ವೀಡಿಯೊ..| ಪೊಲೀಸರ ಜೊತೆ ಘರ್ಷಣೆಯಲ್ಲಿ ಗಾಯಗೊಂಡ ಪಶ್ಚಿಮ ಬಂಗಾಳ ಬಿಜೆಪಿ ಮುಖ್ಯಸ್ಥ : ಆಸ್ಪತ್ರೆಗೆ ದಾಖಲು

ಕೋಲ್ಕತ್ತಾ : ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ಮಧ್ಯೆ ವಾಗ್ವಾದ ನಡೆದ ನಂತರ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರಿಂದ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ ಅವರು ಗಾಯಗೊಂಡಿದ್ದಾರೆ. ಮಜುಂದಾರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ವರದಿಯಾಗಿದೆ.
ವರದಿಯ ಪ್ರಕಾರ, ಪೊಲೀಸ್ ಸಿಬ್ಬಂದಿ ಮಜುಂದಾರ್ ಅವರನ್ನು ಅವರನ್ನು ಅವರಿದ್ದ ಹೋಟೆಲ್‌ಗೆ ಕರೆದುಕೊಂಡು ಹೋಗಲು ಪ್ರಯತ್ನಿಸುತ್ತಿದ್ದರು, ಇದರ ಪರಿಣಾಮವಾಗಿ ಬಿಜೆಪಿ ಕಾರ್ಯಕರ್ತರೊಂದಿಗೆ ಮಾತಿನ ಚಕಮಕಿ ನಡೆಯಿತು. ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದು, ರಾಜ್ಯ ಘಟಕದ ಮುಖ್ಯಸ್ಥ ಸುಕಾಂತ ಮಜುಂದಾರ ಸೇರಿದಂತೆ ಹಲವು ಬಿಜೆಪಿ ಕಾರ್ಯಕರ್ತರು ಗಾಯಗೊಂಡಿದ್ದಾರೆ.
ಮಜುಂದಾರ್ ಅವರನ್ನು ಬಸಿರ್‌ಹತ್ ಮಲ್ಟಿ ಫೆಸಿಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.
ಮಜುಂದಾರ ಅವರು ಬಿಜೆಪಿ ಕಾರ್ಯಕರ್ತರೊಂದಿಗೆ ಸಂದೇಶಖಾಲಿಗೆ ತೆರಳಿದ್ದರು ಎಂದು ವರದಿಗಳು ತಿಳಿಸಿವೆ, ಅಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಶಾಜಹಾನ್ ಶೇಖ್ ಮತ್ತು ಅವರ ಸಹಾಯಕರು ತಮ್ಮ ವಿರುದ್ಧ ನಡೆಸಿದ ದೌರ್ಜನ್ಯದ ವಿರುದ್ಧ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದಾರೆ.

ಇಂದು, ಗುರುವಾರ ಮುಂಜಾನೆ, ಉತ್ತರ 24 ಪರಗಣ ಜಿಲ್ಲೆಯ ಟಾಕಿ ಪ್ರದೇಶದಲ್ಲಿ ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥರನ್ನು ಪೊಲೀಸರು ತಡೆದಿದ್ದರು. ಬಿಜೆಪಿ ನಾಯಕರು ಸಂದೇಶಖಾಲಿ ಕಡೆಗೆ ಹೋಗುವುದನ್ನು ತಡೆಯಲು ಭಾರಿ ಪೊಲೀಸ್ ತುಕಡಿ ನಿಯೋಜಿಸಲಾಗಿದ್ದು, ಅಲ್ಲಿ ಸೆಕ್ಷನ್ 144 ರ ಅಡಿಯಲ್ಲಿ ನಿರ್ಬಂಧಗಳನ್ನು ವಿಧಿಸಲಾಗಿದೆ.
ಸಂದೇಶ್‌ಖಾಲಿಯಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳದ ಆರೋಪದ ಮೇಲೆ ಬಿಜೆಪಿ ಆಂದೋಲನದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಬಸಿರ್‌ಹತ್‌ನಲ್ಲಿರುವ ಎಸ್‌ಪಿ ಕಚೇರಿಯ ಸುತ್ತಮುತ್ತ ನಿಷೇಧಾಜ್ಞೆಗಳನ್ನು ಧಿಕ್ಕರಿಸಲು ಪ್ರಯತ್ನಿಸಿದ ನಂತರ ಮಂಗಳವಾರ ಬಿಜೆಪಿ ಬೆಂಬಲಿಗರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ ನಂತರ ಈ ಬೆಳವಣಿಗೆ ನಡೆದಿದೆ.
ಅಧಿಕಾರಿಗಳ ಪ್ರಕಾರ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಕ್ರಿಮಿನಲ್ ಪ್ರೊಸೀಜರ್ ಕೋಡ್ (ಸಿಆರ್‌ಪಿಸಿ) ಯ ಸೆಕ್ಷನ್ 144 ಅನ್ನು ವಿಧಿಸಲಾಗಿದೆ, ಬಸಿರ್‌ಹತ್‌ನಲ್ಲಿರುವ ಎಸ್‌ಪಿ ಕಚೇರಿಯ ಹೊರಗೆ ಯಾವುದೇ ಅಹಿತಕರ ಘಟನೆ ನಡೆಯುವುದನ್ನು ತಡೆಯಲು ಭಾರಿ ಪೊಲೀಸ್ ತುಕಡಿಯನ್ನು ನಿಯೋಜಿಸಲಾಗಿದೆ.

ಪ್ರಮುಖ ಸುದ್ದಿ :-   ರೋಹಿತ್ ವೇಮುಲಾ ದಲಿತನಲ್ಲ : ಪೊಲೀಸರ ಅಂತಿಮ ವರದಿ ; ಎಲ್ಲ ಆರೋಪಿಗಳಿಗೆ ಕ್ಲೀನ್ ಚಿಟ್

ಸಂದೇಶಖಾಲಿ ಪರಿಸ್ಥಿತಿಯನ್ನು ವಿರೋಧಿಸಿ ಪಕ್ಷದ ಮುಖಂಡರು ಮತ್ತು ಬೆಂಬಲಿಗರು/ಕಾರ್ಯಕರ್ತರು ಎಸ್‌ಪಿ ಕಚೇರಿಗೆ ಘೇರಾವ್ ಮಾಡಲಿದ್ದಾರೆ ಎಂದು ಪಶ್ಚಿಮ ಬಂಗಾಳ ಬಿಜೆಪಿ ಘೋಷಿಸಿತ್ತು. ಮಜುಂದಾರ್ ನೇತೃತ್ವದಲ್ಲಿ ಕೇಸರಿ ಪಕ್ಷದ ಕಾರ್ಯಕರ್ತರು ಪೊಲೀಸ್ ಬ್ಯಾರಿಕೇಡ್‌ಗಳನ್ನು ಮುರಿದು ಎಸ್‌ಪಿ ಕಚೇರಿಯತ್ತ ಮೆರವಣಿಗೆ ನಡೆಸಲು ಪ್ರಯತ್ನಿಸಿದರು, ಆದರೆ ಅವರನ್ನು ಚದುರಿಸಲು ಲಾಠಿ ಚಾರ್ಜ್ ಮಾಡಿದ ಪೊಲೀಸ್ ಸಿಬ್ಬಂದಿ ಅವರನ್ನು ತಡೆದರು.
“ಇದು ಬಂಗಾಳದಲ್ಲಿ ಕಾನೂನುಬಾಹಿರ ಪರಿಸ್ಥಿತಿ. ರಾಜ್ಯ ಸರ್ಕಾರ ಸತ್ಯವನ್ನು ಮರೆಮಾಚಲು ಪ್ರಯತ್ನಿಸುತ್ತಿದೆ ಎಂದು ಮಜುಂದಾರ್ ಆರೋಪಿಸಿದ್ದಾರೆ. ಬಿಜೆಪಿ ರಾಜ್ಯದ ವಾತಾವರಣವನ್ನು ಹಾಳು ಮಾಡಲು ಪ್ರಯತ್ನಿಸುತ್ತಿದೆ ಎಂದು ಆಡಳಿತಾರೂಢ ಟಿಎಂಸಿ ಆರೋಪಿಸಿದೆ.
ಬಿಜೆಪಿಯು ಕದಡಿದ ನೀರಿನಲ್ಲಿ ಮೀನು ಹಿಡಿಯಲು ಪ್ರಯತ್ನಿಸುತ್ತಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಎಲ್ಲವನ್ನೂ ಮಾಡುತ್ತಿದ್ದಾರೆ ಆದರೆ ಬಿಜೆಪಿ ಅಡ್ಡಿಪಡಿಸಲು ಬಯಸುತ್ತದೆ ಎಂದು ಟಿಎಂಸಿ ವಕ್ತಾರ ಕುನಾಲ ಘೋಷ್ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ ; ಮತ್ತೊಂದು ಕ್ಷೇತ್ರದಿಂದಲೂ ರಾಹುಲ್‌ ಗಾಂಧಿ ಸ್ಪರ್ಧೆ

ಸಂದೇಶಖಾಲಿ ಆಂದೋಲನ
ಸಂದೇಶಖಾಲಿಯಲ್ಲಿ ಮಹಿಳೆಯರು ಟಿಎಂಸಿ ನಾಯಕ ಶಾಜಹಾನ್ ಶೇಖ್ ಮತ್ತು ಆತನ ಸಹಾಯಕರು ತಮ್ಮ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ಕಳೆದ ಕೆಲವು ದಿನಗಳಿಂದ ಆಂದೋಲನ ನಡೆಸುತ್ತಿದ್ದಾರೆ.
ಪ್ರತಿಭಟನಕಾರರು ಶೇಖ್ ಮತ್ತು ಅವರ “ಗ್ಯಾಂಗ್” ಪ್ರದೇಶದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುವುದರ ಜೊತೆಗೆ ಬಲವಂತವಾಗಿ ಭೂಮಿಯನ್ನು ವಶಪಡಿಸಿಕೊಳ್ಳುತ್ತಿದ್ದಾರೆ ಎಂದು ಹೇಳುತ್ತಾರೆ.
ಪಡಿತರ ಹಗರಣಕ್ಕೆ ಸಂಬಂಧಿಸಿದಂತೆ ಸಂದೇಶಖಾಲಿಯಲ್ಲಿರುವ ಅವರ ಮನೆ ಮೇಲೆ ದಾಳಿ ನಡೆಸಲು ಹೋದ ಜಾರಿ ನಿರ್ದೇಶನಾಲಯದ (ಇಡಿ) ತಂಡದ ಮೇಲೆ ಗುಂಪೊಂದು ದಾಳಿ ಮಾಡಿದ ನಂತರ ಕಳೆದ ತಿಂಗಳಿನಿಂದ ಶೇಖ್ ತಲೆಮರೆಸಿಕೊಂಡಿದ್ದಾನೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement