ಮಂಗಳೂರು : ಶ್ರೀರಾಮನಿಗೆ ಅವಹೇಳನ ಮಾಡಿದ ಆರೋಪ ; ಸಂತ ಜೆರೋಸಾ ಶಾಲಾ ಶಿಕ್ಷಕಿ ಅಮಾನತು

ಮಂಗಳೂರು: ಭಗವಾನ್‌ ಶ್ರೀರಾಮನಿಗೆ ಅವಹೇಳನ ಮಾಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಂತ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಅವರನ್ನು ಆಡಳಿತ ಮಂಡಳಿ ಅಮಾನತು ಮಾಡಿದೆ ಎಂದು ವರದಿಯಾಗಿದೆ.
ಘಟನೆ ಖಂಡಿಸಿ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಇಂದು, ಸೋಮವಾರ ಪೋಷಕರು ಶಾಲೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಸ್ಥಳಕ್ಕಾಗಮಿಸಿದ ಆಡಳಿತ ಮಂಡಳಿ ಸದಸ್ಯರು, ತನಿಖೆ ಪೂರ್ಣಗೊಳ್ಳುವವರೆಗೂ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದರು.
ಶಾಲೆಯ ಏಳನೇ ತರಗತಿ ಶಿಕ್ಷಕಿ ಪ್ರಭಾ ವಿರುದ್ಧ ಶಾಲೆಯ ಮುಂಭಾಗದಲ್ಲಿ ನೂರಾರು ಸಂಖ್ಯೆಯಲ್ಲಿ ಪೋಷಕರು, ಹಿಂದೂ ಕಾರ್ಯಕರ್ತರು ಜಮಾವಣೆಗೊಂಡಿದ್ದರು.

ಶಾಸಕ ವೇದವ್ಯಾಸ್ ಕಾಮತ್ ಕೂಡ ಆಗಮಿಸಿದ್ದು, ಪ್ರತಿಭಟನಾಕಾರರು ಶಾಲೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಶಾಲೆ ಗೇಟ್ ಮುಂಭಾಗವೇ ಅವರನ್ನು ತಡೆದಿದ್ದರು.
ಆಡಳಿತ ಮಂಡಳಿಯ ಸದಸ್ಯರು ಶಿಕ್ಷಕಿಯನ್ನು ಅಮಾನತು ಮಾಡಿರುವ ಬಗ್ಗೆ ಮಾಹಿತಿ ನೀಡಿದರು. ಶಿಕ್ಷಣ ಇಲಾಖೆ ಪ್ರಕರಣದ ಆಂತರಿಕ ತನಿಖೆ ನಡೆಸಲಿದ್ದು, ತನಿಖಾ ವರದಿ ಆಧಾರದ ಮೇಲೆ ಕಾನೂನು ಕ್ರಮ ನಡೆಯಲಿದೆ. ಫೆಬ್ರವರಿ 8ರಂದು ಪಾಠ ಮಾಡುವಾಗ ಶಿಕ್ಷಕಿ ಸಿಸ್ಟರ್ ಪ್ರಭಾ ಅಯೋಧ್ಯೆ ರಾಮಮಂದಿರ ಹಾಗೂ ಪ್ರಭು ಶ್ರೀರಾಮನ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ತಮ್ಮ ಪೋಷಕರ ಬಳಿ ಹೇಳಿದ್ದರು. ನಂತರ ಪೋಷಕರು ಮತ್ತು ಹಿಂದೂ ಕಾರ್ಯಕರ್ತರು ಶಿಕ್ಷಕಿ ವಿರುದ್ಧ ಪ್ರತಿಭಟಿಸಿದ್ದರು.

ಪ್ರಮುಖ ಸುದ್ದಿ :-   ಶಿರಸಿ: ಕಚೇರಿಗೆ ತೆರಳಿ ಬಿಜೆಪಿ ಸಂಸದ ಕಾಗೇರಿ ಅಭಿನಂದಿಸಿದ ಕಾಂಗ್ರೆಸ್ ಶಾಸಕ ಭೀಮಣ್ಣ ನಾಯ್ಕ...!

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement