ಶ್ರೀರಾಮನ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ : ಕಾಂಗ್ರೆಸ್ಸಿಗೆ ಆಚಾರ್ಯ ಪ್ರಮೋದ್ ಕೃಷ್ಣಂ ತಿರುಗೇಟು

ಲಕ್ನೋ : ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇರೆಗೆ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿರುವ ಕಾಂಗ್ರೆಸ್ ಕ್ರಮಕ್ಕೆ ತಿರುಗೇಟು ನೀಡಿರುವ ಉತ್ತರ ಪ್ರದೇಶ ಕಾಂಗ್ರೆಸ್ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ ಪಕ್ಷವು ತನ್ನನ್ನು ‘ಬಿಡುಗಡೆʼ ಮಾಡಿದ್ದಕ್ಕೆ ಧನ್ಯವಾದ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಿದ ಬೆನ್ನಲ್ಲೇ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪಕ್ಷ ವಿರೋಧಿ ಚಟುವಟಿಕೆಗಳಿಂದಾಗಿ ನನ್ನನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಕಾಂಗ್ರೆಸ್ ಪತ್ರ ಬರೆದಿದೆ ಎಂದು ನನಗೆ ನಿನ್ನೆ ತಿಳಿಯಿತು, ನನ್ನನ್ನು ಬಿಡುಗಡೆ ಮಾಡಿದ್ದಕ್ಕಾಗಿ ನಾನು ಕಾಂಗ್ರೆಸ್‌ಗೆ ಧನ್ಯವಾದ ಹೇಳಲು ಬಯಸುತ್ತೇನೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ. ವೇಣುಗೋಪಾಲ ಅವರು ನಾನು ಮಾಡಿದ್ದು ಯಾವ ಚಟುವಟಿಕೆಗಳು ಪಕ್ಷ ವಿರೋಧಿ ಎಂಬುದನ್ನು ತಿಳಿಸಬೇಕು? ಶ್ರೀರಾಮನ ಹೆಸರನ್ನು ತೆಗೆದುಕೊಳ್ಳುವುದು ಪಕ್ಷ ವಿರೋಧಿಯೇ? ಅಯೋಧ್ಯೆಗೆ ಹೋಗುವುದು ಪಕ್ಷ ವಿರೋಧಿಯೇ?…” ಎಂದು ಅವರು ಕಾಂಗ್ರೆಸ್‌ ನಾಯಕರನ್ನು ಪ್ರಶ್ನಿಸಿದ್ದಾರೆ.

“ನಾನು ರಾಮಭಕ್ತನಾಗಿದ್ದರಿಂದ ರಾಮನನ್ನು 14 ವರ್ಷಗಳ ಕಾಲ ‘ವನವಾಸ’ಕ್ಕೆ ಕಳುಹಿಸಿದಂತೆ ಕಾಂಗ್ರೆಸ್ ಪಕ್ಷವು 6 ವರ್ಷಗಳ ಬದಲಿಗೆ ನನ್ನನ್ನು 14 ವರ್ಷಗಳ ಕಾಲ ಪಕ್ಷದಿಂದ ಹೊರಹಾಕಬೇಕೆಂದು ನಾನು ಬಯಸುತ್ತೇನೆ ಎಂದು ಆಚಾರ್ಯ ಪ್ರಮೋದ ಕೃಷ್ಣಂ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಅಧಿಕಾರ ನೀಡುವ “ಕಲಂ 370 ರದ್ದತಿ ವಿರೋಧಿಸುವಂತಹ ಕಾಂಗ್ರೆಸ್ ಪಕ್ಷವು ನಾನು ಒಪ್ಪದ ಅನೇಕ ನಿರ್ಧಾರಗಳನ್ನು ತೆಗೆದುಕೊಂಡಿದೆ. ಕಾಂಗ್ರೆಸ್ ಇದನ್ನು ವಿರೋಧಿಸಬಾರದಿತ್ತು… ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾಕ್ಕೆ ಹೋಲಿಸಿದ ಡಿಎಂಕೆ ನಾಯಕರನ್ನು ಕಾಂಗ್ರೆಸ್ ಬೆಂಬಲಿಸಬಾರದಿತ್ತು. ಶ್ರೀರಾಮ ಮತ್ತು ರಾಷ್ಟ್ರದ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ನಟ ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಪ್ರಕರಣದ ಆರೋಪಿ ಜೈಲಿನಲ್ಲಿ ಆತ್ಮಹತ್ಯೆ

ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಗೈರಾಗುವ ಪಕ್ಷದ ನಿರ್ಧಾರ “ದುರದೃಷ್ಟಕರ”. ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ಅಧೀರ್ ರಂಜನ್ ಚೌಧರಿ, ಜೈರಾಮ ರಮೇಶ ಮತ್ತು ಇತರ ಖ್ಯಾತ ನಾಯಕರು ಅಯೋಧ್ಯೆಯಲ್ಲಿ ನಡೆಯುವ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ. ಪಕ್ಷವು ಸಮಾರಂಭವನ್ನು ಧಾರ್ಮಿಕ ಕಾರ್ಯಕ್ರಮಕ್ಕಿಂತ ಹೆಚ್ಚಾಗಿ “ಆರ್‌ಎಸ್‌ಎಸ್/ಬಿಜೆಪಿ ಕಾರ್ಯಕ್ರಮ” ಎಂದು ಟೀಕಿಸಿದ್ದಾರೆ.
ಸಚಿನ್ ಪೈಲಟ್ ಅವರನ್ನು ಪಕ್ಷದಲ್ಲಿ ಸಾಕಷ್ಟು ಅಗೌರವಗೊಳಿಸಲಾಗಿದೆ. ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನೂ ಪಕ್ಷದಲ್ಲಿ ಅಗೌರವಗೊಳಿಸಲಾಗುತ್ತಿದೆ… ರಾಹುಲ್ ಗಾಂಧಿ ಅವರ ಯಾತ್ರೆಯಲ್ಲಿ ಅವರು ಯಾಕೆ ಸೇರಿಕೊಳ್ಳುತ್ತಿಲ್ಲ ಎಂದು ನೀವು ಅವರನ್ನೇ ಕೇಳಬೇಕು? ನಮ್ಮ ಅಧ್ಯಕ್ಷರು (ಮಲ್ಲಿಕಾರ್ಜುನ ಖರ್ಗೆ) ಕೇವಲ ರಬ್ಬರ್ ಸ್ಟಾಂಪ್ ಆಗಿರುವುದರಿಂದ ಅವರಿಗೆ ಅಗೌರವ ತೋರಲು ಯಾರು ಸೂಚನೆ ನೀಡುತ್ತಿದ್ದಾರೆ ಎಂಬುದು ಪ್ರಶ್ನೆ ಎಂದು ಹೇಳಿದ್ದಾರೆ.

5 / 5. 2

ನಿಮ್ಮ ಕಾಮೆಂಟ್ ಬರೆಯಿರಿ

advertisement