ರಾಜ್ಯಸಭೆ ಚುನಾವಣೆ: ಐದನೇ ಅಭ್ಯರ್ಥಿಯಾಗಿ ಜೆಡಿಎಸ್- ಬಿಜೆಪಿ ಮೈತ್ರಿಯಿಂದ ಕುಪೇಂದ್ರ ರೆಡ್ಡಿ ಕಣಕ್ಕೆ ; ಇದರ ಹಿಂದಿನ ಲೆಕ್ಕಾಚಾರ ಏನು..?

ಬೆಂಗಳೂರು : ಬಿಜೆಪಿಯ ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ಸಲಹೆ ಮೇರೆಗೆ ಎನ್​ಡಿಎ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕೆ ಇಳಿಸಲು ತೀರ್ಮಾನಿಸಲಾಗಿದೆ ಎಂದು ಜೆಡಿಎಸ್ ನಾಯಕ ಹೆಚ್​​.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ಎನ್​ಡಿಎ ಮೈತ್ರಿಯ ಎರಡನೇ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಇಂದು, ಗುರುವಾರ ನಾಮಪತ್ರ ಸಲ್ಲಿಸಲಿದ್ದಾರೆ. ಈ ಮೂಲಕ ರಾಜ್ಯಸಭಾ ಚುನಾವಣಾ ಅಖಾಡ ಮತ್ತಷ್ಟು ರಂಗೇರಲಿದೆ. ಇದರಿಂದಾಗಿ ಈಗ ಕಾಂಗ್ರೆಸ್ ನಾಯಕರಿಗೆ ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳಬೇಕಾದ ಆತಂಕ ಸೃಷ್ಟಿಯಾಗಿದೆ.
ಕಾಂಗ್ರೆಸ್​​ನಲ್ಲಿರುವ ಅಸಮಾಧಾನವನ್ನೇ ಬಂಡಾವಳ ಮಾಡಿಕೊಳ್ಳಲು ಬಿಜೆಪಿ ಹಾಗೂ ಜೆಡಿಎಸ್ ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕಿಳಿಸಿವೆ ಎಂದು ಹೇಳಲಾಗುತ್ತಿದೆ.

ನಾಲ್ಕು ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್‌ ಮೂವರು ಅಭ್ಯರ್ಥಿಗಳು ಹಾಗೂ ಬಿಜೆಪಿ ಒಬ್ಬರನ್ನು ಕಣಕ್ಕಿಳಿಸಿದೆ. ಈಗ ಐದನೇ ಅಭ್ಯರ್ಥಿಯಾಗು ಕುಪೇಂದ್ರ ರೆಡ್ಡಿ ಕಣಕ್ಕೆ ಇಳಿದರೆ ಚುನಾವಣೆ ನಡೆಯಲಿದೆ.
ವಿಧಾನಸಭೆ ಬಲಾಬಲದ ಪ್ರಕಾರ ಕಾಂಗ್ರೆಸ್ ಮೂರು ಸ್ಥಾನ, ಬಿಜೆಪಿ ಒಂದು ಸ್ಥಾನ ಸುಲಭವಾಗಿ ಗೆಲ್ಲಬಹುದು. ಕಾಂಗ್ರೆಸ್ ಸಂಖ್ಯಾಬಲ 135 ಇದ್ದರೆ ಬಿಜೆಪಿ ಸಂಖ್ಯಾಬಲ 66 ಆಗಿದ್ದು, ಕಾಂಗ್ರೆಸ್‌ ಮೂವರು ಅಭ್ಯರ್ಥಿಗಳನ್ನು ಸುಲಭವಾಗಿ ಗೆಲ್ಲಿಸಬಹುದು. ಅದೇರೀತಿ ಬಿಜೆಪಿ ಒಬ್ಬ ಅಭ್ಯರ್ಥಿಯನ್ನು ಸುಲಭವಾಗಿ ಗೆಲ್ಲಿಸಬಹುದು. ಆದರೂ ಬಿಜೆಪಿ ಬಳಿ 21 ಮತಗಳು ಉಳಿಯಲಿದೆ. ಇದು ಜೆಡಿಎಸ್‌ ೧೯ ಶಾಸಕರನ್ನು ಹೊಂದಿದ್ದು, ಬಿಜೆಪಿ ಮತಗಳು ಜೆಡಿಎಸ್​ಗೆ ವರ್ಗಾವಣೆ ಆದರೆ ಜೆಡಿಎಸ್ ಅಭ್ಯರ್ಥಿ ಗೆಲ್ಲಲು ಕೇವಲ 5 ಮತಗಳು ಬೇಕಾಗುತ್ತವೆ. ನಾಲ್ವರು ಪಕ್ಷೇತರರಿದ್ದಾರೆ. ಈಗಾಗಲೇ ಶಾಸಕ ಗಾಲಿ ಜನಾರ್ದನ ರೆಡ್ಡಿ ಜೊತೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಕಾಂಗ್ರೆಸ್‌ ಶಾಸಕರಿಂದ ಅಡ್ಡ ಮತದಾನ ನಡೆದರೆ ಜೆಡಿಎಸ್‌ ಅಭ್ಯರ್ಥಿಗೆ ಛಾನ್ಸ್‌ ಹೊಡೆಯಬಹುದು. ಹೀಗಾಗಿ ಈ ರಣತಂತ್ರ ರೂಪಿಸಲಾಗಿದೆ ಎನ್ನಲಾಗಿದೆ.

ಪ್ರಮುಖ ಸುದ್ದಿ :-   ಹಿಂದೂ ಸಂಘಟನೆ ಮುಖಂಡ ಪುನೀತ ಕೆರೆಹಳ್ಳಿಗೆ ಜೀವ ಬೆದರಿಕೆ ಕರೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement