ಉತ್ತರಾಖಂಡ : ಅಕ್ರಮ ಮದರಸಾ ತೆರವು ವೇಳೆ ಹಿಂಸಾಚಾರದಲ್ಲಿ 4 ಸಾವು, 250 ಮಂದಿಗೆ ಗಾಯ ; ಕರ್ಫ್ಯೂ ಜಾರಿ, ಶಾಲೆಗಳು ಬಂದ್

ಡೆಹ್ರಾಡೂನ್‌ : ಗುರುವಾರ ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದ ಹಿಂಸಾಚಾರದಲ್ಲಿ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ. ಹಾಗೂ 250ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಹಲ್ದ್ವಾನಿಯ ಬನ್‌ಭೂಲ್‌ಪುರದಲ್ಲಿ “ಕಾನೂನುಬಾಹಿರವಾಗಿ ನಿರ್ಮಿಸಲಾದ” ಮದರಸಾ ಮತ್ತು ಪಕ್ಕದ ಮಸೀದಿಯನ್ನು ಕೆಡವಿದ ನಂತರ ನಿವಾಸಿಗಳು ವಾಹನಗಳು ಮತ್ತು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿ ಕಲ್ಲು ತೂರಾಟ ನಡೆಸಿದ ನಂತರ ಅಧಿಕಾರಿಗಳು ಕರ್ಫ್ಯೂ ವಿಧಿಸಿದರು.
ಆಸ್ಪತ್ರೆಗೆ ದಾಖಲಾದವರಲ್ಲಿ ಹೆಚ್ಚಿನವರು ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯ ಮದರಸಾ ಮತ್ತು ಅದರ ಸಂಕೀರ್ಣದಲ್ಲಿನ ಮಸೀದಿಯ ಕೆಡವುವಿಕೆಯಲ್ಲಿ ತೊಡಗಿಸಿಕೊಂಡಿರುವ ಮುನ್ಸಿಪಲ್ ಕಾರ್ಮಿಕರಾಗಿದ್ದಾರೆ.

ಗುರುವಾರ ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ರಾಜ್ಯ ಎಡಿಜಿ ಕಾನೂನು ಮತ್ತು ಸುವ್ಯವಸ್ಥೆ ಎಪಿ ಅಂಶುಮಾನ ಖಚಿತಪಡಿಸಿದ್ದಾರೆ. 100ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದರು.
ಶುಕ್ರವಾರ ಬೆಳಿಗ್ಗೆ ದೃಶ್ಯಗಳು ಹಲ್ದ್ವಾನಿಯ ಭಾಗಗಳಲ್ಲಿ ಭಾರೀ ಭದ್ರತೆ ನಿಯೋಜನೆಯಾಗಿರುವುದನ್ನು ತೋರಿಸಿದವು.
ಇಡೀ ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ ಎಂದು ಉತ್ತರಾಖಂಡ ಸರ್ಕಾರ ಖಚಿತಪಡಿಸಿದೆ. ಹಿಂಸಾಚಾರದ ನಂತರ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಯಿತು ಮತ್ತು ಆಡಳಿತವು ನೈನಿತಾಲ್‌ನ ಎಲ್ಲಾ ಶಾಲೆಗಳು ಮತ್ತು ಕಾಲೇಜುಗಳನ್ನು ಮುಚ್ಚುವಂತೆ ಆದೇಶಿಸಿತು. ಹಿಂಸಾಚಾರ ಹೆಚ್ಚಾಗುತ್ತಿದ್ದಂತೆ ಹಲ್ದ್ವಾನಿಯಲ್ಲಿ ಎಲ್ಲ ಅಂಗಡಿಗಳನ್ನು ಮುಚ್ಚಲಾಗಿತ್ತು.

ಬುಲ್ಡೋಜರ್ ಕಟ್ಟಡಗಳನ್ನು ನೆಲಸಮಗೊಳಿಸಿದ್ದರಿಂದ ಆಕ್ರೋಶಗೊಂಡ ಮಹಿಳೆಯರು ಸೇರಿದಂತೆ ನಿವಾಸಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಅವರು ಬ್ಯಾರಿಕೇಡ್‌ಗಳನ್ನು ಮುರಿದು ಪೊಲೀಸರೊಂದಿಗೆ ಘರ್ಷಣೆ ನಡೆಸಿದರು. ಗುಂಪು ಪೊಲೀಸರು, ಪುರಸಭೆಯ ಕಾರ್ಯಕರ್ತರು ಮತ್ತು ಪತ್ರಕರ್ತರ ಮೇಲೆ ಕಲ್ಲುಗಳನ್ನು ಎಸೆದರು, ಇದರ ಪರಿಣಾಮವಾಗಿ ಗಾಯಗಳಾದವು ಮತ್ತು ಆಸ್ತಿಪಾಸ್ತಿಗಳಿಗೆ ಹಾನಿಯಾಯಿತು. 20ಕ್ಕೂ ಹೆಚ್ಚು ದ್ವಿಚಕ್ರವಾಹನಗಳು ಮತ್ತು ಭದ್ರತಾ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.
ಪತ್ರಿಕಾಗೋಷ್ಠಿಯಲ್ಲಿ, ನೈನಿತಾಲ್ ಜಿಲ್ಲಾ ಮ್ಯಾಜಿಸ್ಟ್ರೇಟ್ ವಂದನಾ ಸಿಂಗ್ ಅವರು, ಹೈಕೋರ್ಟ್ ಆದೇಶದ ನಂತರ ಅತಿಕ್ರಮಣವನ್ನು ತೆಗೆಯಲಾಗುತ್ತಿದ್ದು, ಹಿಂಸೆಯಲ್ಲಿ ಜನರನ್ನು ಸುಡುವ ಪ್ರಯತ್ನ ನಡೆದಿದೆ. ಸಿಸಿಟಿವಿ ಮೂಲಕ ಆರೋಪಿಗಳನ್ನು ಗುರುತಿಸಲಾಗುತ್ತಿದೆ ಎಂದು ಅವರು ಹೇಳಿದರು.

ಪ್ರಮುಖ ಸುದ್ದಿ :-   ವಿಡಿಯೊ | ಹಾಡಹಗಲೇ ಶಸ್ತ್ರಸಜ್ಜಿತರಿಂದ ಚಿನ್ನಾಭರಣ ಅಂಗಡಿ ದರೋಡೆ ; ಚಿನ್ನ-ನಗದು ಲೂಟಿ, ಹಲವು ಸುತ್ತು ಗುಂಡು ಹಾರಿಸಿ ಪರಾರಿ...!

ಮದರಸಾ ಮತ್ತು ಮಸೀದಿಯು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವ ಸರಕಾರಿ ಜಮೀನಿನಲ್ಲಿ ಕಟ್ಟಲಾಗಿತ್ತು, ನ್ಯಾಯಾಲಯದ ಆದೇಶಕ್ಕೆ ಅನುಗುಣವಾಗಿ ಪೊಲೀಸರು ಮತ್ತು ಪ್ರಾಂತೀಯ ಸಶಸ್ತ್ರ ಕಾನ್ಸ್‌ಟೆಬ್ಯುಲರಿ (ಪಿಎಸಿ) ಸಿಬ್ಬಂದಿ ಸಮ್ಮುಖದಲ್ಲಿ ಕೆಡವಲಾಯಿತು ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಪ್ರಹ್ಲಾದ ಮೀನಾ ತಿಳಿಸಿದ್ದಾರೆ.
ನೆಲಸಮದ ಕಾರ್ಯಾಚರಣೆ ಪ್ರಾರಂಭವಾಗುತ್ತಿದ್ದಂತೆ, ಮಹಿಳೆಯರು ಸೇರಿದಂತೆ ನಿವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗಿಳಿದು ಕ್ರಮವನ್ನು ವಿರೋಧಿಸಿದರು. ಹಿಂಸೆಗಿಳಿದ ಗುಂಪು ಪೊಲೀಸ್ ಗಸ್ತು ಕಾರು ಸೇರಿದಂತೆ ಹಲವು ವಾಹನಗಳಿಗೆ ಬೆಂಕಿ ಹಚ್ಚಿದೆ. ಸಂಜೆ ವೇಳೆಗೆ ಬಂಬೂಲ್‌ಪುರ ಪೊಲೀಸ್ ಠಾಣೆಗೂ ಬೆಂಕಿ ಹಚ್ಚಲಾಯಿತು. ನಂತರ ಜಿಲ್ಲಾ

ಮ್ಯಾಜಿಸ್ಟ್ರೇಟರು ಕಂಡಲ್ಲಿ ಗುಂಡಿಕ್ಕಲು ಆದೇಶಿಸಿದರು.
ಗುರುವಾರ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಡೆಹ್ರಾಡೂನ್‌ನಲ್ಲಿ ಮುಖ್ಯ ಕಾರ್ಯದರ್ಶಿ ರಾಧಾ ರತುರಿ ಮತ್ತು ಡಿಜಿಪಿ ಅಭಿನವಕುಮಾರ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಹಲ್ದ್ವಾನಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಪ್ರತಿಯೊಬ್ಬರೂ ಶಾಂತತೆಯನ್ನು ಕಾಪಾಡಿಕೊಳ್ಳಲು ಮನವಿ ಮಾಡಿದ ಅವರು “ಅರಾಜಕ ಅಂಶಗಳ” ವಿರುದ್ಧ ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಏತನ್ಮಧ್ಯೆ, ಹಲ್ದ್ವಾನಿಯಲ್ಲಿರುವ ಮಸೀದಿ ಮತ್ತು ಮದರಸಾ ಧ್ವಂಸವನ್ನು ತಡೆಯುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಉತ್ತರಾಖಂಡ ಹೈಕೋರ್ಟ್ ಗುರುವಾರ ನಡೆಸಿತು. ಮಲಿಕ್ ಕಾಲೋನಿ ನಿವಾಸಿ ಸಫಿಯಾ ಮಲಿಕ್ ಮತ್ತು ಇತರರು ಸಲ್ಲಿಸಿದ ಅರ್ಜಿಯಲ್ಲಿ, ಅರ್ಜಿದಾರರಿಗೆ ಹಲ್ದ್ವಾನಿ ಮುನ್ಸಿಪಲ್ ಕಾರ್ಪೊರೇಶನ್ ನೀಡಿದ ನೋಟಿಸ್ ಅನ್ನು ಪ್ರಶ್ನಿಸಲಾಗಿದೆ.
ಮದರಸಾ ನೆಲಸಮಗೊಳಿಸುವುದನ್ನು ನಿಲ್ಲಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್) ಮೇಲೆ ಉತ್ತರಾಖಂಡ ಹೈಕೋರ್ಟ್ ಗುರುವಾರ ವಿಚಾರಣೆ ನಡೆಸಿತ್ತು. ಆದಾಗ್ಯೂ, ನ್ಯಾಯಾಲಯವು ಯಾವುದೇ ಪರಿಹಾರ ನೀಡಲಿಲ್ಲ, ಮತ್ತು ಕೆಡಹುವ ಕಾರ್ಯಾಚರಣೆ ಮುಂದುವರಿಯಿತು. ಪ್ರಕರಣದ ಮುಂದಿನ ವಿಚಾರಣೆಯನ್ನು ಫೆಬ್ರವರಿ 14 ರಂದು ನಿಗದಿಪಡಿಸಲಾಗಿದೆ.

ಪ್ರಮುಖ ಸುದ್ದಿ :-   ಸಿಜೆಪಿ ನಾಯಕರ ಜೊತೆ ಸೌಹಾರ್ದಯುತ ಮಾತುಕತೆ ಬಳಿಕ ಧರಣಿ ಅಂತ್ಯಗೊಳಿಸುವಂತೆ ಕೇಂದ್ರ ಸರ್ಕಾರದ ಮನವಿ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement