ಇದೇ ಮೊದಲ ಬಾರಿಗೆ ಕನ್ನಡ ಸೇರಿ 13 ಪ್ರಾದೇಶಿಕ ಭಾಷೆಗಳಲ್ಲಿ ಸಿಎಪಿಎಫ್‌ (CAPF) ಕಾನ್‌ಸ್ಟೆಬಲ್ ಪರೀಕ್ಷೆ

ನವದೆಹಲಿ : ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (CAPFs) ಕಾನ್‌ಸ್ಟೆಬಲ್‌ಗಳ ನೇಮಕಾತಿಗಾಗಿ ಕಾನ್ಸ್‌ಟೇಬಲ್ (GD) ಪರೀಕ್ಷೆಯನ್ನು ಇದೇ ಮೊದಲ ಬಾರಿಗೆ ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗುತ್ತದೆ.
ಹಿಂದಿ ಮತ್ತು ಇಂಗ್ಲಿಷ್ ಅಲ್ಲದೆ, ಕನ್ನಡ, ಅಸ್ಸಾಮಿ, ಬೆಂಗಾಲಿ, ಗುಜರಾತಿ, ಮರಾಠಿ, ಮಲಯಾಳಂ, ತಮಿಳು, ತೆಲುಗು, ಒಡಿಯಾ, ಉರ್ದು, ಪಂಜಾಬಿ, ಮಣಿಪುರಿ ಮತ್ತು ಕೊಂಕಣಿ ಭಾಷೆಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಗೃಹ ಸಚಿವಾಲಯ ಪ್ರಕಟಿಸಿದೆ.
ದೇಶದಾದ್ಯಂತ 128 ನಗರಗಳಲ್ಲಿ ಸುಮಾರು 48 ಲಕ್ಷ ಅಭ್ಯರ್ಥಿಗಳಿಗೆ ಫೆಬ್ರವರಿ 20 ರಿಂದ ಮಾರ್ಚ್ 7ರ ವರೆಗೆ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (CAPF) ಜಿಡಿ (GD) ಕಾನ್‌ಸ್ಟೆಬಲ್ ಪರೀಕ್ಷೆಯಲ್ಲಿ ಸ್ಥಳೀಯ ಯುವಕರ ಪಾಲ್ಗೊಳ್ಳುವಿಕೆ ಹೆಚ್ಚಿಸಲು ಹಾಗೂ ಪ್ರಾದೇಶಿಕ ಭಾಷೆಗಳನ್ನು ಉತ್ತೇಜಿಸಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ (MHA) ತಿಳಿಸಿದೆ.
ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಪ್ರತಿ ವರ್ಷ ಕಾನ್ಸ್ಟೇಬಲ್ ಜಿಡಿ (GD) ಪರೀಕ್ಷೆಯನ್ನು ನಡೆಸುತ್ತದೆ. ಈ ವರ್ಷ, ಆಯೋಗವು ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ ಮೇಲೆ ತಿಳಿಸಿದ 13 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆಯನ್ನು ನಡೆಸಲು ಅನುಕೂಲವಾಗುವಂತೆ ಗೃಹ ವ್ಯವಹಾರಗಳ ಸಚಿವಾಲಯದ ಜೊತೆ ಎಂಒಯುಗೆ ಸಹಿ ಹಾಕಿದೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ : ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿಯನ್ನು ಬಹಿರಂಗ ಚರ್ಚೆಗೆ ಆಹ್ವಾನಿಸಿದ ನಿವೃತ್ತ ನ್ಯಾಯಮೂರ್ತಿಗಳು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement