ಫೆ. 11ರಂದು ಮೈಸೂರಿಗೆ ಅಮಿತ್ ಶಾ ಭೇಟಿ

ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಫೆ.11 ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಭಾನುವಾರ (ಫೆಬ್ರವರಿ 10) ಮೈಸೂರಿಗೆ ಆಗಮಿಸಲಿದ್ದಾರೆ.
ಭಾನುವಾರ ರಾತ್ರಿ 10:50 ಗಂಟೆಗೆ ಮಂಡಕಹಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಂತರ ರಸ್ತೆ ಮಾರ್ಗವಾಗಿ ರಾಡಿಸನ್ ಬ್ಲೂ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಫೆಬ್ರವರಿ 11 ರಂದು ಬೆಳಿಗ್ಗೆ 11 ಗಂಟೆಗೆ ಅಮಿತ್ ಶಾ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ನಾಡದೇವತೆ ಚಾಮುಂಡೇಶ್ವರಿ ದರ್ಶನ‌ ಪಡೆಯಲಿದ್ದಾರೆ. ದರ್ಶನದ ಬಳಿಕ 11:45ಕ್ಕೆ ಹೆಲಿಕಾಪ್ಟರ್​ನಲ್ಲಿ ಸುತ್ತೂರು ಗ್ರಾಮಕ್ಕೆ ತೆರಳಿ, ಸುತ್ತೂರು ಜಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸುತ್ತೂರು ಮಠದಲ್ಲಿ ಊಟ ಮುಗಿಸಿಕೊಂಡು ಮಧ್ಯಾಹ್ನ 2:30ಕ್ಕೆ ರಾಡಿಸನ್ ಬ್ಲೂ ಹೋಟೆಲ್‌ಗೆ ಆಗಮಿಸಲಿದ್ದಾರೆ. ಸುತ್ತೂರು ಜಾತ್ರಾ ಮಹೋತ್ಸವದ ನೆಪದಲ್ಲಿ ಚುನಾವಣೆಗೆ ರಣತಂತ್ರ ಹೆಣೆಯಲು ಕರ್ನಾಟಕಕ್ಕೆ ಆಗಮಿಸಲಿದ್ದು, ಹಲವು ತಂತ್ರಗಾರಿಕೆ ಹಾಗೂ ಚುನಾವಣಾ ಸಿದ್ದತೆಗೆ ಅಮಿತ್‌ ಶಾ ಅವರು ಸೂಚನೆ ನೀಡಿಲಿದ್ದಾರೆ ಎನ್ನಲಾಗಿದೆ. ರಾಜ್ಯ ಬಿಜೆಪಿ ನಾಯಕರ ಜೊತೆಗೆ ಸಭೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement