ಧಾರ್ಮಿಕ ದತ್ತಿ ವಿಧೇಯಕ ಅಂಗೀಕಾರ, ದೇವಸ್ಥಾನದ ಆದಾಯದ ಶೇ.10 ರಷ್ಟು ಹಣ ಸರ್ಕಾರಕ್ಕೆ

ಬೆಂಗಳೂರು : ಹಿಂದು ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ವಿಧೇಯಕ ವಿಧಾನಸಭೆಯಲ್ಲಿ ಬುಧವಾರ ಅಂಗೀಕಾರಗೊಂಡಿದೆ.
ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮದಾಯ ದತ್ತಿಗಳ ವಿಧೇಯಕದಲ್ಲಿ ಬದಲಾವಣೆ ಮಾಡಲಾಗಿದೆ.
ವಿಧೇಯಕದಲ್ಲಿ ಸರ್ಕಾರದ ಮುಜರಾಯಿ ಇಲಾಖೆಗೆ ದೇವಸ್ಥಾನಗಳು ನೀಡುತ್ತಿದ್ದ ಆದಾಯದ ಹಣವನ್ನು ದ್ವಿಗುಣಗೊಳಿಸಲಾಗಿದೆ. ಇನ್ನು ಮುಂದೆ 10 ಲಕ್ಷ ರೂ.ಗಳಿಂದ 1 ಕೋಟಿ ರೂ.ಗಳ ವರೆಗಿನ ಆದಾಯದ ದೇವಸ್ಥಾನಗಳು ತಮ್ಮ ಆದಾಯದ ಶೇ.5 ರಷ್ಟು ಹಣವನ್ನು ಸರ್ಕಾರಕ್ಕೆ ಸಲ್ಲಿಸಬೇಕು. 1 ಕೋಟಿ ರೂ.ಗಳಿಗೂ ಹೆಚ್ಚು‌ ಆದಾಯ ಮೀರಿದ ದೇವಸ್ಥಾನಗಳು ಆದಾಯದ ಶೇ.10 ರಷ್ಟು ಹಣ ಸರ್ಕಾರಕ್ಕೆ ಸಲ್ಲಿಕೆ ಮಾಡಬೇಕು ಎಂದು ತಿದ್ದುಪಡಿ ಮಾಡಲಾಗಿದೆ.

ಇದಲ್ಲದೆ, ಇತರ ಕೆಲ ಪ್ರಮುಖ ತಿದ್ದುಪಡಿಗಳನ್ನು ಮಾಡಲಾಗಿದೆ. ಸಿ ಗ್ರೇಡ್ ದೇವಾಲಯದ ಅರ್ಚಕರು, ಸಿಬ್ಬಂದಿಗೆ ವಿಮೆ ಸೌಕರ್ಯ ಒದಗಿಸಲು ವಿಧೇಯಕದಲ್ಲಿ ಅವಕಾಶ ಕಲ್ಪಿಸಲಾಗಿದ್ದು, ದೇವಾಲಯದ ಅರ್ಚಕರು, ಸಿಬ್ಬಂದಿ ಮೃತಪಟ್ಟಾಗ 5 ಲಕ್ಷ ರೂ.ಗಳ ಪರಿಹಾರ ಕೊಡಲು ಅವಕಾಶ ನೀಡಲಾಗಿದೆ. ಈ ಮೊದಲು ಮೃತಪಟ್ಟವರಿಗೆ ಕೇವಲ 35 ಸಾವಿರ ರೂ. ಕೊಡಲಾಗುತ್ತಿತ್ತು. ಜೊತೆಗೆ ಅರ್ಚಕರು, ದೇಗುಲ ಸಿಬ್ಬಂದಿ ಮಕ್ಕಳ ವಿದ್ಯಾಭ್ಯಾಸಕ್ಕೆ 5 ಸಾವಿರ ರೂಪಾಯಿಗಳಿಂದ 50 ಸಾವಿರ ರೂ.ಗಳ ವರೆಗೆ ಸ್ಕಾಲರ್ ಶಿಪ್ ನೀಡಲು ಸಹ ಅವಕಾಶ ಕಲ್ಪಿಸಲಾಗಿದೆ.

ಬಿಜೆಪಿ ಆಕ್ರೋಶ…
ಕಾಂಗ್ರೆಸ್ ತಂದಿರುವ ಈ ಬಿಲ್‌ಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಆರ್ಥಿಕ ಪರಿಸ್ಥಿತಿ ಸಂಕಷ್ಟದಲ್ಲಿರುವ ಸರ್ಕಾರ, ಶ್ರೀಮಂತ ದೇವಾಲಯಕ್ಕೂ ಕನ್ನ ಹಾಕುವ ಕೆಲಸ ಮಾಡುತ್ತಿದೆ. ದೇವಸ್ಥಾನದ ಹಣಕ್ಕೆ ಕನ್ನ ಹಾಕುವ ಬದಲು ಸರ್ಕಾರ ವಿಧಾನಸೌಧದ ಮುಂದೆ ಒಂದು ಹುಂಡಿ ಇಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ‘ಸರ್ಕಾರ ನಡೆಸಲು ನಮ್ಮ ಕೈಯಲ್ಲಿ ಆಗುತ್ತಿಲ್ಲ; ಹಣಕಾಸಿನ ತೊಂದರೆ ಇದೆ’ ಎಂದು ತಿಳಿಸಲಿ ಎಂದು ಅವರು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಸಿದ್ದಾಪುರ : ಸಿಡಿಲು ಬಡಿದು 7 ಹಸುಗಳು ಸಾವು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement