ಬೆಳಗಾವಿ : ಕಾರು ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮುಗಳಖೋಡ ಕಾಲುವೆ ಬಳಿ ಜತ್ತ-ಜಾಂಬೋಟಿ ರಸ್ತೆಯಲ್ಲಿ ಸಂಭವಿಸಿದೆ ಎಂದು ವರದಿಯಾಗಿದೆ.
ಗುರ್ಲಾಪುರದ ಮಲ್ಲಿಕಾರ್ಜುನ ಮರಾಠೆ (16), ಲಕ್ಷ್ಮೀ ಮರಾಠೆ(19 ), ಆಕಾಶ ಮರಾಠೆ(19), ಬೈಕ್ ಸವಾರರಾದ ನಿಪನಾಳ ಗ್ರಾಮದ ಶ್ರೀಕಾಂತ ಪಡತರಿ(22) ಹಾಗೂ ಮುಗಳಖೋಡ ನಿವಾಸಿ ನಾಗಪ್ಪ ಯಡವನ್ನವರ್(48) ಮೃತರು ಎಂದು ಗುರುತಿಸಲಾಗಿದೆ.
ಬೈಕ್‌ಗೆ ಡಿಕ್ಕಿಯಾದ ಬಳಿಕ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿದೆ. ಗುರ್ಲಾಪುರ ಕಡೆಯಿಂದ ಮುಗಳಖೋಡದತ್ತ ಹೊರಟಿದ್ದ ಕಾರು ಬೈಕ್‌ಗೆ ಗುದ್ದಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿದೆ ಎಂದು ಹೇಳಲಾಗಿದೆ. ಮೃತ ಐವರ ಪೈಕಿ ಮೂವರು ಒಂದೇ ಕುಟುಂಬದವರಾಗಿದ್ದಾರೆ. ಈ ಕುರಿತು ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ