ಕರ್ನಾಟಕ ಬಜೆಟ್ 2024 : ಕಲಬುರಗಿಯಲ್ಲಿ ವಚನ ಮಂಟಪ ಸ್ಥಾಪನೆ, ಮಾಜಿ ಸಿಎಂ ಎಸ್. ಬಂಗಾರಪ್ಪ ಸ್ಮಾರಕ ನಿರ್ಮಾಣದ ಘೋಷಣೆ

ಬೆಂಗಳೂರು: ರಾಜ್ಯದ ಎಲ್ಲ ಕಚೇರಿಗಳು, ಅಂಗಡಿ – ಮುಂಗಟ್ಟುಗಳು, ವಿವಿಧ ವಾಣಿಜ್ಯ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡವನ್ನು ಕಡ್ಡಾಯವಾಗಿ ಅಳವಡಿಸಲು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮದಡಿ ಜಾರಿಗೆ ತರಲಾಗುವುದು ಎಂದು ಸಿದ್ದರಾಮಯ್ಯ ಬಜೆಟ್‌ ಭಾಷಣದಲ್ಲಿ ಹೇಳಿದ್ದಾರೆ.
ಬಸವಣ್ಣನವರ ಬದುಕು, ಚಿಂತನೆಯನ್ನು ಪ್ರಚಾರ ಮಾಡಲು ಬಸವ ಜಯಂತಿಯಂದು ಸರ್ವ ಧರ್ಮ ಸಂಸತ್ತನ್ನು ಆಯೋಜನೆ ಮಾಡಲಾಗುವುದು ಎಂದು ಅವರು ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ. ಬಸವಣ್ಣನವರ ಜನ್ಮಸ್ಥಳ ಬಸವನಬಾಗೇವಾಡಿಯ ಅಭಿವೃದ್ಧಿಗೆ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಲಾಗುವುದು ಎಂದು ಬಜೆಟ್​ನಲ್ಲಿ ಹೇಳಲಾಗಿದೆ.
ಕಲಬುರಗಿಯಲ್ಲಿ ವಚನ ಮಂಟಪ ಸ್ಥಾಪನೆ ಮಾಡುವ ಘೋಷಣೆ
ತುಳು, ಕೊಡವ, ಬ್ಯಾರಿ ಮತ್ತು ಕೊಂಚಣಿ ಭಾಷಾ ಅಭಿವೃದ್ಧಿಗೆ ಅಕಾಡೆಮಿ ಮೂಲಕ ಪ್ರೋತ್ಸಾಹದ ಭರವಸೆ.
ಅಲೆಮಾರಿ ಮತ್ತು ಅಲೆಮಾರಿ ಸಮುದಾಯದ ಕಲೆ, ಸಂಸ್ಕೃತಿ ಪ್ರೋತ್ಸಾಹಕ್ಕೆ ಅಲೆಮಾರಿ ಸಂಸ್ಕೃತಿ ಉತ್ಸವ ಆಯೋಜನೆ ಭರವಸೆ
ಮಾಜಿ ಮುಖ್ಯಮಂತ್ರಿ ಎಸ್​ ಬಂಗಾರಪ್ಪನವರ ಸ್ಮಾರಕ ನಿರ್ಮಾಣದ ಘೋಷಣೆ
1924ರಲ್ಲಿ ಮಹಾತ್ಮಗಾಂಧಿಜೀ ಅವರು ಅಧ್ಯಕ್ಷತೆ ವಹಿಸಿದ್ದ ಅಧಿವೇಶನ ಬೆಳಗಾವಿ ಅಧಿವೇಶನಕ್ಕೆ ಶತಮಾನೋತ್ಸ ಆಚರಿಸುತ್ತಿರುವ ಹಿನ್ನಲೆ ಇದರ ಸ್ಮರಣೆಗೆ ಬೆಳಗಾವಿಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲು 2 ಕೋಟಿ ಅನುದಾನ
ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ ಸ್ಥಾಪನೆ-ಸಾಮಾಜಿಕ ನ್ಯಾಯ ಕ್ಷೇತ್ರಕ್ಕೆ ಕೊಡುಗೆ ನೀಡಿರುವ ಪತ್ತಕರ್ತರಿಗೆ ಪ್ರತಿ ವರ್ಷ ಪ್ರಶಸ್ತಿ

ಪ್ರಮುಖ ಸುದ್ದಿ :-   ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಮತ್ತೊಂದು ಸಂಕಷ್ಟ : ಅಪಹರಣ ಪ್ರಕರಣ ದಾಖಲು

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement