ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ : ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಹೆಚ್​ಡಿ ದೇವೇಗೌಡ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು, ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ಕಳೆದ 4 ದಿನಗಳ ಹಿಂದೆ ಅನಾರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈಗ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದ್ದು, ಪದ್ಮನಾಭನಗರದಲ್ಲಿರುವ ಅವರ ನಿವಾಸಕ್ಕೆ ಕರೆದೊಯ್ಯಲಾಗಿದೆ.
ಉಸಿರಾಟ ಸಮಸ್ಯೆ ಕಾಣಿಸಿಕೊಂಡ ನಂತರ ದೇವೇಗೌಡರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಅವರು ಚೇತರಿಸಿಕೊಂಡಿದ್ದರಿಂದ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಕಾಲಿಗೆ ಗುಂಡೇಟು

ನಿಮ್ಮ ಕಾಮೆಂಟ್ ಬರೆಯಿರಿ

advertisement