ಕರ್ನಾಟಕ ಬಜೆಟ್ 2024: ಅಲ್ಪಸಂಖ್ಯಾತರಿಗೆ ಸಿಎಂ ಸಿದ್ದರಾಮಯ್ಯ ಕೊಟ್ಟಿದ್ದೇನು..?

 ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ನಲ್ಲಿ ಸಾಕಷ್ಟು ಯೋಜನೆಗಳನ್ನ ಘೋಷಿಸಿಸಿದ್ದಾರೆ. ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡುವ ಮೂಲಕ ಅವರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಹಲವು ಕ್ರಮ ಕೈಗೊಳ್ಳುವ ಬಗ್ಗೆ ಪ್ರಸ್ತಾಪಿಸಿದ್ದಾರೆ.
ಜೈನರ ಪ್ರಮುಖ ಧಾರ್ಮಿಕ ಸ್ಥಳಗಳ ಅಭಿವೃದ್ಧಿಗಾಗಿ 50 ಕೋಟಿ ರೂ. ಅನುದಾನ
ಕ್ರೈಸ್ತ ಸಮುದಾಯದ ಅಭಿವೃದ್ಧಿಗಾಗಿ 200 ಕೋಟಿ ರೂ. ಅನುದಾನ
ರಾಜ್ಯದಲ್ಲಿನ ವಕ್ಫ್‌ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ
ರಾಜ್ಯದಲ್ಲಿನ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿಗೆ 20 ಕೋಟಿ ರೂ. ಅನುದಾನ
ಮಂಗಳೂರಿನ ಹಜ್‌ ಭವನದ ನಿರ್ಮಾಣ ಕಾಮಗಾರಿಗೆ 10 ಕೋಟಿ ರೂ.
ಅಲ್ಪಸಂಖ್ಯಾತ ಉದ್ಯಮಿಗಳಿಗೆ ಸಾಲ: ಉದ್ಯಮಗಳನ್ನು ಸ್ಥಾಪಿಸುವ ಅಲ್ಪಸಂಖ್ಯಾತ ಉದ್ಯಮಿಗಳನ್ನು ಬೆಂಬಲಿಸಲು 6% ಸಬ್ಸಿಡಿಯೊಂದಿಗೆ 10 ಕೋಟಿ ನೀಡಲಾಗುವುದು.
ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಉದ್ಯಮಶೀಲರು ಸ್ಥಾಪಿಸುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಹೊಸ ಘಟಕಗಳನ್ನು ಸ್ಥಾಪಿಸುವ ಹಾಗೂ ಅಸ್ತಿತ್ವದಲ್ಲಿರುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಘಟಕಗಳ ಉನ್ನತೀಕರಣಕ್ಕೆ ಕೆಎಸ್‌ಎಫ್‌ಸಿ (KSFC) ಮೂಲಕ ಪಡೆಯುವ 10 ಕೋಟಿ ರೂ.ವರೆಗಿನ ಸಾಲಕ್ಕೆ ಶೇ.6ರಷ್ಟು ಬಡ್ಡಿ ಸಹಾಯಧನ ನೀಡಲಾಗುತ್ತದೆ.
ರೇಷ್ಮೆ ನೂಲು ಬಿಚ್ಚಾಣಿಕೆಯಲ್ಲಿ ತೊಡಗಿರುವ ಅಲ್ಪಸಂಖ್ಯಾತ ಫಲಾನುಭವಿಗಳ ಆರ್ಥಿಕ ಸ್ಥಿತಿ ಉತ್ತಮಪಡಿಸಲು ರೇಷ್ಮೆ ಇಲಾಖೆ ಮೂಲಕ ತರಬೇತಿ, ಕೆಎಂಡಿಸಿ ಮೂಲಕ ಸಾಲ ಸೌಲಭ್ಯ
ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವ – ಸಹಾಯ ಗುಂಪುಗಳಿಗೆ ವಿವಿಧ ರೀತಿಯ ಸ್ವಯಂ ಉದ್ಯೋಗ ಚಟುವಟಿಕೆಗಳಿಗೆ 10 ಕೋಟಿ ರೂ.
ಬೌದ್ಧರ ಪವಿತ್ರ ಗ್ರಂಥಗಳಾದ ತ್ರಿಪಿಟಕಗಳನ್ನು ಪಾಲಿ ಭಾಷೆಯಿಂದ ಕನ್ನಡಕ್ಕೆ ಅನುವಾದ ಮಾಡಲು ಸೂಕ್ತ ಅನುದಾನ
ರಾಜ್ಯದಲ್ಲಿ ವಾಸಿಸುವ ಸಿಖ್ಖ್‌ ಸಮುದಾಯದ ಜನರ ಆರ್ಥಿಕ ಸಬಲೀಕರಣಕ್ಕೆ ಎರಡು ಕೋಟಿ ರೂ. ಅನುದಾನದಲ್ಲಿ ಹೊಸ ಯೋಜನೆ
ಬೀದರಿನಲ್ಲಿರುವ ನಾನಕ್‌ ಝರಾ ಸಾಹೇಬ್ ಗುರುದ್ವಾರದ ಅಭಿವೃದ್ಧಿಗಾಗಿ ಒಂದು ಕೋಟಿ ರೂ. ಅನುದಾನ
ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2024-25ನೇ ವರ್ಷದಲ್ಲಿ ಒಟ್ಟಾರೆಯಾಗಿ 393 ಕೋಟಿ ರೂ.ಗಳ ವೆಚ್ಚದ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನ
50 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು: ಅಲ್ಪಸಂಖ್ಯಾತ ಸಮುದಾಯಗಳ ಹಿಂದುಳಿದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ತಲಾ 50 ವಿದ್ಯಾರ್ಥಿಗಳ ಸಾಮರ್ಥ್ಯದ 50 ಹೊಸ ಶಾಲೆಗಳು
100 ಮೆಟ್ರಿಕ್ ಹಾಸ್ಟೆಲ್‌ಗಳು: ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ 100 ಸಂಖ್ಯಾ ಬಲದ 100 ಮೆಟ್ರಿಕ್‌ ನಂತರದ ಬಾಲಕ / ಬಾಲಕಿಯರ ವಿದ್ಯಾರ್ಥಿ ನಿಲಯಗಳು ಪ್ರಾರಂಭ
100 ಹೊಸ ಮೌಲಾನಾ ಆಜಾದ್‌ ಶಾಲೆಗಳನ್ನು ತೆರೆಯುವುದು
ಸ್ವಂತ ಕಟ್ಟಡವ ಹೊಂದಿರುವ 25 ಶಾಲೆಗಳಲ್ಲಿ ಪದವಿ ಪೂರ್ವ ಶಿಕ್ಷಣ ಆರಂಭ
ಸರ್ಕಾರಿ / ಖಾಸಗಿ ಕಾಲೇಜುಗಳಲ್ಲಿ ಬಿ. ಎಸ್ಸಿ. ನರ್ಸಿಂಗ್‌ / ಜಿ. ಎನ್‌. ಎಂ ನರ್ಸಿಂಗ್‌ ಕೋರ್ಸ್‌ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಶುಲ್ಕ ಭರಿಸುವ ಯೋಜನೆ ಪುನಃ ಆರಂಭ

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement