ಬಜೆಟ್‌ನಲ್ಲಿ 7ನೇ ವೇತನ ಆಯೋಗ ಜಾರಿ ಬಗ್ಗೆ ಸಿದ್ದರಾಮಯ್ಯ ಏನು ಹೇಳಿದರು…?

ಬೆಂಗಳೂರು : ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಹಣಕಾಸು ಸಚಿವ ಸಿದ್ದರಾಮಯ್ಯ 2024-25ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ ಭಾಷಣದಲ್ಲಿ ರಾಜ್ಯ ಸರ್ಕಾರಿ ನೌಕರರ ಪ್ರಮುಖ ಬೇಡಿಕೆ ಕುರಿತು ಅವರು ಉಲ್ಲೇಖಿಸಿದ್ದಾರೆ.
ಶೀಘ್ರವೇ 7ನೇ ವೇತನ ಆಯೋಗ ಜಾರಿ ಮಾಡುವ ಬಗ್ಗೆ ಬಜೆಟ್‌ನಲ್ಲಿ ಸುಳಿವು ನೀಡಿರುವ ಸಿದ್ದರಾಮಯ್ಯ ಸಮಿತಿ ವರದಿ ಆಧಾರದಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ 7ನೇ ವೇತನ ಆಯೋಗವನ್ನು ರಚಿಸಲಾಗಿದ್ದು, ಆಯೋಗದ ವರದಿ ಸ್ವೀಕರಿಸಿದ ನಂತರ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಸಿದ್ದರಾಮಯ್ಯ ಸೋಮವಾರ ಆಯೋಗದ ಮುಖ್ಯಸ್ಥ ಕೆ. ಸುಧಾಕರ ನೇತೃತ್ವದ 7ನೇ ವೇತನ ಆಯೋಗದ ಜೊತೆ ಮಹತ್ವದ ಸಭೆಯನ್ನು ನಡೆಸಿದ್ದರು. ಸರ್ಕಾರಿ ನೌಕರರು ಸಹ ಯಾವ ಘೋಷಣೆ ಮಾಡಲಿದ್ದಾರೆ ಎಂದು ಕಾದು ಕುಳಿತಿದ್ದರು.
ರಾಜ್ಯ ಸರ್ಕಾರ ಎರಡು ಬಾರಿ ರಾಜ್ಯ 7ನೇ ವೇತನ ಆಯೋಗದ ಅವಧಿಯನ್ನು ವಿಸ್ತರಣೆ ಮಾಡಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣಗೆ ನಾವು ಅನುಮತಿ ನೀಡಿಲ್ಲ ; ರಾಜತಾಂತ್ರಿಕ ಪಾಸ್‌ಪೋರ್ಟ್‌ನಲ್ಲಿ ಜರ್ಮನಿಗೆ ತೆರಳಿದ್ದಾರೆ : ವಿದೇಶಾಂಗ ಸಚಿವಾಲಯ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement