ಮಾಜಿ ಪ್ರಧಾನಿ ಎಚ್​ ಡಿ ದೇವೆಗೌಡರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಬೆಂಗಳೂರು : ಮಾಜಿ ಪ್ರಧಾನಿ ಹಾಗೂ ಜೆಡಿಎಸ್​ ವರಿಷ್ಠ ಎಚ್.ಡಿ. ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾದ ನಂತರ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಎಚ್‌.ಡಿ. ದೇವೇಗೌಡ ಅವರಿಗೆ ಈಗಾಗಲೇ 91 ವರ್ಷ ವಯಸ್ಸಾಗಿದ್ದು, ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಮಾಹಿತಿಯ ಪ್ರಕಾರ ದೇವೇಗೌಡರ ಆರೋಗ್ಯ ಸ್ಥಿರವಾಗಿದೆ.
ಗುರುವಾರ ಬೆಳಿಗ್ಗೆ ದೇವೇಗೌಡರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ತಕ್ಷಣವೇ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಪರೀಕ್ಷೆ ನಡೆಸಿ, ಆಸ್ಪತ್ರೆಯಲ್ಲಿಯೇ ದಾಖಲಿಸಿಕೊಂಡು ನಿಗಾವಹಿಸಿದ್ದಾರೆ. ಸದ್ಯ ದೇವೇಗೌಡರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಆತಂಕ ಪಡುವ ಅಗತ್ಯ ಇಲ್ಲ ಎಂದು ಮಣಿಪಾಲ್‌ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.

ಜ್ವರ, ಕೆಮ್ಮು ಹಾಗೂ ಕಾಲು ಊತದ ಹಿನ್ನೆಲೆಯಲ್ಲಿ ದೇವೇಗೌಡರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ. ಸಂಸತ್ ಅಧಿವೇಶನದಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿದ್ದರು. ಮಾಡಿದ್ದರು. ದೆಹಲಿಯಲ್ಲಿ ವಿಪರೀತ ಚಳಿ ಇದ್ದು, ಜ್ವರ, ಕೆಮ್ಮು ಕಾಣಿಸಿಕೊಂಡಿತ್ತು. ಹೀಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಹೇಳಲಾಗಿದೆ.
ಎಚ್‌ ಡಿ ದೇವೇಗೌಡ ಅವರಿಗೆ 91 ವರ್ಷ ಪೂರ್ಣಗೊಂಡಿದ್ದರೂ, ಕೂಡ ಅವರು ಸಕ್ರಿಯ ರಾಜಕಾರಣದಲ್ಲಿ ಗುರುತಿಸಿಕೊಂಡಿದ್ದಾರೆ. ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಸಭೆಗಳನ್ನು ನಡೆಸುತ್ತಿದ್ದಾರೆ. ಅವರು ಇತ್ತೀಚೆಗೆ ಮುಕ್ತಾಯಗೊಂಡ ರಾಜ್ಯಸಭಾ ಅಧಿವೇಶನದಲ್ಲಿ ಕೂಡ ಪಾಲ್ಗೊಂಡಿದ್ದರು. ಅಲ್ಲದೇ, ಜ.22ರಂದು ಅಯೋಧ್ಯೆಯ ರಾಮಮಂದಿರದ ಉದ್ಘಾಟನಾ ಸಮಾರಂಭದಲ್ಲೂ ಕುಟುಂಬ ಸಹಿತ ಭಾಗವಹಿಸಿದ್ದರು.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್‌: ವೀಡಿಯೊ ನೀಡಿದ್ದು ನಾನೇ ಎಂದಿದ್ದ ಮಾಜಿ ಕಾರು ಚಾಲಕ ಕಾರ್ತಿಕ್ ನಾಪತ್ತೆ...!?

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement