ಅಕ್ರಮ ಮದರಸಾ ಕೆಡವಿದ ನಂತರ ಗಲಭೆ: ಉತ್ತರಾಖಂಡ ಪಟ್ಟಣದಲ್ಲಿ ಶೂಟ್-ಅಟ್-ಸೈಟ್ ಆದೇಶ, ಇಂಟರ್ನೆಟ್ ಸ್ಥಗಿತ

ಹಲ್ದ್ವಾನಿ : ಗುರುವಾರ ಉತ್ತರಾಖಂಡದ ಹಲ್ದ್ವಾನಿಯಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಮದರಸಾವನ್ನು ಅಧಿಕಾರಿಗಳು ನೆಲಸಮಗೊಳಿಸಿದ ನಂತರ, ಘರ್ಷಣೆಗಳು ಭುಗಿಲೆದ್ದಿವೆ. ದುಷ್ಕರ್ಮಿಗಳು ಪೊಲೀಸ್ ಅಧಿಕಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಮತ್ತು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಘಟನೆಯಲ್ಲಿ ಹಲವಾರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಹಲ್ವಾನಿಯ ಬಂಭುಲ್ಪುರದಲ್ಲಿ ಶೂಟ್-ಆಟ್-ಸೈಟ್ ಆದೇಶ ಮಾಡಿದ್ದಾರೆ. ಆ ಪ್ರದೇಶದಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಇದರ ಜೊತೆಗೆ, ಶುಕ್ರವಾರ ಹಲ್ದ್ವಾನಿಯಲ್ಲಿ ಎಲ್ಲಾ ಶಾಲೆಗಳನ್ನು ಮುಚ್ಚಲಾಗುವುದು ಎಂದು ಮುಖ್ಯಮಂತ್ರಿ ಪ್ರಕಟಿಸಿದ್ದಾರೆ.

ಹಲ್ದ್ವಾನಿಯ ಮುನ್ಸಿಪಲ್ ಕಾರ್ಪೊರೇಷನ್ ಅಧಿಕಾರಿಗಳು ಗುರುವಾರ ಬಂಭುಲ್ಪುರ ಪೊಲೀಸ್ ಠಾಣೆ ಬಳಿ ಅಕ್ರಮವಾಗಿ ನಿರ್ಮಿಸಲಾದ ಮದರಸಾವನ್ನು ಕೆಡವಿದರು. ಇದಕ್ಕೆ ಪ್ರತೀಕಾರವಾಗಿ, ಸಮೀಪದಲ್ಲಿ ವಾಸಿಸುವ ವ್ಯಕ್ತಿಗಳ ಗುಂಪು ಪೊಲೀಸ್ ಅಧಿಕಾರಿಗಳ ಮೇಲೆ ಕಲ್ಲು ತೂರಾಟವನ್ನು ಪ್ರಾರಂಭಿಸಿತು, ಇದರಿಂದಾಗಿ ಹಲವಾರು ಅಧಿಕಾರಿಗಳಿಗೆ ಗಾಯಗಳಾಗಿವೆ. ಈ ಪ್ರದೇಶದಲ್ಲಿ ಪೊಲೀಸ್ ವಾಹನಗಳು ಸೇರಿದಂತೆ ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಯಿತು. ಟ್ರಾನ್ಸ್‌ಫಾರ್ಮರ್‌ಗೆ ಬೆಂಕಿ ಹಚ್ಚಲಾಗಿದ್ದು, ಸುತ್ತಮುತ್ತಲಿನ ವಿದ್ಯುತ್ ವ್ಯತ್ಯಯವಾಗಿದೆ.
ಗುಂಪೊಂದು ಬಂಭುಲ್‌ಪುರ ಪೊಲೀಸ್ ಠಾಣೆಯನ್ನು ಸುತ್ತುವರಿದಿದ್ದರಿಂದ ಹಲವಾರು ಪತ್ರಕರ್ತರು ಮತ್ತು ಆಡಳಿತ ಅಧಿಕಾರಿಗಳು ಪೊಲೀಸ್ ಠಾಣೆಯೊಳಗೆ ಸಿಕ್ಕಿಬಿದ್ದಿದ್ದಾರೆ. ಪರಿಸ್ಥಿತಿ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಹಲ್ದ್ವಾನಿಗೆ ಹೆಚ್ಚುವರಿ ಪಡೆಗಳನ್ನು ಕರೆಸಿಕೊಳ್ಳಲಾಗಿದೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ: ಮೂರನೇ ಹಂತದಲ್ಲಿ ಅಂದಾಜು 64.4%ರಷ್ಟು ಮತದಾನ

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರೊಂದಿಗೆ ಸಭೆ ನಡೆಸಿದ ನಂತರ, ಬಂಭುಲ್ಪುರದಲ್ಲಿ ಕರ್ಫ್ಯೂ ವಿಧಿಸಲಾಯಿತು. ವೈದ್ಯಕೀಯ ತುರ್ತು ಸಂದರ್ಭಗಳಲ್ಲಿ ಮಾತ್ರ ಜನರು ಹೊರಬರಲು ಅವಕಾಶ ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪರಿಸ್ಥಿತಿ ಕುರಿತು ಮಾತನಾಡಿದ ಧಾಮಿ, “ಹಲ್ದ್ವಾನಿಯ ಬಂಭುಲ್‌ಪುರ ಪ್ರದೇಶದಲ್ಲಿ, ನ್ಯಾಯಾಲಯದ ಆದೇಶದ ಮೇರೆಗೆ ಆಡಳಿತದ ತಂಡವು ಅತಿಕ್ರಮಣ ವಿರೋಧಿ ಅಭಿಯಾನಕ್ಕೆ ತೆರಳಿತ್ತು. ಅಲ್ಲಿ ಸಮಾಜ ವಿರೋಧಿಗಳು ಪೊಲೀಸರೊಂದಿಗೆ ಜಗಳವಾಡಿದರು. ಕೆಲವು ಪೊಲೀಸ್ ಸಿಬ್ಬಂದಿ ಮತ್ತು ಆಡಳಿತಾಧಿಕಾರಿಗಳಿಗೆ ಗಾಯಗಳಾಗಿವೆ. ಹೆಚ್ಚುವರಿ ಪೊಲೀಸ್ ಮತ್ತು ಕೇಂದ್ರ ಪಡೆಗಳನ್ನು ಅಲ್ಲಿಗೆ ಕಳುಹಿಸಲಾಗುತ್ತಿದೆ. ಶಾಂತಿ ಕಾಪಾಡುವಂತೆ ನಾವು ಎಲ್ಲರಿಗೂ ಮನವಿ ಮಾಡಿದ್ದೇವೆ. ಕರ್ಫ್ಯೂ ಜಾರಿಯಲ್ಲಿದೆ. ದಂಗೆಕೋರರು ಮತ್ತು ಅತಿಕ್ರಮಣಕಾರರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ವಿಶ್ವದಾದ್ಯಂತ ಕೋವಿಡ್ ಲಸಿಕೆ ಹಿಂತೆಗೆದುಕೊಂಡ ಆಸ್ಟ್ರಾಜೆನೆಕಾ : ವರದಿ

ಅರೆಸೇನಾ ಪಡೆಗಳನ್ನು ರಾಜ್ಯಕ್ಕೆ ಕಳುಹಿಸಿರುವುದರಿಂದ ಬಂಭುಲ್‌ಪುರದ ಪರಿಸ್ಥಿತಿ ಈಗ ಸುಧಾರಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದಾಗ್ಯೂ, ಹಲ್ದ್ವಾನಿಯಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ.
ವೀಡಿಯೊ ರೆಕಾರ್ಡಿಂಗ್ ಸೇರಿದಂತೆ ವಿವಿಧ ಸಾಕ್ಷ್ಯಗಳ ಮೂಲಕ ಆರೋಪಿಗಳನ್ನು ಗುರುತಿಸಲಾಗುವುದು ಎಂದು ನೈನಿತಾಲ್ ಜಿಲ್ಲಾ ಮ್ಯಾಜಿಸ್ಟ್ರೇಟ್ ತಿಳಿಸಿದ್ದಾರೆ. ಉಂಟಾದ ಹಾನಿಯನ್ನು ಗಲಭೆಗೆ ಕಾರಣರಾದವರಿಂದ ವಸೂಲಿ ಮಾಡಲಾಗುವುದು. ಹೆಚ್ಚಿನ ಮಾಹಿತಿ ಸಂಗ್ರಹಿಸಲು ಗಲಭೆಕೋರರನ್ನು ಒಳಗೊಂಡ ಪೋಸ್ಟರ್‌ಗಳನ್ನು ಪ್ರಸಾರ ಮಾಡಲಾಗುವುದು” ಎಂದು ಅವರು ಹೇಳಿದರು.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement