ಇಂದಿನಿಂದ ವಿಧಾನಮಂಡಲ ಬಜೆಟ್‌ ಅಧಿವೇಶನ

ಬೆಂಗಳೂರು : ವಿಧಾನ ಮಂಡಲದ ಬಜೆಟ್‌ ಅಧಿವೇಶನ ಇಂದಿನಿಂದ (ಫೆಬ್ರವರಿ 12ರಿಂದ) ಆರಂಭವಾಗಲಿದ್ದು, ಫೆ.23ರವರೆಗೆ ನಡೆಯಲಿದೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 16ರಂದು ಬಜೆಟ್‌ ಮಂಡನೆ ಮಾಡಲಿದ್ದಾರೆ.
ಇಂದು, ಸೋಮವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿಧಾನ ಮಂಡಲದ ಉಭಯ ಸದನಗಳನ್ನು ಉದ್ದೇಶಿಸಿ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಕೇಂದ್ರ ಸರ್ಕಾರ ರಾಜ್ಯದ ತೆರಿಗೆ ಪಾಲು ನೀಡಿಲ್ಲ ಎಂಬ ರಾಜ್ಯ ಸರ್ಕಾರದ ಆರೋಪ ಚರ್ಚೆಯಾಗುವ ಸಾಧ್ಯತೆಯಿದೆ.

ಕೇಂದ್ರದಿಂದ ತೆರಿಗೆ ಹಂಚಿಕೆ ತಾರತಮ್ಯ, ಬರ ಪರಿಹಾರ ಬಿಡುಗಡೆ ವಿಳಂಬ, ಶೇ.40ರಷ್ಟು ಕಮಿಷನ್‌ ಆರೋಪ ಸೇರಿದಂತೆ ಪ್ರಮುಖ ವಿಷಯಗಳು ಚರ್ಚೆಯಾಗುವ ಸಾಧ್ಯತೆಯಿದೆ. ಅಲ್ಲದೆ, ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮದ ಹನುಮ ಧ್ವಜ ಘಟನೆ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆಯಿದೆ.
ಫೆ.15ರ ವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದ್ದು, ಫೆ.16ರಂದು ಬಜೆಟ್‌ ಮಂಡನೆಯಾಗಲಿದೆ. ಒಟ್ಟಾರೆ ಹತ್ತು ದಿನಗಳ ಕಾಲ ಅಧಿವೇಶನ ನಡೆಯಲಿದ್ದು, ಫೆ 23ರಂದು ಮುಕ್ತಾಯವಾಗಲಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement