ಬೆಂಗಳೂರು : ರಾಜ್ಯಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮೂರು ರಾಜ್ಯಗಳ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಬುಧವಾರ ಬಿಡುಗಡೆಗೊಳಿಸಿದ್ದು, ಕರ್ನಾಟಕದಿಂದ ಮೂವರು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ.
ಕರ್ನಾಟಕದ ಜೊತೆಗೆ ತೆಲಂಗಾಣ ಹಾಗೂ ಮಧ್ಯಪ್ರದೇಶದ ಅಭ್ಯರ್ಥಿಗಳ ಪಟ್ಟಿಯನ್ನೂ ಬಿಡುಗಡೆಗೊಳಿಸಲಾಗಿದ್ದು, ಅಜಯ್ ಮಾಕೇನ್, ಡಾ. ಸೈಯ್ಯದ್ ನಾಸೀರ್ ಹುಸೇನ್ ಹಾಗೂ ಜಿ.ಸಿ. ಚಂದ್ರಶೇಖರ್ ಅಭ್ಯರ್ಥಿಗಳಾಗಿ ಆಯ್ಕೆಯಾಗಿದ್ದಾರೆ. ಹಾಗೂ ಕಾಂಗ್ರೆಸ್ ನಾಯಕ ಹಾಗೂ ದೆಹಲಿಯ ಅಜಯ ಮಾಕನ್ ಅವರಿಗೆ ಕರ್ನಾಟಕದಿಂದ ಟಿಕೆಟ್ ನೀಡಲಾಗಿದೆ.
ಕರ್ನಾಟಕದಿಂದ ನಾಲ್ಕು ಸ್ಥಾನಗಳು ಖಾಲಿಯಾಗಲಿದ್ದು, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ, ಕಾಂಗ್ರೆಸ್ಸಿನ ಜಿ.ಸಿ. ಚಂದ್ರಶೇಖರ, ಎಲ್.ಹನುಮಂತಯ್ಯ, ನಸೀರ್ ಅಹಮದ್ ಅವರ ಅವಧಿ ಮುಕ್ತಾಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ನಾಲ್ಕು ಸ್ಥಾನಗಳಿಗೆ ಫೆಬ್ರವರಿ 27ರಂದು ಚುನಾವಣೆ (Election for Four Seats) ನಡೆಯಲಿದೆ. ನಾಮಪತ್ರ ಸಲ್ಲಿಸಲು ಗುರುವಾರ, ಫೆ.15 ಕೊನೆ ದಿನ. ಗುರುವಾರ ಬೆಳಿಗ್ಗೆ ಅಜಯ್ ಮಾಕನ್, ಜಿ.ಸಿ. ಚಂದ್ರಶೇಖರ ಹಾಗೂ ನಾಸಿರ್ ಹುಸೇನ್ ಅವರು ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.
ಕಾಂಗ್ರೆಸ್ ಎಲ್.ಹನುಮಂತಯ್ಯ ಅವರ ಬದಲಿಗೆ ಅಜಯ ಮಾಕನ್ ಅವರಿಗೆ ಟಿಕೆಟ್ ನೀಡಲಾಗಿದೆ. ಕಾಂಗ್ರೆಸ್ ವಿಧಾನಸಭೆಯಲ್ಲಿ ಹೆಚ್ಚು ಸ್ಥಾನ ಹೊಂದಿರುವ ಕಾರಣ ಮೂವರು ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಕಳುಹಿಸಬಹುದಾಗಿದೆ. ಹೀಗಾಗಿ ಮೂವರು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ. ಬಿಜೆಪಿಯಿಂದ ನಾರಾಯಣ ಭಾಂಡಗೆ ಅವರ ಹೆಸರನ್ನು ಪ್ರಕಟಿಸಲಾಗಿದೆ.
ತೆಲಂಗಾಣದಿಂದ ರೇಣುಕಾ ಚೌಧರಿ, ಎಂ ಅನಿಲಕುಮಾರ ಯಾದವ್ ಅಭ್ಯರ್ಥಿಗಳು, ಮಧ್ಯಪ್ರದೇಶದಿಂದ ಅಶೋಕ ಸಿಂಗ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ