ನಡ್ಡಾ, ಬಿ.ಎಲ್‌. ಸಂತೋಷ ಭೇಟಿ ನಂತರ ಪ್ರಧಾನಿ ಮೋದಿ ಭೇಟಿ ಮಾಡಿದ ಸುಮಲತಾ ಅಂಬರೀಷ : ಮಂಡ್ಯ ಟಿಕೆಟ್‌ ಬಗ್ಗೆ ಚರ್ಚೆ..?

ನವದೆಹಲಿ : ಗುರುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌. ಸಂತೋಷ ಅವರನ್ನು ಭೇಟಿಯಾಗಿದ್ದ ಸುಮಲತಾ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಮಂಡ್ಯ ಟಿಕೆಟ್‌ ಬಗ್ಗೆ ಮೋದಿ ಅವರ ಜೊತೆ ಸುಮಲತಾ ಚರ್ಚೆ ನಡೆಸಿದ್ದು, ಪ್ರಧಾನಿ ಟಿಕೆಟ್‌ ಭರವಸೆ ನೀಡಿದ್ದಾರೆ ಎಂದು ಹೇಳಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಬಳಿಕ ಎಕ್ಸ್‌ ನಲ್ಲಿ ಸಂತಸ ಹಂಚಿಕೊಂಡಿರುವ ಸುಮಲತಾ ಅಂಬರೀಷ ಅವರು, ಮಂಡ್ಯದ ಟಿಕೆಟ್‌ ಸಿಗುತ್ತದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸೋಣ ಎಂಬ ಪ್ರಧಾನಿ ಮೋದಿ ಅವರ ಮಾತುಗಳನ್ನು ಸುಮಲತಾ ಅವರು ತಮ್ಮ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದು, ಮುಂದಿನ ಅವಧಿಯಲ್ಲಿಯೂ ರಾಜ್ಯ ಹಾಗೂ ರಾಷ್ಟ್ರದ ಸೇವೆಯಲ್ಲಿ ನಿಮ್ಮೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಬರೆಯುವ ಮೂಲಕ ಪ್ರಧಾನಿ ಮೋದಿ ಮಂಡ್ಯ ಟಿಕೆಟ್‌ ಬಗ್ಗೆ ಭರವಸೆ ನೀಡಿದ್ದಾರೆ ಎಂಬ ಸುಳಿವು ನೀಡಿದ್ದಾರೆ.

ಅಲ್ಲದೆ, ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು, ತಮ್ಮ ನಿರಂತರ ಕಾರ್ಯದೊತ್ತಡದ ನಡುವೆಯೂ ನನಗೆ ಸಮಯ ನೀಡಿದ್ದಕ್ಕಾಗಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ನನ್ನ ಧನ್ಯವಾದಗಳು. ಮೋದಿ ಅವರು ವಿಶ್ವದ ಮಹಾನ್ ನಾಯಕರಾಗಿದ್ದು, ಭಾರತದಂತಹ ಬೃಹತ್ ದೇಶವನ್ನು ಕಳೆದ ಹತ್ತು ವರ್ಷಗಳಿಂದ ಯಶಸ್ವಿಯಾಗಿ ಮುನ್ನಡೆಸುತ್ತಾ, ಭಾರತವನ್ನು ಮುಂದುವರೆದ ರಾಷ್ಟ್ರಗಳ ಸಾಲಿಗೆ ಸೇರಿಸಲು ಪಡುತ್ತಿರುವ ಶ್ರಮ ನಿಜಕ್ಕೂ ಶ್ಲಾಘನೀಯ ಎಂದು ಹೇಳಿದ್ದಾರೆ.
ಈ ಬಾರಿಯ ತಮ್ಮ ಭೇಟಿ ಸಂದರ್ಭದಲ್ಲಿ “ಮುಂದಿನ ದಿನಗಳಲ್ಲಿ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರೆಸೋಣ” ಎಂಬ ನಿಮ್ಮ ಮಾತುಗಳು ನನಗೆ ಸ್ಫೂರ್ತಿದಾಯಕವಾಗಿದ್ದು, ವಿಶ್ವದ ಹೆಮ್ಮೆಯ ನಾಯಕರಾದ ತಮ್ಮ ಅಮೂಲ್ಯ ಮಾರ್ಗದರ್ಶನದಲ್ಲಿ ಜನರ ಸೇವೆ ಮಾಡಲು ಮತ್ತು ಭಾರತವನ್ನು ಮುಂದುವರೆದ ದೇಶಗಳ ಸಾಲಿನಲ್ಲಿ ನೋಡಲು ನಾನು ಉತ್ಸುಕಳಾಗಿದ್ದೇನೆ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಜಾತ್ರಾ ಮಹೋತ್ಸವದ ವೇಳೆ ರಥದ ಚಕ್ರದಡಿ ಸಿಲುಕಿ ಇಬ್ಬರು ಸಾವು

ಮಂಡ್ಯ ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಆಸಕ್ತಿ ವಹಿಸಿ, ಉತ್ತಮ ಯೋಜನೆಗಳನ್ನು ಕಾರ್ಯಗತಗೊಳಿಸಲು ಅನುದಾನವನ್ನು ಒದಗಿಸಿದ್ದಕ್ಕಾಗಿ ನನ್ನ ಮಂಡ್ಯ ಲೋಕಸಭಾ ಕ್ಷೇತ್ರದ ಸ್ವಾಭಿಮಾನಿ ಮತದಾರರು, ಕಾರ್ಯಕರ್ತರು, ನನ್ನ ಬೆಂಬಲಿಗರು ಮತ್ತು ಸಮಸ್ತ ಸಾರ್ವಜನಿಕರ ಪರವಾಗಿ ಪ್ರಧಾನ ಮಂತ್ರಿಗಳಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಮುಂದಿನ ಅವಧಿಯಲ್ಲಿಯೂ ಸಹ, ನಮ್ಮ ರಾಜ್ಯ ಮತ್ತು ರಾಷ್ಟ್ರದ ಸೇವೆಯಲ್ಲಿ ನಿಮ್ಮೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಬರೆದಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್‌ (BJP-JDS) ಮೈತ್ರಿಯಲ್ಲಿ ಯಾರಿಗೆ ಟಿಕೆಟ್‌ ಸಿಗಲಿದೆ ಎನ್ನುವುದು ಇನ್ನೂ ಅಂತಿಮ ಆಗಿಲ್ಲ. ಈ ಹಿಂದೆ ಸುಮಲತಾ ಅಂಬರೀಷ ಅವರು ನಾನು ಈ ಬಾರಿಯೂ ಮಂಡ್ಯದಲ್ಲಿ ಕಣಕ್ಕೆ ಸ್ಪರ್ಧಿಸುವುದಾಗಿ ಹೇಳಿದ್ದರು. ಮೋದಿ ಭೇಟಿಗೂ ಮೊದಲು ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ.ಎಲ್‌. ಸಂತೋಷ ಅವರನ್ನು ಗುರುವಾರ ಭೇಟಿಯಾಗಿದ್ದರು.

ಪ್ರಮುಖ ಸುದ್ದಿ :-   ಬಿಜೆಪಿ ಶಾಸಕ ಹರೀಶ ಪೂಂಜಾ ವಿರುದ್ಧ ಪ್ರಕರಣ ದಾಖಲು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement