ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಫೆಬ್ರವರಿ 17ರಂದು ಬಸವಣ್ಣನವರ ಭಾವಚಿತ್ರ ಹಾಕಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: 12 ನೇ ಶತಮಾನದ ಸಾಮಾಜಿಕ ಕ್ರಾಂತಿಯ ಹರಿಕಾರ, ವಿಶ್ವಮಾನವತಾವಾದಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಫೆಬ್ರವರಿ 17ರಂದು ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಇಂದು, ಮಂಗಳವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬಸವಣ್ಣ ಭಾವಚಿತ್ರ ಅನಾವರಣಗೊಳಿಸಿ ಮಾತನಾಡಿದ ಅವರು, ಬಸವಣ್ಣನವರ ಭಾವಚಿತ್ರದಲ್ಲಿ ‘ವಿಶ್ವ ಗುರು ಬಸವಣ್ಣ -ಸಾಂಸ್ಕೃತಿಕ ನಾಯಕ’ ಎಂದು ನಮೂದಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.

ನಾಲ್ಕು ಮಹಾನ್‌ ವ್ಯಕ್ತಿಗಳನ್ನು ಭಾರತ ಮರೆಯಲು ಸಾಧ್ಯವಿಲ್ಲ: ಬುದ್ಧ, ಬಸವ, ಮಹಾತ್ಮಾ ಗಾಂಧಿ ಹಾಗೂ ಡಾ. ಬಿ.ಆರ್‌. ಅಂಬೇಡ್ಕರ, ಅವರನ್ನು ಭಾರತ ದೇಶ ಮರೆಯಲು ಸಾಧ್ಯವೇ ಇಲ್ಲ. ಇವರೆಲ್ಲ ಸಮಾಜದಲ್ಲಿರುವ ಅಂಕು ಡೊಂಕು ತಿದ್ದಿದವರು. ಸಮಾಜದ ಬದಲಾವಣೆಗಾಗಿ ಅಸಮಾನತೆ ಹೋಗಿ ಸಮಾನತೆ ಬರಬೇಕು ಎಂದು ಹೇಳಿದರು.

ಬಸವಣ್ಣನವರ ಅನುಭವ ಮಂಟಪ ಮಾದರಿ…
ಸಂಸದೀಯ ವ್ಯವಸ್ಥೆ ತಮ್ಮಿಂದ ಬಂದಿದ್ದು ಎಂದು ಬ್ರಿಟಿಷರು ಹೇಳುತ್ತಾರೆ. ಆದರೆ ಅದು ಬಸವಣ್ಣನವರ ಕಾಲದಲ್ಲೇ ಬಂದಿದೆ. ಅನುಭವ ಮಂಟಪದ ಮೂಲಕ ಸಂಸದೀಯ ವ್ಯವಸ್ಥೆಗೆ ಅವರು ನಾಂದಿ ಹಾಡಿದ್ದಾರೆ. ತಂದಿದ್ದಾರೆ. ಆಗಲೇ ಜನರ ಧ್ವನಿ ಎತ್ತಲು ಬಸವಣ್ಣ ಅನುಭವ ಮಂಟಪ ಮಾಡಿದ್ದರು. 850 ವರ್ಷಗಳ ಹಿಂದೆಯೇ ಬಸವಣ್ಣವರು ಕಂದಾಚಾರವನ್ನು ಹೊಗಲಾಡಿಸಲು ಶ್ರಮಿಸಿದ್ದರು ಎಂದರು.

ಪ್ರಮುಖ ಸುದ್ದಿ :-   ಸಿಎಂ ನಿಂದನೆ : ಅನಂತಕುಮಾರ​ ಹೆಗಡೆ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement