ಚಲನಚಿತ್ರ ನಿರ್ಮಾಪಕ ರಾಕ್‌ ಲೈನ್ ವೆಂಕಟೇಶಗೆ ಶಾಕ್‌ ನೀಡಿದ ಬಿಬಿಎಂಪಿ : ರಾಕ್‌ ಲೈನ್ ಮಾಲ್​ ಗೆ ಬೀಗ

ಬೆಂಗಳೂರು: ತೆರಿಗೆ ಪಾವತಿಸದ ಕಾರಣ ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿ ಬರುವ ಚಲನಚಿತ್ರ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ ಅವರ ಒಡೆತನದ ರಾಕ್‌ಲೈನ್ ಮಾಲ್ ಅನ್ನು ಇಂದು, ಬುಧವಾರ ಪಾಲಿಕೆ ಕಂದಾಯ ಅಧಿಕಾರಿಗಳು ಬೀಗ ಹಾಕಿದ್ದಾರೆ.
ದಾಸರಹಳ್ಳಿ ವಲಯದ ಬಿಬಿಎಂಪಿ ಕಂದಾಯ ಅಧಿಕಾರಿಗಳು ಇಂದು ಬುಧವಾರ ಬೆಳ್ಳಂಬೆಳಿಗ್ಗೆ ರಾಕ್‌ಲೈನ್ ಮಾಲ್ ಬಳಿ ತೆರಳಿಬೀಗ ಜಡಿದಿದ್ದಾರೆ. ರಾಕ್​ಲೈನ್ ಮಾಲ್​ 2011 ರಿಂದ 2022-23 ರವರೆಗೆ ಒಟ್ಟು 11.51 ಕೋಟಿ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡಿದೆ ಎಂದು ಹೇಳಲಾಗಿದೆ.
ಹಲವು ವರ್ಷದಿಂದ ಕೋಟ್ಯಾಂತರ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡ ಕಾರಣ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಂದಾಯ ಅಧಿಕಾರಿಗಳು ಈ ಸಂಬಂಧ ಅನೇಕ ಬಾರಿ ನೋಟಿಸ್‌ ನೀಡಿದ್ದರು. ಆದರೂ ತೆರಿಗೆ ಹಣ ಪಾವತಿಸದ ಕಾರಣ ಸೀಜ್‌ ಮಾಡಲಾಗಿದೆ.
ಸ್ಥಳದಲ್ಲಿ ವಲಯ ಆಯುಕ್ತರಾದ ಪ್ರೀತಿ ಗೆಹ್ಲೋಟ್, ವಲಯ ಜಂಟಿ ಆಯುಕ್ತರಾದ ಬಾಲಶೇಖರ, ದಾಸರಹಳ್ಳಿ ವಲಯ ಅಧಿಕಾರಿಗಳು, ಕಂದಯಾ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ಮಾರ್ಷಲ್ ಗಳು, ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಮುಖ ಸುದ್ದಿ :-   ಪ್ರಜ್ವಲ್‌ ಲೈಂಗಿಕ ದೌರ್ಜನ್ಯ ಹಗರಣ: ಮಧ್ಯಂತರ ಜಾಮೀನು ಕೋರಿ ಜನಪ್ರತಿನಿಧಿಗಳ ನ್ಯಾಯಾಲಯದ ಮೆಟ್ಟಿಲೇರಿದ ರೇವಣ್ಣ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement