ಬೆಂಗಳೂರು : ಮೇಕೆದಾಟು ಪಾದಯತ್ರೆ ವೇಳೆ ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿ ನ್ಯಾಯಾಲಯ ಆದೇಶ ಹೊರಡಿಸಿದೆ ಎಂದು ವರದಿಯಾಗಿದೆ.
ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದ ಹಿನ್ನೆಲೆ ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.
ರಾಮಲಿಂಗಾ ರೆಡ್ಡಿ ವಿರುದ್ಧ ಪೊಲೀಸರು ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದರು. ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದರೂ ರಾಮಲಿಂಗಾ ರೆಡ್ಡಿ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ