ಹೈಕೋರ್ಟ್ ನಿಂದ 10 ಸಾವಿರ ರೂ. ದಂಡ : ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಸಿಎಂ ಸಿದ್ದರಾಮಯ್ಯ

ನವದೆಹಲಿ : ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದಕ್ಕೆ ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್‌ ಪ್ರಕರಣವನ್ನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅರ್ಜಿ ಸಲ್ಲಿಸಿದ್ದಾರೆ.
ಪ್ರತಿಭಟನೆ ವೇಳೆ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯಾಗಿದೆ ಎಂಬ ಕಾರಣಕ್ಕಾಗಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ತಮ್ಮ ವಿರುದ್ಧ 10 ಸಾವಿರ ರೂಪಾಯಿ ದಂಡ ವಿಧಿಸಿದ್ದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದಾರೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪ ಎದುರಿಸಿದ್ದ ಅಂದಿನ ಸಚಿವ ಕೆ.ಎಸ್.‌ ಈಶ್ವರಪ್ಪ ಅವರ ವಿರುದ್ಧ 2022ರ ಏಪ್ರಿಲ್ 14ರಂದು ಕಾಂಗ್ರೆಸ್‌ ಪ್ರತಿಭಟನೆ ನಡೆಸಿತ್ತು. ಕೆ.ಎಸ್. ಈಶ್ವರಪ್ಪ ಅವರ ರಾಜೀನಾಮೆ ಮತ್ತು ಬಂಧನಕ್ಕೆ ಒತ್ತಾಯಿಸಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನ ರೇಸ್ ವ್ಯೂ ಹೋಟೆಲ್ ಬಳಿ ಪ್ರತಿಭಟನೆ ನಡೆಸಲಾಗಿತ್ತು.

ಈ ವೇಳೆ ಸಾರ್ವಜನಿಕ ಮುಕ್ತ ಸಂಚಾರಕ್ಕೆ ಅಡ್ಡಿ ಪಡಿಸಿದ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿದ ಆರೋಪದ ಮೇಲೆ ನಗರದ ಹೈ ಗ್ರೌಂಡ್ಸ್‌ ಠಾಣಾ ಪೊಲೀಸರು ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ದೂರು ದಾಖಲಿಸಿಕೊಂಡಿದ್ದರು.
ಕಳೆದ ವಾರ ಈ ಪ್ರಕರಣದ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ವಿಚಾರಣಾ ನ್ಯಾಯಾಲಯದ ವಿಚಾರಣೆಯನ್ನು ರದ್ದುಗೊಳಿಸಲು ನಿರಾಕರಿಸಿತು. ಅಲ್ಲದೆ, 10 ಸಾವಿರ ರೂಪಾಯಿ ದಂಡ ವಿಧಿಸಿತು ಮತ್ತು ಫೆಬ್ರವರಿ 26 ರಂದು ವಿಚಾರಣಾ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆಯೂ ಸೂಚಿಸಿತ್ತು. ಇದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಪ್ರಮುಖ ಸುದ್ದಿ :-   ಸಂಸದ ಪ್ರಜ್ವಲ್ ರೇವಣ್ಣಗೆ ಎಸ್‍ಐಟಿ ಲುಕೌಟ್ ನೋಟಿಸ್ ಜಾರಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement