ಅಖಿಲೇಶ ಯಾದವ ಸಮಾಜವಾದಿ ಪಕ್ಷ ತೊರೆದ ಸ್ವಾಮಿ ಪ್ರಸಾದ ಮೌರ್ಯ

ಲಕ್ನೋ: ಸಮಾಜವಾದಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ ಒಂದು ವಾರದ ನಂತರ, ಸ್ವಾಮಿ ಪ್ರಸಾದ ಮೌರ್ಯ ಮಂಗಳವಾರ ಸಮಾಜವಾದಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅಲ್ಲದೆ, ಉತ್ತರ ಪ್ರದೇಶ ವಿಧಾನ ಪರಿಷತ್ತಿ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ.
“ನನಗೆ ನಿಮ್ಮೊಂದಿಗೆ ಕೆಲಸ ಮಾಡಲು ಅವಕಾಶ ಸಿಕ್ಕಿತು. ಆದರೆ ಫೆಬ್ರವರಿ 12 ರಂದು ನಮ್ಮ ಮಾತುಕತೆಗಳು ಮತ್ತು ಫೆಬ್ರವರಿ 13 ರಂದು ನಾನು (ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ) ರಾಜೀನಾಮೆ ನೀಡಿದ ನಂತರ, ಪಕ್ಷವು ನನ್ನೊಂದಿಗೆ ಯಾವುದೇ ಮಾತುಕತೆಯ ಉಪಕ್ರಮವನ್ನು ತೆಗೆದುಕೊಳ್ಳಲಿಲ್ಲ, ಇದರಿಂದಾಗಿ ನಾನು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಪಕ್ಷದ ಮುಖ್ಯಸ್ಥ ಅಖಿಲೇಶ ಯಾದವ್‌ ಅವರಿಗೆ ಬರೆದ ಪತ್ರದಲ್ಲಿ ಮೌರ್ಯ ಹೇಳಿದ್ದಾರೆ. ಅವರು ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳಲ್ಲಿ ಪತ್ರವನ್ನು ಹಂಚಿಕೊಂಡಿದ್ದಾರೆ.

ಉತ್ತರ ಪ್ರದೇಶ ವಿಧಾನ ಪರಿಷತ್ತಿನ ಅಧ್ಯಕ್ಷರಿಗೆ ಬರೆದ ಪ್ರತ್ಯೇಕ ರಾಜೀನಾಮೆ ಪತ್ರದಲ್ಲಿ ಸ್ವಾಮಿ ಪ್ರಸಾದ ಮೌರ್ಯ ಅವರು, “ನಾನು ವಿಧಾನ ಪರಿಷತ್ತಿನಲ್ಲಿ ಸಮಾಜವಾದಿ ಪಕ್ಷದ ಸದಸ್ಯನಾಗಿ ಆಯ್ಕೆಯಾಗಿದ್ದೇನೆ, ನಾನು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರಿಂದ, ನಾನು ನೈತಿಕತೆಯ ಆಧಾರದ ಮೇಲೆ ವಿಧಾನ ಪರಿಷತ್ತಿಗೆ ಸಹ ರಾಜೀನಾಮೆ ನೀಡುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.
ಶ್ರೀ ಮೌರ್ಯ ಅವರು ಫೆಬ್ರವರಿ 13 ರಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದರು, ನಾಯಕತ್ವವು ತನ್ನ ವಿರುದ್ಧ ತಾರತಮ್ಯ ಮಾಡುತ್ತಿದೆ ಮತ್ತು ರಾಮಚರಿತಮಾನಸ ಮತ್ತು ಅಯೋಧ್ಯೆ ದೇವಾಲಯದ ಪ್ರತಿಷ್ಠಾಪನೆ ಸಮಾರಂಭದ ಬಗ್ಗೆ ನೀಡಿದ್ದ ವಿವಾದಾತ್ಮಕ ಹೇಳಿಕೆಗಳ ಬಗ್ಗೆ ತನ್ನನ್ನು ಸಮರ್ಥಿಕೊಂಡಿಲ್ಲ ಎಂದು ಆರೋಪಿಸಿದರು.

ಪ್ರಮುಖ ಸುದ್ದಿ :-   127 ವರ್ಷಗಳಷ್ಟು ಹಳೆಯ ಗೋದ್ರೇಜ್ ಗ್ರುಪ್‌ ಇಬ್ಭಾಗ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement