ರಂಭಾಪುರಿ ಶ್ರೀಗಳ ವಿರುದ್ಧ ಪ್ರತಿಭಟನೆ : 59 ಜನರ ವಿರುದ್ಧ ಪ್ರಕರಣ

ಬಾಗಲಕೋಟೆ : ರಂಭಾಪುರಿ ಶ್ರೀಗಳ ಕಾರಿಗೆ ತಡೆ ಒಡ್ಡಿದ ವಿಚಾರದ ಘಟನೆಗೆ ಸಂಬಂಧಿಸಿದಂತೆ ಶ್ರೀಗಳ ಭಕ್ತರು ಕಲಾದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಮಹಿಳೆಯರು ಸೇರಿದಂತೆ 59 ಜನರ ವಿರುದ್ಧ ಎಫ್‍ಐಆರ್ (FIR) ದಾಖಲಾಗಿದೆ.
ತಾಲೂಕಿನ ಕಲಾದಗಿ ಗ್ರಾಮದಲ್ಲಿ ಮಹಿಳೆಯೊಬ್ಬಳು ಶನಿವಾರ ಉದಗಟ್ಟಿ ಗ್ರಾಮಕ್ಕೆ ಅಡ್ಡಪಲ್ಲಕ್ಕಿ ಉತ್ಸವಕ್ಕೆ ತೆರಳುತ್ತಿದ್ದ ರಂಭಾಪುರಿ ಶ್ರೀಗಳ ಕಾರಿನತ್ತ ಚಪ್ಪಲಿ ಎಸೆದಿದ್ದಳು. ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಮಠದ ವಿವಾದ ಕೋರ್ಟ್ ನಲ್ಲಿರುವಾಗ ಕಾನೂನು ಸುವ್ಯವಸ್ಥೆ ಹಾಳು ಮಾಡಿದ್ದಾರೆ. ಶಾಂತಿ ಕದಡುವ ಉದ್ದೇಶದಿಂದ ಶ್ರೀಗಳಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಲಾಗಿದೆ.
ಏನಿದು ಪ್ರಕರಣ:
ಕಲಾದಗಿಯ ಗುರುಲಿಂಗೇಶ್ವರ ಪಂಚಗ್ರಹ ಸಂಸ್ಥಾನ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯರಾದ ಬಳಿಕ ಅವರ ಉತ್ತರಾಧಿಕಾರಿಯನ್ನಾಗಿ ರಂಭಾಪುರಿ ಶ್ರೀಗಳು ಮಧ್ಯಸ್ಥಿಕೆ ವಹಿಸಿ ತಮ್ಮದೇ ಪೀಠದ ಶಿಷ್ಯರಾಗಿರುವ ಕೆ.ಎಂ. ಗಂಗಾಧರ ಸ್ವಾಮೀಜಿಯನ್ನ ನೇಮಕ ಮಾಡಿದ್ದರು. ಗ್ರಾಮಸ್ಥರ ಸಮ್ಮುಖದಲ್ಲಿ ಉತ್ತರಾಧಿಕಾರಿ ನೇಮಕ ಮಾಡದೇ ರಂಭಾಪುರಿ ಶ್ರೀಗಳು ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಂಡಿದ್ದಾರೆಂದು ಕೆಲ ಗ್ರಾಮಸ್ಥರು ಆರೋಪಿಸಿದ್ದರು. ನಂತರ ಮಹಾಂತ ದೇವರು ಸ್ವಾಮೀಜಿ ಅವರನ್ನು ನೂತನ ಸ್ವಾಮೀಜಿ ಅವರನ್ನು ಕರೆತಂದು ಅದ್ಧೂರಿ ಮೆರವಣಿಗೆ ಮಾಡಿತ್ತು. ಪರ, ವಿರೋಧ ಬಣಗಳಿಂದಾಗಿ ಪ್ರಕರಣ ಈಗ ಜಿಲ್ಲಾ ನ್ಯಾಯಾಲಯದ ಮೆಟ್ಟಿಲೇರಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್‌ ಲೈಂಗಿಕ ದೌರ್ಜನ್ಯ ಹಗರಣ: ಮಧ್ಯಂತರ ಜಾಮೀನು ಕೋರಿ ಜನಪ್ರತಿನಿಧಿಗಳ ನ್ಯಾಯಾಲಯದ ಮೆಟ್ಟಿಲೇರಿದ ರೇವಣ್ಣ

ಶನಿವಾರ, ಗಂಗಾಧರ ಸ್ವಾಮೀಜಿ ಮಠದ ಹೊಲದ ಉಳುಮೆಗೆ ಮುಂದಾದಾಗ ಇದು ಮತ್ತೆ ಭುಗಿಲೆದ್ದಿದೆ. ಇದಕ್ಕೆ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ವಿವಾದ ಕೋರ್ಟ್‍ನಲ್ಲಿರುವಾಗ ಕಟ್ಟಡ ದುರಸ್ತಿ ಹಾಗೂ ಜಮೀನು ಉಳುಮೆ ಮಾಡುವುದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ ಬಾಗಲಕೋಟೆಯಿಂದ ಕಲಾದಗಿ ಮಾರ್ಗವಾಗಿ ಉದಗಟ್ಟಿ ಗ್ರಾಮಕ್ಕೆ ಅಡ್ಡಪಲ್ಲಕ್ಕಿ ಕಾರ್ಯಕ್ರಮಕ್ಕೆ ರಂಭಾಪುರಿ ಶ್ರೀಗಳು ತೆರಳುತ್ತಿದ್ದರು. ಈ ವೇಳೆ ರಂಭಾಪುರಿ ಶ್ರೀಗಳ ಕಾರಿನತ್ತ ಚಪ್ಪಲಿ ಎಸೆಯಲಾಗಿತ್ತು.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement