ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ‘40% ಕಮಿಷನ್’ ಆರೋಪದ ಪ್ರಕರಣ : ನ್ಯಾಯಾಲಯದಿಂದ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಶಿವಕುಮಾರಗೆ ಸಮನ್ಸ್ ಜಾರಿ

ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರರ ವಿರುದ್ಧ “40 ಪರ್ಸೆಂಟ್ ಕಮಿಷನ್” ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಬೆಂಗಳೂರಿನ ನ್ಯಾಯಾಲಯವು ಸಮನ್ಸ್‌ ಜಾರಿ ಮಾಡಿದೆ. ಮಾತ್ರವಲ್ಲದೇ ಖುದ್ದು ಹಾಜರಾಗುವಂತೆ ಸೂಚನೆ ನೀಡಿದೆ.
ಕಳೆದ ವರ್ಷ ಕರ್ನಾಟಕ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ, ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲು ಕಾಂಗ್ರೆಸ್ 40 ಪರ್ಸೆಂಟ್ ಕಮಿಷನ್ ಆರೋಪಗಳನ್ನು ಬಳಸಿಕೊಂಡಿತ್ತು. ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲು ಕಾಂಗ್ರೆಸ್ ಬಿಜೆಪಿ 40% ಕಮಿಷನ್‌ ಸರ್ಕಾರ ಎಂದು ಅಭಿಯಾನ ನಡೆಸಿತ್ತು. ಅಲ್ಲದೆ, ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ “ಪೇಸಿಎಂ” ಪೋಸ್ಟರ್‌ಗಳನ್ನು ಸಹ ಹಾಕಿತ್ತು ಹಾಗೂ ಭ್ರಷ್ಟಾಚಾರ ರೇಟ್ ಕಾರ್ಡ್ ಜಾಹೀರಾತು ನೀಡಿತ್ತು.

ಬಿಜೆಪಿಯ ಕಾನೂನು ಘಟಕದ ವಕೀಲ ವಿನೋದಕುಮಾರ ಅವರು ಜಾಹೀರಾತುಗಳ ಕುರಿತು ಕಾಂಗ್ರೆಸ್ ನಾಯಕರ ವಿರುದ್ಧ ದೂರು ದಾಖಲಿಸಿದ್ದಾರೆ ಮತ್ತು ಮಾರ್ಚ್ 28 ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಲಾಗಿದೆ.
ಕಳೆದ ವಾರ ಕರ್ನಾಟಕ ಉಚ್ಚ ನ್ಯಾಯಾಲಯವು “ಶೇ. 40 ಕಮಿಷನ್” ಆರೋಪಗಳ ತನಿಖೆಯನ್ನು ಆರು ವಾರಗಳಲ್ಲಿ ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು.
ಕಳೆದ ವರ್ಷ ಮೇ ತಿಂಗಳಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೂರು ತಿಂಗಳ ನಂತರ, ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧದ ಆರೋಪಗಳ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಿತು.

ಪ್ರಮುಖ ಸುದ್ದಿ :-   ಮನೆಯಲ್ಲೇ ಕಾಡುಕೋಣದ ಮಾಂಸ, ಜಿಂಕೆ ಕೊಂಬು ಇರಿಸಿಕೊಂಡಿದ್ದ ಇಬ್ಬರ ಬಂಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement