಲ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ಸಚಿವ ಕೆ.ಎಸ್.ಈಶ್ವರಪ್ಪ ಅವರ ರಾಜೀನಾಮೆ ಮತ್ತು ಬಂಧನಕ್ಕೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರಿಗೆ ಕರ್ನಾಟಕ ಹೈಕೋರ್ಟ್ 10,000 ರೂಪಾಯಿ ದಂಡ ವಿಧಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಸಂಪುಟದ ಸಚಿವರಾದ ಎಂ.ಬಿ.ಪಾಟೀಲ, ರಾಮಲಿಂಗಾರೆಡ್ಡಿ ಹಾಗೂ ಕರ್ನಾಟಕದ … Continued

ಸರಣಿ ಬಾಂಬ್‌ ಸ್ಫೋಟಕ್ಕೆ ಸಂಚು : 6 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ ಎನ್‌ಐಎ

ಬೆಂಗಳೂರು : ಬೆಂಗಳೂರು ನಗರದಲ್ಲಿ ಸರಣಿ ಬಾಂಬ್‌ ಸ್ಫೋಟ ಮಾಡಲು ಸಂಚು ರೂಪಿಸಿದ್ದ 6 ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ದಳ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ. ಕಳೆದ ಜುಲೈನಲ್ಲಿ ಆರ್‌ಟಿ ನಗರದ ಮನೆ ಮೇಲೆ ದಾಳಿ ಮಾಡಿದ್ದ ಬೆಂಗಳೂರು ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಶೋಧ ಕಾರ್ಯದ ವೇಳೆ ಆರೋಪಿಗಳ ಬಳಿ 7 ನಾಡ ಪಿಸ್ತೂಲ್, … Continued