ಭೋಪಾಲ್ : ಮಂಗಳವಾರ ಮಧ್ಯಪ್ರದೇಶದ ಹರ್ದಾ ಜಿಲ್ಲೆಯ ಬೈರಾಗರ್ ಗ್ರಾಮದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ ಮೃತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ ಎಂದು ಅನಧಿಕೃತ ಮೂಲಗಳು ತಿಳಿಸಿದ್ದು, ಸುಮಾರು 50 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಇತ್ತೀಚಿನ ವರದಿಗಳ ಪ್ರಕಾರ ಹಲವಾರು ವ್ಯಕ್ತಿಗಳು ಕಾರ್ಖಾನೆಯ ಆವರಣದಲ್ಲಿ ಸಿಕ್ಕಿಬಿದ್ದಿರುವ ಭಯವಿದೆ. ತೆರವು ಪ್ರಯತ್ನಗಳನ್ನು ನಡೆಸಲು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ಘಟನಾ ಸ್ಥಳಕ್ಕೆ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಫೋಟವು ಕಾರ್ಖಾನೆಯನ್ನು ಮಾತ್ರವಲ್ಲದೆ ನೆರೆಯ ಕಟ್ಟಡಗಳನ್ನೂ ಸಹ ಸುಟ್ಟುಹಾಕಿತು. ದಟ್ಟವಾದ ಹೊಗೆ ಮತ್ತು ಜ್ವಾಲೆಗಳು ಆಕಾಶಕ್ಕೆ ಏರುತ್ತಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟವು ಎಷ್ಟು ತೀವ್ರವಾಗಿದೆಯೆಂದರೆ, ಅದರ ಪರಿಣಾಮವು 15 ಕಿಲೋಮೀಟರ್ ವ್ಯಾಪ್ತಿಯನ್ನು ವ್ಯಾಪಿಸಿದೆ ಎಂದು ಹೇಳಲಾಗಿದೆ.
ಇಂದು, ಮಂಗಳವಾರ ಮಧ್ಯಾ ಹ್ನ 12 ಗಂಟೆ ಸುಮಾರಿಗೆ ಅವಘಡ ಸಂಭವಿಸಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಇಂದೋರ್ ಮತ್ತು ಭೋಪಾಲ್ ನಿಂದ ಅಗ್ನಿ ಶಾಮಕ ದಳದ ಸಿಬ್ಬಂದಿ ಧಾವಿಸಿದ್ದು , ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.
“ಸ್ಫೋಟದ ಪರಿಣಾಮ ಗಾಜಿನ ಕಿಟಕಿಗಳು ಒಡೆದು ಹೋಗಿದೆ. ಸೋಟವು ಕಾಲ್ತುಳಿತಕ್ಕೆ ಕಾರಣವಾಗಿದ್ದು, ಹಲವರು ಕಾಲ್ತುಳಿತದಿಂದ ಮೃತಪಟ್ಟಿದ್ದಾರೆ. ಬೆಂಕಿಯ ತೀವ್ರತೆ ಇನ್ನು ತಹಬದಿಗೆ ಬಂದಿಲ್ಲ, ಹೀಗಾಗಿ ನಮಗೆ ಇನ್ನೂ ನಿಜವಾದ ಸ್ಫೋಟದ ಸ್ಥಳಕ್ಕೆ ತಲುಪಲಾಗಲಿಲ್ಲ, ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ”ಎಂದು ಹರ್ದಾ ಕೊತ್ವಾಲಿ ಪೊಲೀಸ್ ಠಾಣೆಯ ಪ್ರಭಾರಿ ಅಬ್ದುಲ್ ರಯೀಸ್ ಖಾನ್ ಹೇಳಿದ್ದಾರೆ.
ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ ಯಾದವ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, “ಸ್ಥಳಕ್ಕೆ 50 ಕ್ಕೂ ಹೆಚ್ಚು ಆಂಬ್ಯುಲೆನ್ಸ್ಗಳನ್ನು ಕಳುಹಿಸಲಾಗಿದ್ದು, ಮೃತರ ಹಾಗೂ ಗಾಯಾಳು ಕುಟುಂಬಗಳಿಗೆ 4 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಲಾಗಿದೆ” ಎಂದು ತಿಳಿಸಿದ್ದಾರೆ.
ಸ್ಫೋಟ ಮತ್ತು ನಂತರದ ಬೆಂಕಿಯಿಂದಾಗಿ ಹಲವಾರು ವ್ಯಕ್ತಿಗಳು ಗಾಯಗೊಂಡಿರಬಹುದು ಅಥವಾ ಸಿಕ್ಕಿಬಿದ್ದಿರಬಹುದು ಎಂದು ಆರಂಭಿಕ ವರದಿಗಳು ಸೂಚಿಸುತ್ತವೆ. ರಕ್ಷಣಾ ಕಾರ್ಯಗಳು ಸಕ್ರಿಯವಾಗಿ ಪ್ರಗತಿಯಲ್ಲಿರುವ ಕಾರಣ ಸಂಪೂರ್ಣ ವಿನಾಶದ ಪ್ರಮಾಣ ಮತ್ತು ಸಾವುನೋವುಗಳ ಸಂಖ್ಯೆ ಅನಿಶ್ಚಿತವಾಗಿಯೇ ಉಳಿದಿದೆ. ಸ್ಥಳಕ್ಕೆ SDRF ಮತ್ತು NDRF ತಂಡಗಳನ್ನು ಕರೆಸಲಾಯಿತು.
.https://twitter.com/i/status/1754783044781617222
ಪ್ರಧಾನಿ ನರೇಂದ್ರ ಮೋದಿ ಕೂಡ ದುರಂತದ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ.ಬೆಂಕಿಯಲ್ಲಿ ಮೃತಪಟ್ಟ ಪ್ರತಿಯೊಬ್ಬರ ಸಂಬಂಧಿಕರಿಗೆ 2 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50 ಸಾವಿರ ರೂ. ನೀಡಲಾಗುವುದು ಎಂದು ಪಿಎಂಒ ತಿಳಿಸಿದೆ.
ಈ ಹಿಂದೆಯೂ ತಮಿಳುನಾಡಿನಲ್ಲಿ ಪಟಾಕಿ ಸ್ಫೋಟ ಸಂಭವಿಸಿತ್ತು. ಅಕ್ಟೋಬರ್ 2023 ರಲ್ಲಿ ತಮಿಳುನಾಡಿನ ಅನೇಕ ಪಟಾಕಿ ಘಟಕಗಳಲ್ಲಿ ಸಂಭವಿಸಿದ ಸರಣಿ ಸ್ಫೋಟಗಳಲ್ಲಿ 27 ಜನರು ಸಾವಿಗೀಡಾಗಿದ್ದರು.


ನಿಮ್ಮ ಕಾಮೆಂಟ್ ಬರೆಯಿರಿ