ಖಾಸಗಿ ಆಸ್ಪತ್ರೆಗಳಲ್ಲಿ ದರಪಟ್ಟಿ ಪ್ರಕಟಿಸುವುದು ಕಡ್ಡಾಯ: ಸಚಿವ ದಿನೇಶ ಗುಂಡೂರಾವ್‌

ಬೆಂಗಳೂರು : ಖಾಸಗಿ ಆಸ್ಪತ್ರೆಗಳ ಹೊರಭಾಗದಲ್ಲಿ ಇನ್ಮುಂದೆ ದರಪಟ್ಟಿ ಪ್ರಕಟಿಸುವುದು ಕಡ್ಡಾಯ ಮಾಡಲಾಗುವುದು. ದರ ಪಟ್ಟಿ ಪ್ರಕಟಿಸದ ಆಸ್ಪತ್ರೆಗಳ ಪರವಾನಗಿ ರದ್ದುಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ” ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್‌ ತಿಳಿಸಿದ್ದಾರೆ.
ಗುರುವಾರ ಮಾತನಾಡಿದ ಅವರು, “ಜ್ವರ, ಕೆಮ್ಮು, ನೆಗಡಿ ಎಂದು ಆಸ್ಪತ್ರೆಗಳಿಗೆ ಚಿಕಿತ್ಸೆಗೆ ತೆರಳಿದರೂ ಸಾವಿರಾರು ರೂಪಾಯಿ ಬಿಲ್ ವಸೂಲಿ ಮಾಡಲಾಗುತ್ತಿದೆ ಎಂಬ ದೂರುಗಳು ಸಲ್ಲಿಕೆಯಾಗಿವೆ. ಈ ಬಗ್ಗೆ ಸಾರ್ವಜನಿಕರು ನಮ್ಮ ಇಲಾಖೆ ಹಾಗೂ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ದೂರು ನೀಡಿದ್ದಾರೆ. ಹೀಗಾಗಿ ಕಠಿಣ ಕ್ರಮಕ್ಕೆ ಮುಂದಾಗಿದ್ದೇವೆ ಎಂದು ಹೇಳಿದರು.

ಕೆಪಿಎಂಇ ಮೂಲಕ ಅಂಗೀಕೃತವಾದ ಆಸ್ಪತ್ರೆಗಳು ಆವರಣದಲ್ಲಿ ಹಾಗೂ ಹೊರ ಭಾಗದಲ್ಲಿ ಯಾವ್ಯಾವ ಚಿಕಿತ್ಸೆಗಳಿಗೆ ಎಷ್ಟೆಷ್ಟು ದರ ಎಂಬ ದರ ಪಟ್ಟಿಯನ್ನು ಅಳವಡಿಸಬೇಕು” ಎಂದು ಆರೋಗ್ಯ ಇಲಾಖೆ ಸೂಚಿಸಿದೆ. ಆದೇಶ ಪಾಲನೆ ಮಾಡದ ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್ ನೀಡಿ ಸೀಜ್ ಮಾಡುವ ಬಗ್ಗೆಯೂ ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ. ಈಗಾಗಲೇ ಯಾವ ಚಿಕಿತ್ಸೆಗೆ ಎಷ್ಟು ದರ ಎಂಬುದು ನಿಗದಿಯಾಗಿದೆ. ಅದರ ಬಗ್ಗೆ ಆಸ್ಪತ್ರೆಯ ಅವರಣದಲ್ಲಿ ಸಾರ್ವಜನಿಕರಿಗೆ ತೋರುವ ರೀತಿಯಲ್ಲಿ ಬೋರ್ಡ್ ಹಾಕಬೇಕು ಎಂದು ನಿರ್ದೇಶನ ನೀಡಲಾಗಿದೆ ಎಂದು ಅವರು ಹೇಳಿದರು.

ಪ್ರಮುಖ ಸುದ್ದಿ :-   ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement