ರೈತರು-ಕೇಂದ್ರದ ಮಧ್ಯೆ ಸಭೆ ; ದ್ವಿದಳ ಧಾನ್ಯ, ಮೆಕ್ಕೆಜೋಳ, ಹತ್ತಿಗೆ 5 ವರ್ಷ ಕನಿಷ್ಠ ಬೆಂಬಲ ಬೆಲೆ ಪ್ರಸ್ತಾಪ, ಪ್ರತಿಭಟನೆಗೆ ತಾತ್ಕಾಲಿಕ ತಡೆ, ಪ್ರಸ್ತಾವ ಕುರಿತು 2 ದಿನ ಚರ್ಚೆ

ನವದೆಹಲಿ: ರೈತಪರ ಸಂಘಟನೆಗಳೊಂದಿಗಿನ ತಡರಾತ್ರಿ ಸಂಧಾನ ಬಹುತೇಕ ಸಫಲವಾಗಿದೆ ಎಂದು ಹೇಳಲಾಗಿದ್ದು, ‘ದ್ವಿದಳ ಧಾನ್ಯ, ಮೆಕ್ಕೆಜೋಳ, ಹತ್ತಿ ಬೆಳೆಗಳನ್ನು 5 ವರ್ಷಗಳ ವರೆಗೆ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ)ಯಲ್ಲಿ ಖರೀದಿಸುವ ಕುರಿತು ಪ್ರಸ್ತಾಪ ಮುಂದಿಡಲಾಗಿದೆ ಎಂದು ಸಂಧಾನ ಮಾತುಕತೆಯಲ್ಲಿ ಪಾಲ್ಗೊಂಡಿದ್ದ ಕೇಂದ್ರ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದ್ವಿದಳ ಧಾನ್ಯಗಳು, ಮೆಕ್ಕೆಜೋಳ ಮತ್ತು ಹತ್ತಿ ಬೆಳೆಗಳನ್ನು ಐದು ವರ್ಷಗಳವರೆಗೆ ಕನಿಷ್ಠ ಬೆಂಬಲ ಬೆಲೆಯಲ್ಲಿ ಸರ್ಕಾರಿ ಸಂಸ್ಥೆಗಳಿಂದ ಖರೀದಿಸುವ ಪ್ರಸ್ತಾವನ್ನು ಸಮಿತಿಯು ರೈತರ ಮುಂದಿಟ್ಟಿದೆ. ಸರ್ಕಾರದ ಈ ಪ್ತಸ್ತಾಪವನ್ನು ತಮ್ಮ ವಲಯದಲ್ಲಿ ಚರ್ಚಿಸಿ ಎರಡು ದಿನಗಳೊಳಗೆ ತಿಳಿಸುವುದಾಗಿ ರೈತ ನಾಯಕರು ಹೇಳಿದ್ದಾರೆ. ಹುರಳಿ ಬೇಳೆ, ಉದ್ದಿನ ಬೇಳೆ, ಮಸೂರ್‌ ದಾಲ್ ಅಥವಾ ಮೆಕ್ಕೆಜೋಳವನ್ನು ಮುಂದಿನ 5 ವರ್ಷಗಳಲ್ಲಿ ಕನಿಷ್ಠ ಬೆಂಬಲ ಬೆಲಯಲ್ಲಿ ಖರೀದಿಸಲು ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ (NCCF) ಹಾಗೂ ಭಾರತೀಯ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ (ನಾಫೆಡ್) ರೈತರೊಂದಿಗೆ ಒಪ್ಪಂದ ಮಾಡಿಕೊಳ್ಳಲಿದೆ ಎಂದು ಸಚಿವ ಗೋಯಲ್‌ ಹೇಳಿದ್ದಾರೆ.ಅಲ್ಲದೆ ಈ ಖರೀದಿಯ ಪ್ರಮಾಣಕ್ಕೆ ಯಾವುದೇ ಮಿತಿ ಇಲ್ಲ. ಖರೀದಿಗಾಗಿ ವೆಬ್‌ ಪೋರ್ಟಲ್‌ ಅಭಿವೃದ್ಧಿಪಡಿಸಲಾಗುತ್ತದೆ  ಎಂದು ಹೇಳಿದರು.

ಭಾನುವಾರ ತಡರಾತ್ರಿ ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರು ಹಾಗೂ ಕೇಂದ್ರ ಸರ್ಕಾರ ನಡೆಸಿದ ನಾಲ್ಕನೇ ಸುತ್ತಿನ ಮಾತುಕತೆಯು ಆರಂಭಿಕವಾಯಿತು. ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಅರ್ಜುನ ಮುಂಡಾ, ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್ ಗೋಯಲ್ ಮತ್ತು ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್‌ ಅವರು ಚಂಡೀಗಢದ ಮಹಾತ್ಮ ಗಾಂಧಿ ರಾಜ್ಯ ಸಾರ್ವಜನಿಕ ಆಡಳಿತ ಸಂಸ್ಥೆಯಲ್ಲಿ ರೈತ ನಾಯಕರೊಂದಿಗೆ ಮಾತುಕತೆ ನಡೆಸಿದರು. ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್‌ ಅವರೂ ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಭಾನುವಾರ ರಾತ್ರಿ 8:15ಕ್ಕೆ ಆರಂಭವಾದ ಸಭೆ ತಡರಾತ್ರಿ 1 ಗಂಟೆವರೆಗೂ ನಡೆಯಿತು.

ಪ್ರಮುಖ ಸುದ್ದಿ :-   ರೇವಣ್ಣ, ಪ್ರಜ್ವಲ್ ಎಸ್‌ಐಟಿ ವಿಚಾರಣೆಗೆ ಹಾಜರಾಗದಿದ್ದರೆ ಕಾನೂನು ಪ್ರಕಾರ ಬಂಧನ: ಗೃಹ ಸಚಿವ ಪರಮೇಶ್ವರ

ರೈತರ ಬೆಳೆಗಳಿಗೆ ಬೆಂಬಲ ಬೆಲೆ (Minimum Support Price) ನೀಡುವ ಕುರಿತು ಕೇಂದ್ರ ಸರ್ಕಾರ ನೂತನ ಯೋಜನೆ ರೂಪಿಸಿದ್ದು, ಈ ಬಗ್ಗೆ ಬಗ್ಗೆ ಅಧ್ಯಯನ ನಡೆಸಲು ರೈತ ಸಂಘಟನೆಗಳು ತೀರ್ಮಾನಿಸಿವೆ. ಹಾಗಾಗಿ, ದೆಹಲಿ ಗಡಿಯಲ್ಲಿ ನಡೆಸುತ್ತಿರುವ ಪ್ರತಿಭಟನೆಗೆ (Farmers Protest) ಎರಡು ದಿನಗಳವರೆಗೆ ತಾತ್ಕಾಲಿಕ ವಿರಾಮ ನೀಡಲು ನಿರ್ಧರಿಸಿವೆ.
ಕೇಂದ್ರದ ಯೋಜನೆ ಕುರಿತು ಕೃಷಿ ತಜ್ಞರ ಜೊತೆ 19 ಹಾಗೂ 20ರಂದು ಚರ್ಚಿಸಿ ಬಳಿಕ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ” ಎಂದು ರೈತ ಮುಖಂಡ ಸರ್ವಾನ್‌ ಸಿಂಗ್‌ ಪಂಢೇರ್‌ ತಿಳಿಸಿದ್ದಾರೆ. ಹಾಗಾಗಿ, ಫೆಬ್ರವರಿ 19 ಹಾಗೂ 20ರಂದು ಪ್ರತಿಭಟನೆ ನಡೆಸುವುದಿಲ್ಲ. ಫೆಬ್ರವರಿ 21ರಂದು ಬೆಳಗ್ಗೆ ಪ್ರತಿಭಟನೆ ಆರಂಭಿಸಬೇಕೇ ಬೇಡವೇ ಎಂಬುದರ ಕುರಿತು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಈ ಹಿಂದೆ ಮೂರು ಸಲ ರೈತ ಮುಖಂಡರು ಹಾಗೂ ಸಚಿವರ ನಡುವೆ ಮಾತುಕತೆ ನಡೆದಿದ್ದರೂ, ಒಂದು ನಿರ್ಧಾರಕ್ಕೆ ಬರಲು ಸಾಧ್ಯವಾಗಿರಲಿಲ್ಲ.

ಪ್ರಮುಖ ಸುದ್ದಿ :-   ರೇವಣ್ಣ, ಪ್ರಜ್ವಲ್ ಎಸ್‌ಐಟಿ ವಿಚಾರಣೆಗೆ ಹಾಜರಾಗದಿದ್ದರೆ ಕಾನೂನು ಪ್ರಕಾರ ಬಂಧನ: ಗೃಹ ಸಚಿವ ಪರಮೇಶ್ವರ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement