ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಎನ್ ವಿ ಅಂಜಾರಿಯಾ ನೇಮಕ

ಬೆಂಗಳೂರು : ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.
ಕಾನೂನು ಖಾತೆ ಕೇಂದ್ರ ರಾಜ್ಯ ಸಚಿವ ಅರ್ಜುನ್ ರಾಮ ಮೇಘವಾಲ್ ಇದನ್ನು ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ. ಫೆಬ್ರವರಿ 7 ರಂದು ಸುಪ್ರೀಂ ಕೋರ್ಟ್ ಕೊಲಿಜಿಯಂ ನ್ಯಾಯಮೂರ್ತಿ ಅಂಜಾರಿಯಾ ಅವರನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಶಿಫಾರಸ್ಸು ಮಾಡಿತ್ತು.
ಹಾಲಿ ಮುಖ್ಯ ನ್ಯಾಯಮೂರ್ತಿ ಪಿ.ಎಸ್. ದಿನೇಶಕುಮಾರ ಅವರು ಫೆಬ್ರವರಿ 24ರಂದು ನಿವೃತ್ತರಾದ ನಂತರ ನ್ಯಾಯಮೂರ್ತಿ ಅಂಜಾರಿಯಾ ಅವರು ಹೈಕೋರ್ಟ್‌ನ ಚುಕ್ಕಾಣಿ ಹಿಡಿಯಲಿದ್ದಾರೆ. 2011ರ ನವೆಂಬರ್ 21ರಂದು ನ್ಯಾ. ಅಂಜಾರಿಯಾ ಅವರು ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು.
ಪದೋನ್ನತಿ ಪಡೆಯುವ ಮೊದಲು ಅವರು ಗುಜರಾತ್ ಹೈಕೋರ್ಟ್‌ನಲ್ಲಿ ಸಿವಿಲ್, ಸಾಂವಿಧಾನಿಕ ವಿಷಯ, ಕಂಪನಿ ಕಾನೂನು, ಕಾರ್ಮಿಕ ಮತ್ತು ಸೇವಾ ವಿಷಯಗಳಲ್ಲಿ ಪ್ರಾಕ್ಟೀಸ್‌ ಮಾಡುತ್ತಿದ್ದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement