ಬಿ.ಸಿ.ರೋಡ್‌ : ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಮಂಗಳೂರು : ಚಲಿಸುತ್ತಿರುವ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಮಹಿಳೆಯೋರ್ವವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಗುರುವಾರ (ಫೆ. 15ರ) ಮುಂಜಾನೆ ಬಂಟ್ವಾಳ ಬಿಸಿ ರೋಡ್ ಸಮೀಪ ನಡೆದಿದೆ ಎಂದು ವರದಿಯಾಗಿದೆ.
ಇಂದು ಬೆಳಿಗ್ಗೆ ಸುಮಾರು 6:20ರ ಸುಮಾರಿಗೆ ಈ ಘಟನೆ ನಡೆದಿದ್ದು, ಮಹಿಳೆಯ ಬ್ಯಾಗಿನಲ್ಲಿದ್ದ ಆಧಾರ್‌ ಕಾರ್ಡ್‌ ಆಧಾರದ ಮೇಲೆ ಆಕೆಯನ್ನು ತುಮಕೂರು ಜಿಲ್ಲೆಯ ನಯನ ಎಂ.ಜಿ.(27) ಎಂದು ಗುರುತಿಸಲಾಗಿದೆ. ಆಕೆಯ ಆಧಾರ್ ಕಾರ್ಡ್ ನಲ್ಲಿ c/o ಎಂ.ಗೋವಿಂದರಾಜು ಪಡಸಾಲೆಹಟ್ಟಿ, ಮಿಡಿಗೇಶಿ, ಮಧುಗಿರಿ ತಾಲೂಕು ತುಮಕೂರು ಜಿಲ್ಲೆ ಹೊಸಕರೆ ಎಂಬ ವಿಳಾಸವಿದೆ.
ಮಹಿಳೆ ಕಣ್ಣೂರು-ಬೆಂಗಳೂರು- ಮಂಗಳೂರು ರೈಲಿನಲ್ಲಿ ಬಂದಿದ್ದು, ಬಿಸಿರೋಡಿನ ನೇತ್ರಾವತಿ ನದಿಯ ರೈಲ್ವೆ ಓವರ್ ಬ್ರಿಡ್ಜ್ ನಲ್ಲಿ ರೈಲಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆಕೆ ಕುಳಿತುಕೊಂಡಿದ್ದ ಸೀಟಿನಲ್ಲಿದ್ದ ಬ್ಯಾಗ್ ನೋಡಿ ರೈಲ್ವೆ ಸಿಬ್ಬಂದಿ ಅದನ್ನು ಬಿಸಿರೋಡಿನ ಕಚೇರಿಗೆ ನೀಡಿದ್ದಾರೆ. ಅವರು ಯಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಗೊತ್ತಾಗಿಲ್ಲ. ಮತ್ತು ಅವರ ವಿಳಾಸದ ವಿವರ ಸರಿಯಾಗಿ ಇನ್ನಷ್ಟೇ ತಿಳಿಯಬೇಕಿದೆ. ಆಕೆಯ ವಿಳಾಸ ಇತ್ಯಾದಿ ವಿವರ ಸರಿಯಾಗಿದೆಯೇ ಎನ್ನುವುದು ಇನ್ನಷ್ಟೇ ತಿಳಿಯಬೇಕಿದೆ. ಮಹಿಳೆಯ ಮೃತದೇಹವನ್ನು ಸ್ಥಳೀಯ ಮುಳುಗು ತಜ್ಞರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಮೇಲಕ್ಕೆತ್ತಿದ್ದು, ಮರಣೋತ್ತರ ಪರೀಕ್ಷೆಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಬಂಟ್ವಾಳ ನಗರ ಪೋಲೀಸ್ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ವೀಡಿಯೊ ಪ್ರಕರಣದ ತನಿಖೆಗೆ ಎಸ್​ಐಟಿ ರಚನೆ: ಸಿಎಂ ಸಿದ್ದರಾಮಯ್ಯ

 

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement