ಬಾಲಿವುಡ್‌ ನಟ ಮಿಥುನ್ ಚಕ್ರವರ್ತಿ ಆಸ್ಪತ್ರೆಗೆ ದಾಖಲು

ಕೋಲ್ಕತ್ತಾ : ಬಾಲಿವುಡ್ ಹಿರಿಯ ನಟ ಮತ್ತು ರಾಜಕಾರಣಿ ಮಿಥುನ್ ಚಕ್ರವರ್ತಿ ಅವರು ಶನಿವಾರ (ಫೆಬ್ರವರಿ 10) ಎದೆನೋವು ಕಾಣಿಸಿಕೊಂಡ ನಂತರ ಕೋಲ್ಕತ್ತಾದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ಮಾಧ್ಯಮ ವರದಿಗಳ ಪ್ರಕಾರ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಅಸ್ವಸ್ಥರಾಗಿದ್ದರು, ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಡಿಸ್ಕೋ ಡ್ಯಾನ್ಸರ್ ನಟ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆದರೆ, ನಟನ ಕುಟುಂಬ ಸದಸ್ಯರು ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆಸ್ಪತ್ರೆ ಸಹ ಈ ಬಗ್ಗೆ ಇನ್ನೂ ಯಾವುದೇ ಹೇಳಿಕೆ ನೀಡಿಲ್ಲ.
ಜನವರಿ 2024 ರಲ್ಲಿ, ಮೂರು ಬಾರಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಾದ ಮಿಥುನ್‌ ಚಕ್ರವರ್ತಿಗೆ ಭಾರತ ಸರ್ಕಾರವು ಮೂರನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮಭೂಷಣ ಪುರ್ಸಕಅರವನ್ನು ಘೋಷಿಸಿದೆ.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement