ವೀಡಿಯೊ..| ಸ್ವರ್ಣವಲ್ಲೀ ಮಠದಲ್ಲಿ ಶಿಷ್ಯ ಸ್ವೀಕಾರ ಸಂಪನ್ನ; 55ನೇ ಯತಿಗಳಾಗಿ ಶ್ರೀ ಆನಂದ ಬೋಧೇಂದ್ರ ಸರಸ್ವತೀ ಸ್ವಾಮೀಜಿ ನಿಯೋಜನೆ

ಶಿರಸಿ: 1300 ವರ್ಷಗಳ ಇತಿಹಾಸವಿರುವ ಶಂಕರಾಚಾರ್ಯರ ಪರಂಪರೆಯ ಶ್ರೀ ಸೋಂದಾ ಸ್ವರ್ಣವಲ್ಲೀ‌ ಮಹಾ‌ಸಂಸ್ಥಾನಕ್ಕೆ (Swarnavalli Mutt) ಉತ್ತರಾಧಿಕಾರಿಗಳ ಸನ್ಯಾಸ ಸ್ವೀಕಾರ ಕಾರ್ಯಕ್ರಮ ಗುರುವಾರ ನಡೆಯಿತು. ಶ್ರೀಮಠಕ್ಕೆ 55ನೇ ಯತಿಗಳಾಗಿ‌ ವಿದ್ವಾನ್ ನಾಗರಾಜ್ ಭಟ್ಟ ಗಂಗೆಮನೆ ಅವರು ಗುರುವಾರ ಸನ್ಯಾಸ ಗ್ರಹಣ‌ ಮಾಡಿದರು. ನಂತರ ಅವರಿಗೆ ಸ್ವರ್ಣವಲ್ಲೀ ಮಹಾಸಂಸ್ಥಾನದ 55ನೇ ಯತಿಗಳಾಗಿ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಅವರು ವಿದ್ವಾನ್ ನಾಗರಾಜ್ ಭಟ್ಟ ಗಂಗೆಮನೆ ಅವರಿಗೆ ಆನಂದ ಶ್ರೀಮಠಕ್ಕೆ ಆಗಮಿಸಿದ ಬಳಿಕ ಆರಾಧ್ಯ ದೇವರ ದರ್ಶನ ಪಡೆದು ಗುರುಮೂರ್ತಿ ಭವನಕ್ಕೆ ತೆರಳಿದರು. ಬಳಿಕ ಶಂಖ ಸ್ನಾನ, ಪ್ರಣವ ಮಹಾ ವಾಕ್ಯೋಪದೇಶ ನೀಡಿ ನೂತನ ಶ್ರೀಗಳಿಗೆ ನಾಮಕರಣವನ್ನು ಸ್ವರ್ಣವಲ್ಲೀ ಶ್ರೀಗಳು‌ ಮಾಡಿದರು. ಪರ್ಯಂಕಶೌಚ, ಯೋಗ‌ಪಟ್ಟ, ಬ್ರಹ್ಮವಿದಾಶೀರ್ವಚನ ನಡೆಸಲಾಯಿತು. ಸರಸ್ವತೀ ಎಂದು ನಾಮಕರಣ ಮಾಡಿದರು.
ಗುರುವಾರ ನಡೆದ ಶಿಷ್ಯ ಸ್ವೀಕಾರ ಕಾರ್ಯಕ್ರಮದ ಅಂಗವಾಗಿ ನಿಯೋಜಿತ ಯತಿಗಳಿಗೆ ಬೆಳಗ್ಗೆ ಶಾಲ್ಮಲಾ ನದಿಯಲ್ಲಿ ಜಲಾಶಯಗಮನ, ಸಾವಿತ್ರಿ ಪ್ರವೇಶ, ಪ್ರೇಷೋಚ್ಛಾರಣೆ ನಡೆದ ನಂತರ ಕಾಷಾಯ ವಸ್ತ್ರ ಧಾರಣೆ ಕಾರ್ಯಕ್ರಮ ನಡೆಯಿತು, ಅದರ ನಂತರ ಪ್ರಣವ ಮಹಾವಾಖ್ಯೋಪದೇಶ ನಡೆಯಿತು.

ಕಾಂಚಿ ಕಾಮಕೋಟಿ ಪೀಠಾಧೀಶರನ್ನೂ ಒಳಗೊಂಡಂತೆ ರಾಜ್ಯದ ವಿವಿಧ ಭಾಗದ 11 ಯತಿಗಳ ಸಮ್ಮುಖದಲ್ಲಿ ಸ್ವರ್ಣವಲ್ಲೀ ಪೀಠದ 54ನೇ ಯತಿಗಳಾದ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿ ಅವರು ನೂತನ ಯತಿಗಳಿಗೆ ಆನಂದ ಬೋಧೇಂದ್ರ ಸರಸ್ವತೀ ಸ್ವಾಮೀಜಿ ಎಂದು ಮೂರು ಬಾರಿ ಘೋಷಿಸುವ ಮೂಲಕ ನಾಮಕರಣ ಮಾಡಿದರು.
ಸುಮಾರು ಮೂವತ್ತು ಸಾವಿರಕ್ಕೂ ಹೆಚ್ಚಿನ ಭಕ್ತರು ಹರ್ಷೋದ್ಘಾರದ ಮೂಲಕ ನೂತನ ಯತಿಗಳನ್ನು ಸ್ವಾಗತಿಸಿದರು. ನಂತರ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಪರ್ಯಂಕಶೌಚ, ಮಠದಲ್ಲಿ ಯೋಗ ಪಟ್ಟ, ಬ್ರಹ್ಮವಿದಾಶೀರ್ವಚನ ನಡೆಯಿತು. ಯತಿಗಳಾದ ಎಡತೊರೆ ಶ್ರೀಶಂಕರ ಭಾರತೀ‌ ಮಹಾ ಸ್ವಾಮೀಜಿ, ಬೆಂಗಳೂರಿನ‌ ಕೂಡ್ಲಿ ಶೃಂಗೇರಿ‌ ಮಠದ ವಿದ್ಯಾ ವಿಶ್ವೇಶ್ವರ ಭಾರತೀ ‌ಮಹಾ‌ ಸ್ವಾಮೀಜಿ, ಹರಿಹರ ಪುರದ ಶ್ರೀಸ್ವಯಂಪ್ರಕಾಶ ಸಚ್ಚಿದಾನಂದ ಸ್ವರೂಪಿ‌ ಮಹಾ ಸ್ವಾಮೀಜಿ,‌ ಹೊಳೆ‌ನರಸೀಪುರದ ಶ್ರೀಪ್ರಕಾಶಾನಂದೇಂದ್ರ ಮಹಾ ಸ್ವಾಮೀಜಿ , ಶ್ರೀಮನ್ನೆಲಮಾವು ಮಠದ ಶ್ರೀಮಾಧವಾನಂದ‌ ಭಾರತೀ‌‌ ಮಹಾ‌ ಸ್ವಾಮೀಜಿ, ತುರುವೇಕೇರೆಯ ಶ್ರೀಪ್ರಣವಾನಂದ ತೀರ್ಥ ಮಹಾ ಸ್ವಾಮೀಜಿ ಹಾಗೂ ಹಲವು ವಿದ್ವಾಂಸರು ಸೇರಿದಂತೆ ಶ್ರೀಮಠದ ಭಕ್ತರು, ಶಿಷ್ಯ ವರ್ಗದವರು ಶಿಷ್ಯ ಸ್ವೀಕಾರ ಮಹೋತ್ಸವಕ್ಕೆ ಸಾಕ್ಷಿಯಾದರು.

ಪ್ರಮುಖ ಸುದ್ದಿ :-   ದೆಹಲಿಯಲ್ಲಿ ಮತ್ತೆ ಕಾಂಗ್ರೆಸ್ಸಿಗೆ ಆಘಾತ : ಪಕ್ಷಕ್ಕೆ ರಾಜೀನಾಮೆ ನೀಡಿದ ಇಬ್ಬರು ಹಿರಿಯ ನಾಯಕರು

ಫೆ. 18ರಿಂದ ಶಿಷ್ಯ ಸ್ವೀಕಾರ ಮಹೋತ್ಸವ ಕಾರ್ಯಕ್ರಮ ನಡೆಯಿತು. ಇಂದು (ಗುರುವಾರ) ಕೊನೇ ದಿನ ಶಿಷ್ಯ ಸ್ವೀಕಾರ ಕಾರ್ಯಕ್ರಮ ನಡೆಯಿತು. ಶೋಭನ ಸಂವತ್ಸರದ ಮಾಘ ಶುಕ್ಲ ತ್ರಯೋದಶಿಯಾದ ಗುರುವಾರ ಬೆಳಗ್ಗೆ 10ರಿಂದ 10:10ರ ಅವಧಿಯಲ್ಲಿ ನೂತನ ಶ್ರೀಗಳಿಗೆ ಸನ್ಯಾಸ ದೀಕ್ಷೆ ನೀಡಲಾಯಿತು. ನಂತರ ನಾಮಕರಣ ಮಾಡಲಾಯಿತು.
ಇದಕ್ಕೂ ಮೊದಲು ಗುರುವಾರ ಬೆಳಿಗ್ಗೆ 6:40ರ ಸುಮಾರಿಗೆ ಶ್ರೀಮಠದಿಂದ ಸುಮಾರು ಒಂದು‌ ಕಿ.ಮೀ. ದೂರದ ಶಾಲ್ಮಲಾ‌ ನದಿಯತ್ತ ಜಲಾಶಯಗಮನ ಮಾಡಲಾಯಿತು. ಬಳಿಕ ನೂತನ ಉತ್ತರಾಧಿಕಾರಿಗಳು ಸ್ನಾನ ಪೂರ್ಣಗೊಳಿಸಿ ಮೇಲ್ಮುಖವಾಗಿ ಯಜ್ಞೋಪವಿತ ತೆಗೆದು, ತಲೆಯ ಮೇಲಿ‌ನ ಆರು‌ ಕೂದಲನ್ನು ಹರಿದು, ಸಂಸಾರ ಸಹಿತ, ಸರ್ವಸ್ವವನ್ನೂ ತ್ಯಾಗ ಮಾಡಿ ಏಳು ಹೆಜ್ಜೆ ಇಟ್ಟರು.

ಪ್ರಪಂಚ ಬಂಧನ ಬಿಟ್ಟು ಸಚ್ಚಿದಾನಂದ ಸ್ವರೂಪಿಯಾದ ಅವರಿಗೆ ಸ್ವರ್ಣವಲ್ಲೀ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳು ಕಾಷಾಯ ವಸ್ತ್ರ ನೀಡಿದರು. ನಂತರ ಸಾವಿತ್ರೀ ಪ್ರವೇಶ, ಪ್ರೇಶೋಚ್ಛಾರಣೆ, ಬ್ರಹ್ಮ ದಂಡದ ಧಾರಣೆ ಕೂಡ ಮಾಡಲಾಯಿತು.
ಬೆಳಿಗ್ಗೆ 10:30ಕ್ಕೆ ಶಾಲ್ಮಾಲಾ ನದಿ ತಟದಲ್ಲಿ‌ ನೂತನ ಯತಿಗಳು ಭೂ ಸ್ಪರ್ಶ ಮಾಡಿದರು. ಅಲ್ಲಿಂದ ವೈದಿಕರ ವೇದ ಘೋಷ, ವಾದ್ಯಗಳು ಹಾಗೂ ನಾಲ್ಕು ಸಾವಿರಕ್ಕೂ ಅಧಿಕ ಮಾತೆಯರಿಂದ ಪೂರ್ಣ ಕುಂಭ ಸ್ವಾಗತದ ಮೂಲಕ ನೂತನ ಯತಿಗಳನ್ನು, ಸ್ವರ್ಣವಲ್ಲೀ ಹಾಗೂ ಇತರ ಮಠಗಳ ಯತಿಗಳನ್ನು ಶ್ರೀಮಠಕ್ಕೆ ಬರ ಮಾಡಿಕೊಳ್ಳಲಾಯಿತು. ಶ್ರೀಮಠಕ್ಕೆ ಆಗಮಿಸಿದ ಬಳಿಕ ಆರಾಧ್ಯ ದೇವರ ದರ್ಶನ ಪಡೆದು ಗುರುಮೂರ್ತಿ ಭವನಕ್ಕೆ ತೆರಳಿದರು. ಬಳಿಕ ಶಂಖ ಸ್ನಾನ, ಪ್ರಣವ ಮಹಾ ವಾಕ್ಯೋಪದೇಶ ನೀಡಿ ನೂತನ ಶ್ರೀಗಳಿಗೆ ನಾಮಕರಣವನ್ನು ಸ್ವರ್ಣವಲ್ಲೀ ಶ್ರೀಗಳು‌ ಮಾಡಿದರು. ಪರ್ಯಂಕಶೌಚ, ಯೋಗ‌ಪಟ್ಟ, ಬ್ರಹ್ಮವಿದಾಶೀರ್ವಚನ ನಡೆಸಲಾಯಿತು.

ಪ್ರಮುಖ ಸುದ್ದಿ :-   ಎಸ್‌ಐಟಿ ನೋಟಿಸ್​: ವಿಚಾರಣೆಗೆ ಹಾಜರಾಗಲು ಸಮಯ ಕೇಳಿದ ಪ್ರಜ್ವಲ್‌ ; ಪತ್ರದಲ್ಲೇನಿದೆ..?

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement