ಸಿಎಂ ಸಿದ್ದರಾಮಯ್ಯಗೆ ದಂಡ: ಹೈಕೋರ್ಟ್‌ ಆದೇಶಕ್ಕೆ ತಡೆ ನೀಡಿದ ಸುಪ್ರಿಂ ಕೋರ್ಟ್‌

ನವದೆಹಲಿ : ಪ್ರತಿಭಟನಾ ಮೆರವಣಿಗೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮ್ಯಯ ಮತ್ತು ಇತರ ನಾಯಕರಿಗೆ ತಲಾ ₹10 ಸಾವಿರ ದಂಡ ವಿಧಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ. ಹಾಗೂ ಮಾರ್ಚ್‌ 6ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಕರ್ನಾಟಕ ಮುಖ್ಯಮಂತ್ರಿ (ಸಿಎಂ) ಸಿದ್ದರಾಮಯ್ಯ, ಸಚಿವರಾದ ರಾಮಲಿಂಗಾ ರೆಡ್ಡಿ ಮತ್ತು ಎಂ.ಬಿ.ಪಾಟೀಲ, ಹಾಗೂ ಮತ್ತು ಕರ್ನಾಟಕ ಕಾಂಗ್ರೆಸ್‌ ಉಸ್ತುವಾರಿ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ವಿರುದ್ಧದ ಪ್ರತಿಭಟನೆಗೆ ಸಂಬಂಧಿಸಿದ ಕ್ರಿಮಿನಲ್ ಮೊಕದ್ದಮೆಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಡೆಸಿದೆ.
ಕರ್ನಾಟಕ ಹೈಕೋರ್ಟ್‌ ವಿಚಾರಣೆಯನ್ನು ರದ್ದುಗೊಳಿಸಲು ನಿರಾಕರಿಸಿದ ಹಾಗೂ ₹10 ಸಾವಿರ ದಂಡ ಆದೇಶದ ವಿರುದ್ಧ ಸಿದ್ದರಾಮಯ್ಯ ಮತ್ತು ಇತರರು ಮಾಡಿದ ಮನವಿಗೆ ನ್ಯಾಯಮೂರ್ತಿಗಳಾದ ಹೃಷಿಕೇಶ ರಾಯ್ ಮತ್ತು ಪ್ರಶಾಂತಕುಮಾರ ಮಿಶ್ರಾ ಅವರ ಪೀಠವು ಈ ಆದೇಶ ಮಾಡಿದೆ ಹಾಗೂ ಕರ್ನಾಟಕ ಸರ್ಕಾರ ಮತ್ತು ಇತರ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿತು.

ಬೆಳಗಾವಿಯ ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ 2022ರ ಏಪ್ರಿಲ್ 14ರಂದು ಬೆಂಗಳೂರಿನ ಆನಂದ ರಾವ್ ವೃತ್ತದ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್‌ ಮುಖಂಡರು ಪ್ರತಿಭಟನೆ ನಡೆಸಿದ್ದರು.
ಈ ವೇಳೆ ಸಾರ್ವಜನಿಕರ ಮುಕ್ತ ಸಂಚಾರಕ್ಕೆ ಅಡ್ಡಿಪಡಿಸಿದ, ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದ ಆರೋಪದ ಅಡಿ ಹೈಗ್ರೌಂಡ್ಸ್‌ ಠಾಣೆ ಪೊಲೀಸರು ಅರ್ಜಿದಾರರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಕಲಂ 143 (ಕಾನೂನು ಬಾಹಿರವಾಗಿ ಸಮಾವೇಶಗೊಳ್ಳುವುದು) ಮತ್ತು ಕರ್ನಾಟಕ ಪೊಲೀಸ್‌ ಕಾಯ್ದೆಯ ಕಲಂ 103ರ ಅಡಿ ಪ್ರಕರಣ ದಾಖಲಿಸಿದ್ದರು.
ಈ ಪ್ರಕರಣದಲ್ಲಿ ಯಾವುದೇ ಸಮರ್ಥನೆ ನೀಡದೆ ಪೊಲೀಸ್‌ ಅಧಿಕಾರಿಯನ್ನು ಪ್ರತಿವಾದಿಯನ್ನಾಗಿ ಹೆಸರಿಸಲಾಗಿದೆ’ ಎಂಬ ಕಾರಣಕ್ಕೆ ಎಲ್ಲ ಅರ್ಜಿದಾರರಿಗೂ ಹೈಕೋರ್ಟ್‌ ತಲಾ ₹ 10 ಸಾವಿರ ದಂಡ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದರು.

ಪ್ರಮುಖ ಸುದ್ದಿ :-   ದಾಂಡೇಲಿ : ಗಂಡ ಹೆಂಡತಿಯ ಜಗಳ ; ಕೋಪದಲ್ಲಿ ಮಗುವನ್ನೇ ಮೊಸಳೆಗಳಿರುವ ನಾಲೆಗೆ ಎಸೆದ ತಾಯಿ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement