ಸರಣಿ ಬಾಂಬ್‌ ಸ್ಫೋಟಕ್ಕೆ ಸಂಚು : 6 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ ಎನ್‌ಐಎ

ಬೆಂಗಳೂರು : ಬೆಂಗಳೂರು ನಗರದಲ್ಲಿ ಸರಣಿ ಬಾಂಬ್‌ ಸ್ಫೋಟ ಮಾಡಲು ಸಂಚು ರೂಪಿಸಿದ್ದ 6 ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ದಳ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ.
ಕಳೆದ ಜುಲೈನಲ್ಲಿ ಆರ್‌ಟಿ ನಗರದ ಮನೆ ಮೇಲೆ ದಾಳಿ ಮಾಡಿದ್ದ ಬೆಂಗಳೂರು ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಶೋಧ ಕಾರ್ಯದ ವೇಳೆ ಆರೋಪಿಗಳ ಬಳಿ 7 ನಾಡ ಪಿಸ್ತೂಲ್, 45 ಜೀವಂತ ಗುಂಡು, ಗ್ರೆನೇಡ್ ಹಾಗೂ ವಾಕಿಟಾಕಿಗಳು ಸಿಕ್ಕಿದ್ದವು. ವಿಚಾರಣೆ ಸಂದರ್ಭದಲ್ಲಿ ಆರೋಪಿಗಳು ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಮುಂದಾಗಿದ್ದರು ಎಂಬ ವಿಚಾರ ತನಿಖೆಯಿಂದ ಬಯಲಾಗಿತ್ತು. ನಂತರ ಬಳಿಕ ಈ ಪ್ರಕರಣ ಎನ್‌ಐಎಗೆ ವರ್ಗಾವಣೆಯಾಗಿತ್ತು. ತನಿಖೆ ನಡೆಸಿದ ಎನ್‌ಐಎ ಈ ಎಲ್ಲಾ ಅಂಶಗಳನ್ನು ಒಳಗೊಂಡು ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಜಾರ್ಜ್‌‌ಶೀಟ್‌ ಸಲ್ಲಿಕೆ ಮಾಡಿದೆ.
ಸೆರೆ ಸಿಕ್ಕ ಶಂಕಿತರ ಹಿಂದಿದ್ದ ಮಾಸ್ಟರ್ ಮೈಂಡ್ ಜುನೈದ್ ಎಂಬಾತ ವಿದೇಶದಲ್ಲಿದ್ದುಕೊಂಡೇ ಇವರಿಗೆ ಈ ಕೃತ್ಯಕ್ಕೆ ಸಹಕರಿಸಿದ್ದ. ಅವರಿಗೆ ಲಕ್ಷಾಂತರ ರೂ.ಗಳ ಫಂಡಿಂಗ್ ಮಾಡಿದ್ದ. ಜೊತೆಗೆ ಏನೇನು ಮಾಡಬೇಕು ಎಂದು ನಿರ್ದೇಶನ ನೀಡುತ್ತಿದ್ದ ಎಂದು ತನಖೆಯಿಂದ ತಿಳಿದು ಬಂದಿದೆ.

ಪ್ರಮುಖ ಸುದ್ದಿ :-   ವೀಡಿಯೊಗಳು..| ಬೆಂಗಳೂರಿನಲ್ಲಿ ಭಾರೀ ಮಳೆ : ತಾಪಮಾನ ದಿಢೀರ್‌ ಕುಸಿತ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement