ಬೆಂಗಳೂರು: ರಾಜ್ಯದ ವಸತಿ ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರೀಯ ಹಬ್ಬ, ನಾಡಹಬ್ಬ ಹಾಗೂ ಜಯಂತಿಗಳನ್ನು ಹೊರತುಪಡಿಸಿ, ಯುಗಾದಿ, ರಂಜಾನ್, ಕ್ರಿಸ್ಮಸ್ನಂತಹ ಯಾವುದೇ ಧಾರ್ಮಿಕ ಹಬ್ಬವನ್ನು ಆಚರಿಸುವಂತಿಲ್ಲ ಎಂದು ರಾಜ್ಯ ಸರ್ಕಾರದ ಅಂಗ ಸಂಸ್ಥೆಯಾಗಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹೊರಡಿಸಿದ್ದ ಸುತ್ತೋಲೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದಂತೆ ಈಗ ಧಾರ್ಮಿಕ ಹಬ್ಬಗಳ ಆಚರಣೆಗೆ ಹೇರಿದ್ದ ನಿರ್ಬಂಧವನ್ನು ವಾಪಸ್ ಪಡೆಯಲಾಗಿದೆ.
ಸಮಾಜ ಕಲ್ಯಾಣ ಸಚಿವ ಎಚ್.ಸಿ ಮಹದೇವಪ್ಪ ಅವರ ಸೂಚನೆ ಮೇರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು ವಸತಿ ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳ ಅಚರಣೆ ಮಾಡಬಾರದು ಎಂಬ ಆದೇಶವನ್ನು ಫೆ.15ರಂದು ಹೊರಡಿಸಿತ್ತು. ಸುತ್ತೋಲೆಯು ಕೇವಲ 10 ರಾಷ್ಟ್ರೀಯ ಹಬ್ಬಗಳ ಆಚರಣೆಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಒಂದು ವೇಳೆ ಧಾರ್ಮಿಕ ಹಬ್ಬಗಳನ್ನು ಆಚರಿಸಿದರೆ ಆಯಾ ಪ್ರಿನ್ಸಿಪಾಲರು ಹಾಗೂ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿತ್ತು. ಈ ಆದೇಶಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾದ ನಂತರ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು ಆದೇಶವನ್ನು ಹಿಂಪಡೆದಿದೆ.
ಏನಿದು ಆದೇಶ..
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಗೆ ಬರುವ ವಸತಿ ಶಾಲಾ- ಕಾಲೇಜುಗಳಲ್ಲಿ ಇನ್ನು ಮುಂದೆ ಧಾರ್ಮಿಕ ಹಬ್ಬಗಳನ್ನು ಆಚರಿಸುವಂತಿಲ್ಲ. ರಾಷ್ಟ್ರೀಯ ಹಬ್ಬ, ನಾಡಹಬ್ಬ ಮತ್ತು ಜಯಂತಿಗಳನ್ನು ಮಾತ್ರ ಆಚರಿಸುವಂತೆ ಆದೇಶಿಸಲಾಗಿತ್ತು.
ಎಲ್ಲ ವಸತಿ ಶಾಲಾ- ಕಾಲೇಜುಗಳಲ್ಲಿ ಸರ್ಕಾರದ ಸೂಚನೆಯಂತೆ ರಾಷ್ಟ್ರೀಯ ಹಬ್ಬಗಳನ್ನು ಮಾತ್ರ ಆಚರಣೆ ಮಾಡಬೇಕು. ಧಾರ್ಮಿಕ ಹಬ್ಬಗಳಾದ ಯುಗಾದಿ, ರಂಜಾನ್, ಕ್ರಿಸ್ಮಸ್, ಈದ್ ಮಿಲಾದ್, ಸಂಕ್ರಾಂತಿ ಇತರೆ ಹಬ್ಬಗಳನ್ನು ಆಚರಣೆ ಮಾಡುವಂತಿಲ್ಲ ಎಂದು ಸುತ್ತೋಲೆ ಹೊರಡಿಸಲಾಗಿತ್ತು.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಈ ಸುತ್ತೋಲೆಯನ್ನು ಹೊರಡಿಸಲಾಗಿತ್ತು. ಕೇವಲ 10 ರಾಷ್ಟ್ರೀಯ ಹಬ್ಬಗಳ ಆಚರಣೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಒಂದು ವೇಳೆ ಧಾರ್ಮಿಕ ಹಬ್ಬಗಳನ್ನು ಆಚರಿಸಿದರೆ ಆಯಾ ಪ್ರಿನ್ಸಿಪಾಲರು ಹಾಗೂ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆಯನ್ನು ನೀಡಲಾಗಿತ್ತು.
1) ಗಣರಾಜ್ಯೋತ್ಸವ, 2) ಸ್ವಾತಂತ್ರ್ಯ ದಿನಾಚರಣೆ 3) ಗಾಂಧಿ ಜಯಂತಿ, 4) ಕನ್ನಡ ರಾಜ್ಯೋತ್ಸವ, 5) ಡಾ.ಬಿ.ಆರ್. ಅಂಬೇಡ್ಕರ ಜಯಂತಿ, 6) ವಾಲ್ಮೀಕಿ ಜಯಂತಿ, 7) ಕನಕದಾಸ ಜಯಂತಿ, 8) ಬಸವ ಜಯಂತಿ, 9) ಸಂವಿಧಾನ ಜಯಂತಿ, 10) ಯೋಗ ದಿನಾಚರಣೆ ಈ ಮೇಲಿನ ರಾಷ್ಟ್ರೀಯ ಹಬ್ಬ, ನಾಡಹಬ್ಬ ಮತ್ತು ಜಯಂತಿಗಳನ್ನು ಮಾತ್ರ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಸತಿ ಶಾಲೆ ಕಾಲೇಜುಗಳಲ್ಲಿಆಚರಿಸಬೇಕು ಎಂದು ಸೂಚಿಸಲಾಗಿತ್ತು. ಆದರೆ ಈ ಆದೇಶಕ್ಕೆ ವ್ಯಾಪಕವಾಗಿ ಅಸಮಾಧಾನ ವ್ಯಕ್ತವಾದ ಬೆನ್ನಲ್ಲೇ ಆದೇಶ ಹೊರಿಡಿಸಿದ ಕೆಲವೇ ಗಂಟೆಗಳಲ್ಲಿ ಆದೇಶವನ್ನು ಹಿಂಪಡೆಯಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ