ಕರ್ನಾಟಕಕ್ಕೆ ಎಲ್ಲಿ ಹಣ ನೀಡಿಲ್ಲ ? ಎಲ್ಲಿ ಕಡಿಮೆ ಹಣ ಸಿಗ್ತಿದೆ..? : ಕರ್ನಾಟಕಕ್ಕೆ ಕೊಟ್ಟ ಹಣದ ಲೆಕ್ಕ ನೀಡಿ ಮರುಪ್ರಶ್ನಿಸಿದ ನಿರ್ಮಲಾ ಸೀತಾರಾಮನ್‌

ನವದೆಹಲಿ: ತೆರಿಗೆ ಹಂಚಿಕೆ ಮತ್ತು ಕೇಂದ್ರದ ಅನುದಾನದಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕದ ಕಾಂಗ್ರೆಸ್ ನಾಯಕರು ನವದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ ದಿನ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಆಯೋಗದ ಶಿಫಾರಸುಗಳನ್ನು “ಕೊನೆಯ ಪದದವರೆಗೆ” ಅನುಸರಿಸಿದ್ದೇವೆ ಎಂದು ಹೇಳಿದ್ದಾರೆ. ಬುಧವಾರ ಲೋಕಸಭೆಯಲ್ಲಿ ಮಾತನಾಡಿದ ವಿತ್ತ ಸಚಿವರು ಅಂಕಿಅಂಶಗಳನ್ನು … Continued

ವೀಡಿಯೊ..| 22 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕ ಈಗ ಸನ್ಯಾಸಿಯಾಗಿ ತಾಯಿ ಬಳಿಗೆ ಬಂದ: ಬಂದವ ಹೊರಟು ಹೋದ : ಯಾಕೆ ? ಅದೇ ಸ್ವಾರಸ್ಯ…

ನವದೆಹಲಿ : ನಾಪತ್ತೆಯಾಗಿದ್ದ ಮಗ, ಎರಡು ದಶಕಗಳ ನಂತರ ವಾಪಸ್ಸಾಗಿದ್ದು ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯ ಗ್ರಾಮವೊಂದರಲ್ಲಿ ತಲ್ಲಣಕ್ಕೆ ಕಾರಣವಾಗಿದೆ. 22 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ 11 ವರ್ಷದ ಬಾಲಕ ಈಗ ಸನ್ಯಾಸಿಯಾಗಿ ಗ್ರಾಮಕ್ಕೆ ಮರಳಿದ್ದು, ಎಲ್ಲರಿಗೂ ದಿಗ್ಭ್ರಮೆಗೆ ಕಾರಣವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವೀಡಿಯೊವು ತಾಯಿ ಮತ್ತು ಮಗನ ನಡುವಿನ ಭಾವನಾತ್ಮಕ ಪುನರ್ಮಿಲನವನ್ನು ತೋರಿಸುತ್ತದೆ. … Continued