ಬಜೆಟ್‌ ಅಧಿವೇಶನ : ಕೇಸರಿ ಶಾಲು ಧರಿಸಿ ಕಲಾಪದಲ್ಲಿ ಪಾಲ್ಗೊಂಡ ಬಿಜೆಪಿ ಸದಸ್ಯರು

ಬೆಂಗಳೂರು: ಸೋಮವಾರದಿಂದ ವಿಧಾನಮಂಡಲ ಜಂಟಿ ಅಧಿವೇಶನ ಆರಂಭವಾಗಿದ್ದು, ಅಧಿವೇಶನದ ಮೊದಲ ದಿನವೇ ಬಿಜೆಪಿ ಶಾಸಕರು ಕೇಸರಿ ಶಾಲು ಧರಿಸಿ ಆಗಮಿಸಿದ್ದು ವಿಶೇಷವಾಗಿತ್ತು.
ಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ, ಉಪನಾಯಕ ಅರವಿಂದ ಬೆಲ್ಲದ ಸೇರಿದಂತೆ ಬಿಜೆಪಿಯ ಎಲ್ಲ ಶಾಸಕರು ಕೇಸರಿ ಶಾಲು ಹಾಕಿಕೊಂಡು ಸದನದಲ್ಲಿ ಕುಳಿತಿದ್ದರು.
ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ವಿಚಾರ ರಾಜ್ಯವ್ಯಾಪಿ ಚರ್ಚೆ ಆಗುತ್ತಿದೆ. ಈ ಬೆನ್ನಲ್ಲೇ ಬಿಜೆಪಿ ಶಾಸಕರು ಅಧಿವೇಶನಕ್ಕೆ ಕೇಸರಿ ಶಾಲು ಧರಿಸಿ ಆಗಮಿಸಿ ಕಲಾಪದಲ್ಲಿ ಪಾಲ್ಗೊಂಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ವಿಧಾನಸಭೆ ವಿಪಕ್ಷ ನಾಯಕ ಆರ್.‌ ಅಶೋಕ, ಉಪನಾಯಕ ಅರವಿಂದ ಬೆಲ್ಲದ, ರಾಜ್ಯ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನಿಲಕುಮಾರ, ವಿಧಾನ ಪರಿಷತ್‌ ಸದಸ್ಯ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಎಲ್ಲ ಬಿಜೆಪಿ ಶಾಸಕರು ಹಾಗೂ ವಿಧಾನ ಪರಿಷತ್‌ ಸದಸ್ಯರು ಕೇಸರಿ ಶಾಲನ್ನು ಧರಿಸಿ ಬಂದಿದ್ದರು.
ರಾಜ್ಯಪಾಲ ಥಾವರಚಂದ್ ಗೆಹ್ಲೋಟ್‌ ಅವರು ಬೆಳಿಗ್ಗೆ 11ಕ್ಕೆ ಸರಿಯಾಗಿ ವಿಧಾನಸಭೆಗೆ ಆಗಮಿಸಿದರು. ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಸಚಿವ ಎಚ್.ಕೆ. ಪಾಟೀಲ ಮತ್ತಿತರರು ರಾಜ್ಯಪಾಲರನ್ನು ಸ್ವಾಗತಿಸಿದರು. ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರನ್ನು ಒಳಗೊಂಡ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಮಾತನಾಡಿದರು.
ಹತ್ತು ದಿನಗಳ ಕಾಲ ನಡೆಯುವ ವಿಧಾನಮಂಡಲ ಅಧಿವೇಶನದಲ್ಲಿ, ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 16ರಂದು ಬಜೆಟ್​ ಮಂಡನೆ ಮಾಡಲಿದ್ದಾರೆ.

ಪ್ರಮುಖ ಸುದ್ದಿ :-   ಈಜಲು ತೆರಳಿದ್ದ ನಾಲ್ವರು ಬಾಲಕರು ನೀರುಪಾಲು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement